LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಅಬಕಾರಿ ಇಲಾಖೆಯಲ್ಲಿ ಹಗರಣ, ತಿಮ್ಮಾಪುರ ರಾಜೀನಾಮೆಗೆ ಅಶೋಕ್ ಆಗ್ರಹ

ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ೨,೫೦೦ ಕೋಟಿ ರೂಪಾಯಿ ಹಗರಣ ನಡೆದಿದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಗಂಭೀರ ಆರೋಪ ಮಾಡಿದ್ದು, ಅಬಕಾರಿ ಸಚಿವ ಆರ್.ಬಿ ತಿಮ್ಮಾಪುರ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಸರ್ಕಾರವು ಇಲಾಖೆಗಳಿಗೆ ಆದಾಯ ಸಂಗ್ರಹ ಗುರಿಗಳನ್ನು ನಿಗದಿಪಡಿಸುತ್ತದೆ. ಆದರೆ, ಅಬಕಾರಿ ಇಲಾಖೆಯಲ್ಲಿ ಪರವಾನಗಿಗಳನ್ನು ಹರಾಜು ಹಾಕಲಾಗುತ್ತಿದೆ. ಅಬಕಾರಿ ಉಪ ಆಯುಕ್ತ ಜಗದೀಶ್ ನಾಯಕ್ ಅವರು ೨೫ ಲಕ್ಷ ರೂ. ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿಬಿದ್ದರು. ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇರ ಹೊಣೆ. ತಿಮ್ಮಾಪುರ ರಾಜೀನಾಮೆ ನೀಡದಿದ್ದರೆ, ಸಿದ್ದರಾಮಯ್ಯ ಅವರನ್ನೇ ಹೊಣೆಗಾರರನ್ನಾಗಿ ಪರಿಗಣಿಸಬೇಕಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ವಿಕಸಿತ್ ಭಾರತ್ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (ವಿಬಿ ಜಿ ರಾಮ್ ಜಿ) ಯೋಜನೆ ವಿರೋಧಿಸಲು ಮಹಾತ್ಮ ಗಾಂಧಿಯವರ ಹೆಸರನ್ನು ಬಳಸಿಕೊಳ್ಳುತ್ತಿದೆ. ಆದರೆ ಇಡೀ ರಾಜ್ಯವನ್ನು ವ್ಯಸನದಲ್ಲಿ ಮುಳುಗಿಸುವುದರ ಜತೆಗೆ ಗಾಂಧಿಯವರ ಆದರ್ಶಗಳನ್ನು ಹಾಳು ಮಾಡುತ್ತಿದೆ ಎಂದು ಟೀಕಿಸಿದ್ದಾರೆ.
ಅಐ-೭ ಪರವಾನಗಿಗೆ ೧.೨೫ ಕೋಟಿ ರೂ. ಲಂಚ ಕೇಳಲಾಗಿದೆ ಮತ್ತು ಅಐ-೨ ಪರವಾನಗಿಗೆ ೧.೫ ಕೋಟಿ ರೂ. ಲಂಚ ನಿಗದಿಪಡಿಸಲಾಗಿದೆ ಎಂದು ಅಶೋಕ್ ಆರೋಪಿಸಿದ್ದಾರೆ. ಅಐ-೯ ಪರವಾನಗಿಗಳಿಗೆ ಒಟ್ಟು ೯೨ ಕೋಟಿ ರೂ. ಮತ್ತು ಮೈಕ್ರೋಬ್ರೂವರಿ ಪರವಾನಗಿಗೆ ೨.೫ ಕೋಟಿ ರೂ. ಲಂಚ ಕೇಳಲಾಗಿದೆ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ.
ಒಟ್ಟಾರೆಯಾಗಿ, ೨,೫೦೦ ಕೋಟಿ ರೂ. ಲಂಚ ಪಡೆಯಲಾಗಿದೆ. ಇದನ್ನು ಅಸ್ಸಾಂ ಚುನಾವಣೆಗಾಗಿ ಕಳುಹಿಸಲಾಗುತ್ತಿದೆ. ಹಣವನ್ನು ಸಚಿವರಿಗೆ ಅಥವಾ ಅವರ ಮಗನಿಗೆ ನೀಡಬೇಕೆಂದು ಉಲ್ಲೇಖಿಸಲಾದ ಆಡಿಯೋವೊಂದು ಬಹಿರಂಗವಾಗಿದೆ ಎಂದು ಅಶೋಕ ಆರೋಪಿಸಿದ್ದಾರೆ.
ಅಬಕಾರಿ ಇಲಾಖೆಯಲ್ಲಿನ ಭ್ರಷ್ಟಾಚಾರದ ವಿರುದ್ಧದ ಹೋರಾಟವನ್ನು ಬಿಜೆಪಿ ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲಿದೆ ಎಂದೂ ಅವರು ಹೇಳಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು