LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಕಲ್ಕಿ 2898 AD ಚಿತ್ರದಲ್ಲಿ ಅಶ್ವತ್ಥಾಮ ಅಮಿತಾಬ್ ಬಚ್ಚನ್ ಫಸ್ಟ್ ಲುಕ್

ನಾಗ್ ಅಶ್ವಿನ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಬಹುಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಕಲ್ಕಿ ಸಿನಿಮಾ, ಈಗಾಗಲೇ ಶೂಟಿಂಗ್‍ನಲ್ಲಿ ಬಿಜಿಯಾಗಿದೆ. ಈ ನಡುವೆ ಈಗ ಸೋಷಿಯಲ್ ಮೀಡಿಯಾದಲ್ಲಿ ಈ ಸಿನಿಮಾ ಟ್ರೆಂಡಿಂಗ್‍ನಲ್ಲಿಯೂ ಮುಂದುವರಿದಿದೆ. ಅದಕ್ಕೆ ಕಾರಣ ರಿಲೀಸ್ ಆದ ಅಮಿತಾಬ್ ಬಚ್ಚನ್ ಅವರ ಹೊಸ ಲುಕ್.

ಹೌದು, ಕಳೆದ ವರ್ಷ ಅಮಿತಾಬ್ ಅವರ ಬರ್ತ್‍ಡೇ ದಿನದಂದು ಕಲ್ಕಿ ಚಿತ್ರದಲ್ಲಿನ ಅವರ ಲುಕ್ ಹೇಗಿರಲಿದೆ ಎಂಬ ಸಣ್ಣ ಝಲಕ್ ರಿಲೀಸ್ ಆಗಿತ್ತು. ಅದಾದ ಬಳಿಕ ಚಿತ್ರದಲ್ಲಿ ಅಮಿತಾಬ್ ಪಾತ್ರ ಹೇಗಿರಲಿದೆ ಎಂಬ ಕುತೂಹಲವೂ ಹೆಚ್ಚಾಗಿತ್ತು. ಇದೀಗ ಆ ಕೌತುಕವನ್ನು ತಣಿದಿದೆ. ಅಂದರೆ, ಕಲ್ಕಿ ಚಿತ್ರದಲ್ಲಿನ ಅಮಿತಾಬ್ ಬಚ್ಚನ್ ಪಾತ್ರದ ಖಲಕ್ ಹೊರಬಿದ್ದಿದೆ.

ತೆಲುಗು, ತಮಿಳು, ಕನ್ನಡ, ಮಲಯಾಳಂ ಮತ್ತು ಹಿಂದಿ ಭಾಷೆಯಲ್ಲಿ ಕಲ್ಕಿ ಚಿತ್ರ ನಿರ್ಮಾಣವಾಗುತ್ತಿದೆ. ಈ ಚಿತ್ರದಲ್ಲಿ ಅಶ್ವತ್ಥಾಮನಾಗಿ ಅಮಿತಾಬ್ ಬಚ್ಚನ್ ಕಾಣಿಸಿಕೊಳ್ಳಲಿದ್ದಾರೆ. ಒಂದು ನಿಮಿಷದ ಝಲಕ್‍ನಲ್ಲಿ ಎಲ್ಲ ಭಾಷೆಯನ್ನೂ ಬೆರೆಸಿ ಟೀಸರ್ ಬಿಡುಗಡೆ ಮಾಡಲಾಗಿದೆ.ಪುಟಾಣಿಯೊಬ್ಬ ನೀವ್ಯಾರು, ನಿಮ್ಮ ಜತೆ ನಾನು ಯಾವ ಭಾಷೆಯಲ್ಲಿ ಮಾತನಾಡಲಿ ಎಂದೆಲ್ಲ ಪ್ರಶ್ನೆ ಮಾಡಿದ್ದಾನೆ. ಆಗ, ಈಗ ನನ್ನ ಸಮಯ ಬಂದಿದೆ.

ನನ್ನ ಕೊನೆಯ ಯುದ್ಧಕ್ಕೆ ಸಮಯ ಬಂದಿದೆ. ನಾನು ದ್ರೋಣಾಚಾರ್ಯರ ಮಗ ಅಶ್ವತ್ಥಾಮ ಎಂದು ತಮ್ಮನ್ನು ಪರಿಚಯಿಸಿಕೊಂಡಿದ್ದಾರೆ ಅಮಿತಾಬ್ ಬಚ್ಚನ್. ಪ್ಯಾನ್ ಇಂಡಿಯಾ ಮಟ್ಟದಲ್ಲಿ ನಿರ್ಮಾಣವಾಗುತ್ತಿರುವ ಕಲ್ಕಿ ಸಿನಿಮಾದಲ್ಲಿ ಬಹುತಾರಾಗಣವೇ ಹೈಲೈಟ್. ಪ್ರಬಾಸ್ ನಾಯಕನಾಗಿ ನಟಿಸುತ್ತಿದ್ದರೆ, ದೀಪಿಕಾ ಪಡುಕೋಣೆ, ಅಮಿತಾಬ್ ಬಚ್ಚನ್, ಕಮಲ್ ಹಾಸನ್, ದಿಶಾ ಪಟಾಣಿ ಸೇರಿ ಘಟಾನುಘಟಿಗಳೇ ನಟಿಸುತ್ತಿದ್ದಾರೆ. ವೈಜಯಂತಿ ಮೂವೀಸ್ ಈ ಸಿನಿಮಾ ನಿರ್ಮಾಣ ಮಾಡುತ್ತಿದೆ. ಪುರಾಣ ಪ್ರೇರಿತ ವೈಜ್ಞಾನಿಕ ಕಥೆಯುಳ್ಳ ಸಿನಿಮಾ ಇದಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು