LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಸುರೇಶ್, ರಾಮಚಂದ್ರಗೌಡರಿಂದ ನಮ್ಮನ್ನು ಬಂಧಿಸಿ ಅಭಿಯಾನ

ಬೆಂಗಳೂರು: ಕಾಂಗ್ರೆಸ್ ಸರಕಾರದ ಶ್ರೀರಾಮವಿರೋಧಿ, ಹಿಂದೂ ವಿರೋಧಿ ನೀತಿಯನ್ನು ಖಂಡಿಸಿ `ನಾನೊಬ್ಬ ಕರಸೇವಕ, ನನ್ನನ್ನೂ ಬಂಧಿಸಿ' ಎಂಬ ಅಭಿಯಾನದಡಿ ಮಾಜಿ ಸಚಿವ ಎಸ್.ಸುರೇಶ್ ಕುಮಾರ್ ಹಾಗೂ ಮಾಜಿ ಸಚಿವ ಬಿಜೆಪಿ ಹಿರಿಯ ಮುಖಂಡ ರಾಮಚಂದ್ರಗೌಡ ಅವರು ಇಂದು ಮಲ್ಲೇಶ್ವರ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದ್ದಾರೆ.

ಅಯೋಧ್ಯೆ ಅಭಿಯಾನದ ಘಟನಾವಳಿಗಳಿಗೆ ನಾನು ಕೂಡ ಸಾಕ್ಷಿಯಾಗಿದ್ದೆ. ಇದೀಗ ಸರಕಾರವು ಕರಸೇವಕರನ್ನು ಬಂಧಿಸುತ್ತಿದೆ. ಇದನ್ನು ವಿರೋಧಿಸಿ ನಾನು ಪ್ರತಿಭಟನೆಗೆ ಬಂದಿದ್ದೇನೆ ಎಂದು ಎಸ್.ಸುರೇಶ್ ಕುಮಾರ್ ಅವರು ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.

ಮಂದಿರ ವಹೀ ಬನಾಯೇಂಗೇ ಎಂಬುದು ನಮ್ಮ ಘೋಷವಾಕ್ಯವಾಗಿತ್ತು. ಇವತ್ತು ಮಂದಿರವಲ್ಲೇ ಕಟ್ಟಿದೆವು ಎಂಬ ಕಾಲಕ್ಕೆ ಬಂದಿದ್ದೇವೆ. ಜನವರಿ 22ರಂದು ಮಂದಿರದ ಉದ್ಘಾಟನೆ ಹಾಗೂ ಶ್ರೀರಾಮಲಲಾನ ವಿಗ್ರಹ ಪ್ರತಿಷ್ಠಾಪನೆ ನಡೆಯಲಿದೆ. ಸಹಜವಾಗಿ ಇಲ್ಲಿನ ಕಾಂಗ್ರೆಸ್ ಸರಕಾರಕ್ಕೆ ಇದನ್ನು ತಡೆದುಕೊಳ್ಳಲು ಆಗುತ್ತಿಲ್ಲ ಎಂದು ಟೀಕಿಸಿದರು.

30 ವರ್ಷಗಳ ಹಿಂದಿನ ಕೇಸನ್ನು ರೀ ಓಪನ್ ಮಾಡಿ ಕರಸೇವಕರನ್ನು ಸರಕಾರ ಬಂಧಿಸುತ್ತಿದೆ. ಈಗ ಬಂಧಿಸುವ ಅಗತ್ಯ ಏನಿತ್ತು ಎಂದು ಪ್ರಶ್ನಿಸಿದರು. ಈಗಿನದು ಬಿಜೆಪಿ ಶ್ರೀರಾಮ ಎಂದು ಕಾಂಗ್ರೆಸ್‍ನವರು ಹೇಳುತ್ತಾರೆ. ಹಾಗಿದ್ದರೆ ಡಿಸೆಂಬರ್ 6ಕ್ಕೆ ಮೊದಲು ಇದ್ದುದು ಕಾಂಗ್ರೆಸ್ ಮಸೀದಿಯೇ ಎಂದು ಅವರು ಮಾಧ್ಯಮದವರ ಪ್ರಶ್ನೆಗೆ ಉತ್ತರವಾಗಿ ಕೇಳಿದರು.

ಹರಿಪ್ರಸಾದ್ ಅವರ ಹೇಳಿಕೆಯು ಅವರ ಕೆಳಮಟ್ಟದ ಮನಸ್ಥಿತಿಯನ್ನು ತೋರಿಸುತ್ತದೆ. ಹಿಂದೆ ನರೇಂದ್ರ ಮೋದಿಯವರಿಗೆ ಬೈದದ್ದು ಗೊತ್ತಿದೆ ಎಂದು ಈ ಸಂಬಂಧ ಪ್ರಶ್ನೆಗೆ ಉತ್ತರ ಕೊಟ್ಟರು. ಇವತ್ತು ಯಾರನ್ನಾದರೂ ಕ್ರಿಮಿನಲ್ ಎನ್ನಲು ಕಾಂಗ್ರೆಸ್ಸಿಗರು ಸಿದ್ಧರಾಗಿದ್ದಾರೆ ಎಂದು ಇನ್ನೊಂದು ಪ್ರಶ್ನೆಗೆ ಉತ್ತರಿಸಿದರು.

30 ವರ್ಷಗಳಷ್ಟು ಹಿಂದಿನ ಪ್ರಕರಣಕ್ಕೆ ಇವತ್ತು ಯಾಕೆ ಜೀವ ಕೊಟ್ಟಿದ್ದೀರಿ?ಅವರು ಕರಸೇವಕ ಎಂಬ ಕಾರಣಕ್ಕೇ ರೀಓಪನ್ ಮಾಡಿದ್ದಾಗಿ ನಮ್ಮ ಬಲವಾದ ನಂಬಿಕೆ ಎಂದು ತಿಳಿಸಿದರು.ಸ್ಥಳದಲ್ಲಿದ್ದ ಕಾರ್ಯಕರ್ತರು ಇದೇವೇಳೆ ಜೈ ಶ್ರೀರಾಮ್, ಜೈಜೈ ಶ್ರೀರಾಮ್ ಘೋಷಣೆಗಳನ್ನು ಕೂಗಿದರು. ಈ ಸಂದರ್ಭದಲ್ಲಿ ರಾಮಚಂದ್ರಗೌಡ ಹಾಗೂ ಸುರೇಶ್ ಕುಮಾರ್ ಅವರನ್ನು ಪೊಲೀಸರು ವಶಕ್ಕೆ ಪಡೆದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು