LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಶೀತಲ್, ಶಮಿಗೆ ಒಲಿದ `ಅರ್ಜುನ' 26 ಕ್ರೀಡಾಪಟುಗಳಿಗೆ ವಿವಿಧ ಪ್ರಶಸ್ತಿ ಪುರಸ್ಕಾರ

ನವದೆಹಲಿ: ಚೀನಾದ ಹಾಂಗ್‍ಝೌನಲ್ಲಿ ನಡೆದ ಪ್ಯಾರಾ ಏಷ್ಯನ್ ಕ್ರೀಡಾಕೂಟದ ಮಹಿಳೆಯರ ಆರ್ಚರಿಯಲ್ಲಿ ಚಿನ್ನ ಗೆದ್ದಿದ್ದ ಶೀತಲ್ ದೇವಿ ಮತ್ತು ಏಕದಿನ ವಿಶ್ವಕಪ್ ಕ್ರಿಕೆಟ್‍ನಲ್ಲಿ ಅಮೋಘ ಬೌಲಿಂಗ್ ಮಾಡಿದ್ದ ವೇಗಿ ಮೊಹಮ್ಮದ್ ಶಮಿ ಅವರಿಗೆ ಪ್ರತಿಷ್ಠಿತ ಅರ್ಜುನ ಪ್ರಶಸ್ತಿ ಲಭಿಸಿದೆ.

ದೇಶದ ಅತ್ಯುನ್ನತ ಕ್ರೀಡಾಪ್ರಶಸ್ತಿಯಾದ ಖೇಲ್ ರತ್ನ ಗೌರವಕ್ಕೆ ಬ್ಯಾಡ್ಮಿಂಟನ್ ಜೋಡಿ ಚಿರಾಗ್ ಶೆಟ್ಟಿ ಮತ್ತು ಸಾತ್ವಿಕ್ ಸಾಯಿರಾಜ್ ಭಾಜನರಾಗಿದ್ದಾರೆ. ಕೇಂದ್ರ ಕ್ರೀಡಾ ಸಚಿವಾಲಯವು ಒಟ್ಟು 26 ಕ್ರೀಡಾ ಸಾಧಕರನ್ನು ಅರ್ಜುನ ಪ್ರಶಸ್ತಿಗೆ ಆಯ್ಕೆ ಮಾಡಿದೆ. ಅದರಲ್ಲಿ ಏಷ್ಯನ್ ಮತ್ತು ಪ್ಯಾರಾ ಏಷ್ಯನ್ ಕ್ರೀಡಾಕೂಟದ ಸಾಧಕರದ್ದೇ ಸಿಂಹಪಾಲು.

ಶೂಟರ್ ಐಶ್ವರಿ ಪ್ರತಾಪ್ ಸಿಂಗ್ ತೋಮರ್, ಕುಸ್ತಿಪಟು ಅಂತಿಮ ಪಂಘಾಲ್ ಮತ್ತು ಸುನಿಲ್ ಕುಮಾರ್, ಟೇಬಲ್ ಟೆನಿಸ್ ಆಟಗಾರ್ತಿ ಐಹಿಕಾ ಮುಖರ್ಜಿ ಅವರಿಗೂ ಅರ್ಜುನ ಪ್ರಶಸ್ತಿ ಲಭಿಸಿದೆ. ತಮಿಳುನಾಡಿನ ಚೆಸ್ ಗ್ರ್ಯಾಂಡ್ ಮಾಸ್ಟರ್ ಆರ್. ವೈಶಾಲಿ, ಕೋಚ್ ಆರ್.ಬಿ. ರಮೇಶ್ ಅವರಿಗೆ ಕ್ರಮವಾಗಿ ಅರ್ಜುನ ಮತ್ತು ದ್ರೋಣಾಚಾರ್ಯ ಪ್ರಶಸ್ತಿ ಲಭಿಸಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು