LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಆರ್ಚರಿ ಟ್ರಯಲ್ಸ್: ದೀಪಿಕಾಗೆ ಅಗ್ರಸ್ಥಾನ

ಸೋನಿಪತ್: ತಾಯಿಯಾದ ನಂತರ ಕಳೆದ ವರ್ಷ ಇಡೀ ಋತುವನ್ನು ಕಳೆದುಕೊಂಡಿದ್ದ ವಿಶ್ವದ ಮಾಜಿ ನಂಬರ್ ಒನ್ ಆರ್ಚರಿ ಪಟು ದೀಪಿಕಾ ಕುಮಾರಿ ಅವರು ಮುಂಬರುವ ವಿಶ್ವಕಪ್ ಮತ್ತು ಪ್ಯಾರಿಸ್ ಒಲಿಂಪಿಕ್ಸ್‍ಗಾಗಿ ಇಲ್ಲಿ ನಡೆಯುತ್ತಿರುವ ಆಯ್ಕೆ ಟ್ರಯಲ್ಸ್‍ನಲ್ಲಿ ಅಗ್ರಸ್ಥಾನ ಪಡೆದರು.

2022ರಲ್ಲಿ ತಾಯಿಯಾದ ಅವರು, 20 ತಿಂಗಳು ಸ್ಪರ್ಧಾಕಣದಿಂದ ದೂರವಿದ್ದು ಫೆಬ್ರುವರಿಯಲ್ಲಿ ಏಷ್ಯಾ ಕಪ್‍ನ ಬಾಗ್ದಾದ್ ಲೆಗ್‍ನಲ್ಲಿ ಕಣಕ್ಕೆ ಇಳಿದಿದ್ದ ದೀಪಿಕಾ ಅವರು ಎರಡು ಚಿನ್ನ ಗೆದ್ದಿದ್ದರು. ದೀಪಿಕಾ ಅವರನ್ನು ಒಳಗೊಂಡ ನಾಲ್ಕು ಸದಸ್ಯರ ತಂಡದಲ್ಲಿ ಭಜನ್ ಕೌರ್, ಅಂಕಿತಾ ಭಕತ್ ಮತ್ತು ಕೋಮಲಿಕಾ ಬಾರಿ ಇದ್ದಾರೆ.

ಪುರುಷರ ವಿಭಾಗದಲ್ಲಿ ಪ್ಯಾರಿಸ್ ಒಲಿಂಪಿಕ್ ಕೋಟಾವನ್ನು ಪಡೆದಿರುವ ಏಕೈಕ ಭಾರತೀಯ ಧೀರಜ್ ಬೊಮ್ಮದೇವರ ಅವರು ರಿಕರ್ವ್ ವಿಭಾಗದಲ್ಲಿ ಅಗ್ರಸ್ಥಾನ ಪಡೆದರು. ತರುಣದೀಪ್ ರೈ, ಪ್ರವೀಣ್ ಜಾಧವ್ ಮತ್ತು ಮೃಣಾಲ್ ಚೌಹಾಣ್ ಪುರುಷರ ರಿಕರ್ವ್ ತಂಡದ ಇತರ ಸದಸ್ಯರಾಗಿದ್ದಾರೆ.

ಪ್ಯಾರಿಸ್ ಒಲಿಂಪಿಕ್ಸ್‍ಗಾಗಿ ಮಹಿಳಾ ವಿಭಾಗದಲ್ಲಿ ಭಾರತವು ಇನ್ನೂ ಕೋಟಾವನ್ನು ಪಡೆದುಕೊಂಡಿಲ್ಲ. ಜುಲೈ ಮತ್ತು ಆಗಸ್ಟ್‍ನಲ್ಲಿ ಒಲಿಂಪಿಕ್ಸ್ ನಡೆಯಲಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು