LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Chamarajanagara

ಅಂತರ್ಜಲ ಜಾಗೃತಿ ಕುರಿತು ನಡೆದ ಚಿತ್ರಕಲಾ ಸ್ಪರ್ಧೆ


ಚಾಮರಾಜನಗರ: ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ಹಾಗೂ ಶಾಲಾ ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ‘ನೀರಿದ್ದರೆ ನಾಳೆ’ ಎಂಬ ಘೋಷವಾಕ್ಯದಡಿ ‘ನಮ್ಮ ಭೂಮಿ-ನಮ್ಮ ನೀರು-ನಮ್ಮ ಶಕ್ತಿ’ ವಿಷಯ ಕುರಿತು ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಚಿತ್ರ ಕಲಾ ಸ್ಪರ್ಧೆಯನ್ನು ಸೋಮವಾರ (ಆ.10) ನಗರದ ಸರ್ಕಾರಿ ಪೇಟೆ ಶಾಲೆ ಆವರಣದಲ್ಲಿ ಏರ್ಪಡಿಸಲಾಗಿತ್ತು. ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಕೇತ್ರ ಶಿಕ್ಷಣಾಧಿಕಾರಿ ಹನುಮಶೆಟ್ಟಿ ಅವರು ಪ್ರಸ್ತುತ ಪೆಸಿಫಿಕ್ ಮಹಾಸಾಗರದಲ್ಲಿ ಉಷ್ಣಾಂಶ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ‘ಎಲ್ ನಿನೋ’ ವಿದ್ಯಮಾನದಿಂದ ಭಾರತದಲ್ಲಿ ದುರ್ಬಲ ಮುಂಗಾರು ಉಂಟಾಗುವ ಸಾಧ್ಯತೆಯಿದೆ. ಇದರಿಂದ ಜಲಮೂಲಗಳ ಮೇಲೆ ಒತ್ತಡ ಹೆಚ್ಚಾಗುವುದರಿಂದ ನೀರಿನ ಸಂರಕ್ಷಣೆ, ಸದ್ಬಳಕೆ, ನಿರ್ವಹಣೆ, ಮಳೆನೀರು ಕೊಯ್ಲು ಹಾಗೂ ಅಂತರ್ಜಲ ಮರುಪೂರಣದ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ತಾಲೂಕು ಹಾಗೂ ಜಿಲ್ಲಾಮಟ್ಟದ ಚಿತ್ರ ಕಲಾ ಸ್ಪರ್ಧೆ ಆಯೋಜಿಸಲಾಗಿದೆ ಎಂದರು. ನೀರು ಅತ್ಯಂತ ಅಮೂಲ್ಯವಾದ ನೈಸರ್ಗಿಕ ಸಂಪನ್ಮೂಲವಾಗಿದ್ದು, ಲಭ್ಯತೆಗೆ ಅನುಗುಣವಾಗಿ ನೀರು ಬಳಸಬೇಕು. ಅಂತರ್ಜಲ ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ನೀರನ್ನು ಮಿತವಾಗಿ ಬಳಸಿ, ಸಂರಕ್ಷಿಸಿ ಮುಂದಿನ ಪೀಳಿಗೆಗೂ ಉಳಿಸಬೇಕು ಎಂದು ಕೇತ್ರ ಶಿಕ್ಷಣಾಧಿಕಾರಿ ಹನುಮಶೆಟ್ಟಿ ತಿಳಿಸಿದರು.ಹಿರಿಯ ಭೂವಿಜ್ಞಾನಿ ಪಿ.ಎಸ್ ಶೋಭಾರಾಣಿ ಅವರು ಮಾತನಾಡಿ ಮೇಲ್ಮೆöÊ ನೀರು ಮತ್ತು ಅಂತರ್ಜಲ ನಮ್ಮ ಜೀವನದ ಪ್ರಮುಖ ಜಲಸಂಪನ್ಮೂಲವಾಗಿದೆ. ಮರಗಳನ್ನು ಬೆಳೆಸಬೇಕು, ಮಳೆನೀರಿನ ಸಂಗ್ರಹಣೆ ಮಾಡಬೇಕು, ನೀರನ್ನು ವ್ಯರ್ಥ ಮಾಡದೆ ಮಿತ ಬಳಕೆ ಮಾಡಬೇಕು, ಮಳೆನೀರನ್ನು ಸಂಗ್ರಹಿಸಿ ಭೂಮಿಗೆ ಇಂಗಿಸಬೇಕು ಮತ್ತು ಜಲ ಮೂಲಗಳನ್ನು ಮಾಲಿನ್ಯದಿಂದ ಕಾಪಾಡಬೇಕು. ಪರಿಸರ ಸಂರಕ್ಷಣೆಯ ಮೂಲಕ ಜೀವಜಲವನ್ನು ಸಂರಕ್ಷಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದರು.ಕಾರ್ಯಕ್ರಮದ ಅಂಗವಾಗಿ ನೀರಿನ ಸಂರಕ್ಷಣೆ, ಸದ್ಬಳಕೆ, ನಿರ್ವಹಣೆ, ಮಳೆನೀರು ಕೊಯ್ಲು ಹಾಗೂ ಅಂತರ್ಜಲ ಮರುಪೂರಣದ ಕುರಿತು ವಿದ್ಯಾರ್ಥಿಗಳಿಗೆ ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಚಿತ್ರಕಲಾ ಸ್ಪರ್ಧೆ ಏರ್ಪಡಿಸಲಾಗಿದ್ದು, ಸ್ಪರ್ಧಾ ವಿಜೇತರಿಗೆ ಆಗಸ್ಟ್ 15ರಂದು ನಡೆಯಲಿರುವ ಸ್ವಾತಂತ್ರ‍್ಯ ದಿನಾಚರಣೆಯ ಕಾರ್ಯಕ್ರಮದಲ್ಲಿ ನಗದು ಬಹುಮಾನ, ಪ್ರಶಸ್ತಿ ಪತ್ರವನ್ನು ವಿತರಿಸಲಾಗುತ್ತದೆ ಎಂದು ಹಿರಿಯ ಭೂವಿಜ್ಞಾನಿ ಪಿ.ಎಸ್ ಶೋಭಾರಾಣಿ ಅವರು ಹೇಳಿದರು.ಸರ್ಕಾರಿ ಪೇಟೆ ಶಾಲೆಯ ಮೂಖ್ಯೋಪಾಧ್ಯಾಯರಾದ ಸುನೀತಮ್ಮ, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST