LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಧರ್ಮಸ್ಥಳದಲ್ಲಿ ಸಭೆಯಿಲ್ಲ ಅಡ್ಡಮತದಾನದ ಬಗ್ಗೆ ಅಶೋಕ್ ಸ್ಪಷ್ಟನೆ

ಬೆಂಗಳೂರು: ದೆಹಲಿ ಕರ್ನಾಟಕ ರಾಜ್ಯದ ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ ಶಾಸಕರು ನಡೆಸಿದ್ದಾರೆ ಎನ್ನಲಾಗಿದ್ದ ಅಡ್ಡಮತದಾನದ ಬಗ್ಗೆ ಅವರಿಂದ ಆಣೆ ಪ್ರಮಾಣ ಮಾಡಿಸುವ ಬಗ್ಗೆ ಯಾವುದೇ ರೀತಿಯ ಸಭೆಯನ್ನು ಧರ್ಮಸ್ಥಳದಲ್ಲಿ ಮಾಡುವುದಿಲ್ಲ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಸ್ಪಷ್ಟಪಡಿಸಿದ್ದಾರೆ ದೆಹಲಿಯಲ್ಲಿಂದು ಸುದ್ದಿಗಾರೊಂದಿಗೆ ಮಾತನಾಡಿರುವ ಅವರು, ಆಣೆ ಪ್ರಮಾಣ ಮಾಡುವ ಸಂಬಂಧ ಪಕ್ಷದ ರಾಜ್ಯಾಧ್ಯಕ್ಷರಿಂದ ಮಾತುಕೇಳಿಬಂದಿತ್ತು. ಆದರೆ ಕೆಲವು ಹಿರಿಯರು ಮಾಡಿರುವ ಸಲಹೆಯಂತೆ ಆಣೆ ಪ್ರಮಾಣ ಮಾಡಿಸುವಂತಹ ಕೆಲಸವನ್ನು ಪಕ್ಷದ ವತಿಯಿಂದ ಶಾಸಕಾಂಗ ಸಭೆ ನಡೆಸಿ ಮಾಡುವುದಿಲ್ಲ ಎಂದು ಹೇಳಿದ್ದಾರೆ. ಆಣೆ ಪ್ರಮಾಣ ವಿಷಯಕ್ಕೆ ಸಂಬಂಧಪಟ್ಟಂತೆ ಇದೀಗ ಧರ್ಮಸ್ಥಳದಲ್ಲಿ ಹೊಸದಾಗಿ ಏನೂ ಮಾಡುತ್ತಿಲ್ಲ. ಹಿಂದಿನಿAದಲೂ ಬಹಳ ಕಾಲದಿಂದ ಆಣೆ ಪ್ರಮಾಣಕ್ಕೆ ಧರ್ಮಸ್ಥಳ ಹೆಸರಾಗಿದೆ. ಹಾಗಾಗಿ ಈ ನಿರ್ಧಾರವನ್ನು ರಾಜ್ಯಾಧ್ಯಕ್ಷರು ಕೈಗೊಂಡಿದ್ದರು. ಇದೀಗ ಅದನ್ನು ಕೈಬಿಡಲಾಗುತ್ತಿದೆ. ಪಕ್ಷದ ವೇದಿಕೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ. ಚುನಾವಣಾ ಸಂದರ್ಭದಲ್ಲಿ ಭಿಕ್ಷುಕರಂತೆ ಗೋಗೆರೆದು ಟಿಕೆಟ್ ಪಡೆದು ಗೆದ್ದುಬಂದು ಇದೀಗ ಮೇಲ್ಮನೆ ಚುನಾವಣೆ ಸಂದರ್ಭದಲ್ಲಿ ಅಡ್ಡ ಮತದಾನದ ಮೂಲಕ ದ್ರೋಹವೆಸಗಿದ್ದಾರೆ. ಇಂತವರಿಗೆ ಕ್ಷಮೆಯಿಲ್ಲ. ಅವರಿಂದ ವಿರುದ್ಧ ತನಿಖೆ ನಡೆಸಿ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಹೇಳಿದ್ದಾರೆ.
ಇದೇ ಸಂದರ್ಭದಲ್ಲಿ ಕ್ರಾಸ್ ವೋಟಿಂಗ್‌ಗೆ ಸಂಬಂಧಪಟ್ಟಂತೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಅವರು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಹಳ ಹಿಂದಿನಿಂದಲೂ ಇಂತಹುದೇ ಕೆಲಸ ಮಾಡುತ್ತಿದ್ದಾರೆ. ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಭ್ರಷ್ಟಾಚಾರ ನಡೆಸಿ ಸರ್ಕಾರ ನಡೆಸಿದರೆ ಶಿವಕುಮಾರ್ ಅಧಿಕಾರಕ್ಕೆ ಬಂದ ದಿನದಿಂದಲೇ ಭ್ರಷ್ಟಾಚಾರದಲ್ಲಿ ತೊಡಗಿಸಿ ಕೊಂಡಿದ್ದಾರೆ ಎಂದು ಆರೋಪಿಸಿದರು. ಇಂದು ತಮ್ಮನ್ನು ಮೇಲ್ಮನೆ ಚುನಾವಣೆಗೆ ಸಂಬಂಧಪಟ್ಟಂತೆ ಮಾಹಿತಿ ಪಡೆಯಲು ರಾಷ್ಟ್ರೀಯ ಅಧ್ಯಕ್ಷರು ಕರೆದಿದರೂ ನಾನು ಪಕ್ಷದ ರಾಜ್ಯಾಧ್ಯಕ್ಷ ಹಾಗೂ ಮೇಲ್ಮನೆ ಮತ್ತು ಕೆಳಮನೆ ಪಕ್ಷದ ಮುಖ್ಯ ಸಚೇತಕರುದೆಹಲಿಗೆ ಬಂದಿದ್ದೇವೆ. ರಾಷ್ಟ್ರೀಯ ಅಧ್ಯಕ್ಷರು ಕೇಳುವ ಮಾಹಿತಿಗೆ ಸೂಕ್ತ ಉತ್ತರ ನೀಡಲಿದ್ದೇವೆ. ಇದಾದ ನಂತರ ಅವರು ನೀಡುವ ನಿರ್ದೇಶನಕ್ಕೆ ಬದ್ಧರಿರುತ್ತೇವೆ ಎಂದು ತಿಳಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು