45ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ; ಗುಂಜ ನರಸಿಂಹಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಆಚರಣೆ; ಮುಂದಿನ ಚುನಾವಣೆಯಲ್ಲಿ ಗೆಲುವು ಸಾಧಿಸುವ ವಿಶ್ವಾಸ
ತಿ.ನರಸೀಪುರ: ಮಾಜಿ ಶಾಸಕ ಹಾಗೂ ಜೆಡಿಎಸ್ ನಾಯಕ ಎಂ. ಅಶ್ವಿನ್ ಕುಮಾರ್ ಅವರ 45ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ತಿ.ನರಸೀಪುರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಕ್ಷೇತ್ರಾಧ್ಯಕ್ಷ ಸಿ.ಬಿ. ಹುಂಡಿ ಚಿನ್ನಸ್ವಾಮಿ ಅವರ ನೇತೃತ್ವದಲ್ಲಿ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಪಟ್ಟಣದ ಶ್ರೀ ಗುಂಜ ನರಸಿಂಹಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಹುಟ್ಟುಹಬ್ಬವನ್ನು ಆಚರಿಸಿದರು.ಜೆಡಿಎಸ್ ಕ್ಷೇತ್ರಾಧ್ಯಕ್ಷ ಸಿ.ಬಿ. ಹುಂಡಿ ಚಿನ್ನಸ್ವಾಮಿ ಮಾತನಾಡಿ , ಮಾಜಿ ಶಾಸಕ ಎಂ. ಅಶ್ವಿನ್ ಕುಮಾರ್ ಅವರು ಸರಳ ವ್ಯಕ್ತಿತ್ವದೊಂದಿಗೆ ಜನರೊಂದಿಗೆ ಉತ್ತಮ ಒಡನಾಟ ಹೊಂದಿರುವ ನಾಯಕರಾಗಿದ್ದಾರೆ. ಶಾಸಕರಾಗಿದ್ದ ಅವಧಿಯಲ್ಲಿ ಕ್ಷೇತ್ರದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಜನರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಜನಪ್ರಿಯತೆ ಗಳಿಸಿದ್ದಾರೆ. ಅವರ ರಾಜಕೀಯ ಮತ್ತು ಸಾಮಾಜಿಕ ಸೇವೆ ಮತ್ತಷ್ಟು ಮುಂದುವರಿಯಲಿ. ಭಗವಂತ ಅವರಿಗೆ ಉತ್ತಮ ಆರೋಗ್ಯ, ದೀರ್ಘಾಯುಷ್ಯ ಹಾಗೂ ಇನ್ನಷ್ಟು ಜನಸೇವೆ ಮಾಡುವ ಶಕ್ತಿ ಕರುಣಿಸಲಿ ಎಂದರು.ಹೆಮ್ಮಿಗೆ ಹೊನ್ನನಾಯಕ ಮಾತನಾಡಿ, ಎಂ. ಅಶ್ವಿನ್ ಕುಮಾರ್ ಅವರ ಕಾರ್ಯವೈಖರಿ ಹಾಗೂ ಸಂಘಟನಾ ಚಾತುರ್ಯವನ್ನು ಗುರುತಿಸಿರುವ ಪಕ್ಷದ ವರಿಷ್ಠರು ಅವರಿಗೆ ಜಿಲ್ಲಾ ಅಧ್ಯಕ್ಷ ಸ್ಥಾನದ ಜವಾಬ್ದಾರಿ ನೀಡಿದ್ದಾರೆ. ಅದನ್ನು ಅವರು ಸಮರ್ಥವಾಗಿ ನಿಭಾಯಿಸುವ ವಿಶ್ವಾಸವಿದೆ. ಇಂದಿನ ರಾಜಕಾರಣದಲ್ಲಿ ಸರಳತೆ ಮತ್ತು ಸಜ್ಜನಿಕೆಯನ್ನು ಮೈಗೂಡಿಸಿಕೊಂಡಿರುವ ಅವರು, ಮಾಜಿ ಶಾಸಕರಾಗಿದ್ದಾರೆ. ಅವರ ನಮಗೆ ಶಾಶ್ವತ ಶಾಸಕರು, ಕಾರ್ಯಕರ್ತರನ್ನು ಎಂದಿಗೂ ಕೈಬಿಟ್ಟಿಲ್ಲ. ಕಾರ್ಯಕರ್ತರು ಕಷ್ಟದಲ್ಲಿದ್ದಾಗ ತಕ್ಷಣ ಸ್ಪಂದಿಸಿ ಅವರ ನೆರವಿಗೆ ಧಾವಿಸುವ ಗುಣ ಹೊಂದಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.ಮುಂದಿನ ಚುನಾವಣೆಯಲ್ಲಿ ದೇವರ ಆಶೀರ್ವಾದ ಹಾಗೂ ಕಾರ್ಯಕರ್ತರ ಪರಿಶ್ರಮದಿಂದ ಅಶ್ವಿನ್ ಕುಮಾರ್ ಅವರು ಖಂಡಿತ ವಾಗಿಯೂ ಗೆಲುವು ಸಾಧಿಸಲಿದ್ದಾರೆ. ಜೆಡಿಎಸ್ ಕಾರ್ಯಕರ್ತರಿಗೆ ಶಾಶ್ವತ ರಾಜಕೀಯ ಶಕ್ತಿ ಹಾಗೂ ಹೆಚ್ಚಿನ ಅಧಿಕಾರ ದೊರೆಯುವ ದಿನಗಳು ಬರಲಿವೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.
ಜೆಡಿಎಸ್ ಮುಖಂಡ ಶಿವಕುಮಾರ್ ಬಡ್ದು ಮಾತನಾಡಿ ಮಾಜಿ ಶಾಸಕ ಅಶ್ವಿನ್ ಕುಮಾರ್ ಅವರ ಸರಳ ವ್ಯಕ್ತಿತ್ವ ಮತ್ತು ಜನಪ್ರಿಯತೆಯ ಬಗ್ಗೆ ಮಾತನಾಡಿದ್ದಾರೆ. ಚುನಾವಣೆಯಲ್ಲಿ ಸೋಲು-ಗೆಲುವು ಸಹಜವಾಗಿದ್ದು, ಅಶ್ವಿನಿ ಕುಮಾರ್ ಅವರ ಜನಪ್ರಿಯತೆ ಇನ್ನೂ ಕಡಿಮೆಯಾಗಿಲ್ಲ ಎಂದು ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಅವರನ್ನು ಶಾಸಕರನ್ನಾಗಿ (ಒಐಂ) ಮಾಡುವ ನಿಟ್ಟಿನಲ್ಲಿ ತಾಲ್ಲೂಕಿನ ಜೆಡಿಎಸ್ ಕಾರ್ಯಕರ್ತರು, ಸಂಘ-ಸAಸ್ಥೆಗಳು ಮತ್ತು ಸಮುದಾಯಗಳು ಒಟ್ಟಾಗಿ ಕೆಲಸ ಮಾಡಬೇಕು ಎಂದು ಅವರು ಕೋರಿ ಹುಟ್ಟು ಹಬ್ಬದ ಶುಭ ಹಾರೈಸಿದರು..ಈ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ಮುಖಂಡರುಗಳಾದ ಜಿಪಂ ಮಾಜಿ ಸದಸ್ಯ ಜೈಪಾಲ್ ಭರಣಿ, ಸೋಸಲೆ ಶಿವಕುಮಾರ್ ಬಡ್ಡು,ಗ್ರಾಪಂ ಮಾಜಿ ಸದಸ್ಯ ರಾಜಣ್ಣ, ಕಟ್ಟಪುರ ಸಿದ್ದಪ್ಪ,ತಿರಮಕೂಡಲು ಜಯರಾಮ್, ಕನ್ನಹಳ್ಳಿ ಮಹದೇವ, ದ್ವಾರಕೀಶ್, ಹಿರಿಯೂರು ಸೋಮಣ್ಣ, ಸಿದ್ದಯ್ಯ,ಎನ್‌ಎಂ ಗೋಪಾಲ್ ರಾಜ್, ಕಾಳಿಹುಂಡಿ ಕುಮಾರ್, ಕುಕ್ಕೂರು ನಾಗರಾಜ ಮೂರ್ತಿ, ಕೆಬ್ಬೆಹುಂಡಿ ಮಹಾದೇವಸ್ವಾಮಿ ಸೇರಿದಂತೆ ಜೆಡಿಎಸ್ ಕಾರ್ಯಕರ್ತರು ಇದ್ದರು.