LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

7ನೇ ದಿನಕ್ಕೆ ಕಾಲಿಟ್ಟ "ಆಶಾ" ಧರಣಿ

ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾದ  17 ಕಾರ್ಯಕರ್ತೆಯರು


ಬೆಂಗಳೂರು: ಗೌರವಧನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ  ನೇತೃತ್ವದಲ್ಲಿ ನಡೆಯುತ್ತಿರುವ ಆಶಾ ಕಾರ್ಯಕರ್ತೆಯರ ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ 7ನೇ ದಿನಕ್ಕೆ ಕಾಲಿಟ್ಟಿದ್ದು, ಚಳಿ ಮತ್ತು ಮೂಲಭೂತ ಸೌಕರ್ಯಗಳ ಕೊರತೆಯಿಂದಾಗಿ ಇದುವರೆಗೆ 17 ಮಂದಿ ಕಾರ್ಯಕರ್ತೆಯರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ನವೆಂಬರ್ 17ರಂದು ಆರಂಭವಾದ ಈ ಪ್ರತಿಭಟನೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿರುವ ಸಾವಿರಾರು ಆಶಾ ಕಾರ್ಯಕರ್ತೆಯರು ಪಾಲ್ಗೊಂಡಿದ್ದು, ಕಾರ್ಯಕರ್ತೆಯರ ಆರೋಗ್ಯದ ಮೇಲೆ ಪರಿಣಾಮ. ಫ್ರೀಡಂ ಪಾರ್ಕ್ನಲ್ಲಿ ಕೊರೆಯುವ ಚಳಿ, ಗಾಳಿ ಹಾಗೂ ಕುಡಿಯುವ ನೀರು, ಶೌಚಾಲಯ ಮತ್ತು ವಿಶ್ರಾಂತಿ ವ್ಯವಸ್ಥೆಗಳ ಕೊರತೆಯ ನಡುವೆಯೇ ಹಗಲು-ರಾತ್ರಿ ಧರಣಿ ನಡೆಸುತ್ತಿರುವುದರಿಂದ ಹಲವರ ಆರೋಗ್ಯದಲ್ಲಿ ಏರುಪೇರಾಗಿದೆ. 

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST