LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಮೋಜು ಮಸ್ತಿಗಾಗಿ ರಾತ್ರಿ ವೇಳೆ ದರೋಡೆ: ಖತರ್ನಾಕ್ ಕಳ್ಳರ ಬಂಧನ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ದ್ವಿಚಕ್ರ ವಾಹನ ಸವಾರರನ್ನು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಬೆದರಿಸಿ, ಮೊಬೈಲ್ ಹಾಗೂ ಹಣ ದೋಚುತ್ತಿದ್ದ ಮೂವರು ಖತರ್ನಾಕ್ ಖದೀಮರು ಈಗ ಪೊಲೀಸರ ಅತಿಥಿಯಾಗಿದ್ದಾರೆ.ಏ.14 ರಂದು ರಾತ್ರಿ 11.30 ರ ಸುಮಾರಿಗೆ ಆಲೂರು ದುದ್ದನಹಳ್ಳಿ ನಿವಾಸಿ ಅಮರ್ ಹಾಗೂ ಕೋಡಿಹಳ್ಳಿ ನಿವಾಸಿ ಅನಿಲ್ ಎಂಬುವರು ಬೈಕಿನಲ್ಲಿ ಸೊಣ್ಣಪ್ಪನಹಳ್ಳಿಗೆ ಮಾರ್ಗವಾಗಿ ಹೋಗುತ್ತಿದ್ದಾಗ ಮೂವರು ಆರೋಪಿಗಳು ವಾಹನ ಅಡ್ಡಗಟ್ಟಿ, ಮಾರಕಾಸ್ತ್ರಗಳಿಂದ ಬೆದರಿಸಿದ್ದಾರೆ.

ಆಗ ಬೈಕ್ ಸವಾರರಿಬ್ಬರು ತಮ್ಮ ಬಳಿಯಿದ್ದ ಮೊಬೈಲ್, ಹಣ ಕೊಡಲು ಹೋದಾಗ ಸುತ್ತಲಿನ ಗ್ರಾಮಗಳ ಜನರು ತಕ್ಷಣ ಆಗಮಿಸಿ, ಆರೋಪಿಗಳನ್ನು ಹಿಡಿದು ಗ್ರಾಮಾಂತರ ಪೊಲೀಸರಿಗೆ ಒಪ್ಪಿಸಿದ್ದಾರೆ.ಯಲಹಂಕ ತಾಲ್ಲೂಕಿನ ಚಿಕ್ಕಜಾಲದ ರಂಗಸ್ವಾಮಿ ಕ್ಯಾಂಪಿನ ನಿವಾಸಿ ಆಕಾಶ್(19), ಟೆಲಿಕಾಂ ಲೇಔಟ್ ನಿವಾಸಿ ಪ್ರವೀಣ್(18) ಹಾಗೂ ಜಾಲ ಹೋಬಳಿಯ ಮಾರನಾಯಕನಹಳ್ಳಿ ನಿವಾಸಿ ಹನುಮಂತ ಎಸ್.ಡಿ (22) ಬಂಧಿತ ಆರೋಪಿಗಳು.

ಬಂಧಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ಬಳಿಕ ರೂ.4.20 ಲಕ್ಷ ಬೆಲೆ ಬಾಳುವ ವಿವಿಧ ಕಂಪನಿಗಳ 20 ಮೊಬೈಲ್ ಫೋನ್ ಹಾಗೂ ಬೈಕ್ ವಶಪಡಿಸಿಕೊಳ್ಳಲಾಗಿದೆ ಎಂದು ಗ್ರಾಮಾಂತರ ಪೊಲೀಸ್ ಠಾಣೆ ಸರ್ಕಲ್ ಇನ್ ಸ್ಪೆಕ್ಟರ್ ಸಾದಿಕ್ ಪಾಷಾ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಆರೋಪಿಗಳಿಂದ ವಶಪಡಿಸಿಕೊಂಡಿ ರುವ ಮೊಬೈಲ್ ಗಳನ್ನು ಪರಿಶೀಲಿಸಿ ವಾರಸುದಾರರಿಗೆ ಒಪ್ಪಿಸಲಾಗುವುದು ಎಂದು ಅವರು ಹೇಳಿದರು.

ಪ್ರಕರಣವನ್ನು ಗಂಭೀರವಾಗಿ ಪರಿಣಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಹೆಚ್ಚುವರಿ ಎಸ್ಪಿ ಪುರುಷೋತ್ತಮ್, 2ನೇ ಹೆಚ್ಚುವರಿ ಎಸ್ಪಿ ನಾಗರಾಜ್ ಕೆ.ಎಸ್., ಡಿವೈಎಸ್ಪಿ ಪಿ.ರವಿ ಮಾರ್ಗದರ್ಶನದಲ್ಲಿ ಗ್ರಾಮಾಂತರ ಠಾಣೆ ಇನ್ ಸ್ಪೆಕ್ಟರ್ ಸಾದಿಕ್ ಪಾಷಾ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಲಾಗಿತ್ತು.

ತನಿಖಾ ತಂಡದಲ್ಲಿ ಪಿಎಸ್‍ಐ ರವಿ ಟಿ.ಎನ್, ಸಿಬ್ಬಂದಿಗಳಾದ ಅರ್ಜುನ್ ಲಮಾಣಿ, ಪ್ರವೀಣ್, ಸಚಿನ್ ಉಪ್ಪಾರ್ ಅವರು ಆರೋಪಿಗಳಿಂದ ಹೆಚ್ಚಿನ ಮಾಲು ವಶಪಡಿಸಿಕೊಂಡಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ ಮೂರುದಿನಗಳ ಕಾಲ ಪೋಲಿಸ್ ಕಸ್ಟಡಿಗೆ ಪಡೆಯಲಾಗಿದೆ ಎಂದು ಮಾಹಿತಿ ನೀಡಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು