LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಕೆರೆಬೇಟೆ ಹಾಡು ಬಿಡುಗಡೆ ಮಾಡಿದ ಅಶ್ವಿನಿ ಪುನೀತ್ ರಾಜಕುಮಾರ್

ಸ್ಯಾಂಡಲ್ ವುಡ್ ನಲ್ಲಿ ಸದ್ಯ ಸಿಕ್ಕಾಪಟ್ಟೆ ನಿರೀಕ್ಷೆ ಮತ್ತು ಕುತೂಹಲ ಮೂಡಿಸಿರುವ ಸಿನಿಮಾ ಕೆರೆಬೇಟೆ. ಗೌರಿಶಂಕರ್ ನಟನೆಯ ರಾಜ್ ಗುರು ನಿರ್ದೇಶನದ ಕೆರೆಬೇಟೆ ಚಿತ್ರಕ್ಕೆ ಈಗ ಅಶ್ವಿನಿ ಪುನೀತ್ ರಾಜ್ ಕುಮಾರ್ ಸಾಥ್ ನೀಡಿದ್ದಾರೆ. ಸಿನಿಮಾದ ಮೂರನೇ ಹಾಡನ್ನು ಅಶ್ವಿನಿ ಪುನೀತ್ ರಾಜಕುಮಾರ್ ರಿಲೀಸ್ ಮಾಡುವ ಮೂಲಕ ಸಿನಿಮಾ ತಂಡಕ್ಕೆ ಶುಭ ಹಾರೈಸಿದರು.

ಈಗಾಗಲೇ ಸಿನಿಮಾದಿಂದ ಟೀಸರ್, ಟ್ರೈಲರ್ ಮತ್ತು ಎರಡು ಹಾಡುಗಳು ರಿಲೀಸ್ ಆಗಿದ್ದು ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಇದೀಗ ಸಿನಿಮಾ ತಂಡ 3ನೇ ಹಾಡನ್ನು ರಿಲೀಸ್ ಮಾಡುವ ಮೂಲಕ ಕುತೂಹಲ ಮತ್ತಷ್ಟು ಹೆಚ್ಚಿಸಿದೆ.'ಕಣ್ಣುಗಳೆ ಕಳೆದು ಹೋದಾಗ...' ಎನ್ನುವ ಸಾಲುಗಳಿಂದ ಪ್ರಾರಂಭವಾಗುವ ಈ ಹಾಡನ್ನು ಪ್ರಮೋದ್ ಮರವಂತೆ ಬರೆದಿದ್ದಾರೆ. .... ಈ ಸುಂದರ ಹಾಡಿಗೆ.... ಸಿದ್ಧಾರ್ಥ ಬೆಳ್ಮಣ್ಣು ಧ್ವನಿ ನೀಡಿದ್ದು ಗಗನ್ ಬಡೇರಿಯಾ ಸಂಗೀತ ಸಂಯೋಜನೆ ಮಾಡಿದ್ದಾರೆ.

ಇತ್ತೀಚಿಗಷ್ಟೇ ಸಿನಿಮಾತಂಡ 2ನೇ ಹಾಡನ್ನು ಶಿವಮೊಗ್ಗದಲ್ಲಿ ಅದ್ದೂರಿಯಾಗಿ ರಿಲೀಸ್ ಮಾಡಿ ಅಭಿಮಾನಿಗಳ ಗಮನ ಸೆಳೆದಿದ್ದರು. ಇದೀಗ ಸಿನಿಮಾ ತಂಡ ಚಿತ್ರದ ಪ್ಯಾತೋ ಸಾಂಗ್ ರಿಲೀಸ್ ಮಾಡಿದೆ. ಈ ಹಾಡು ನೋಡಿ ಅಶ್ವಿನಿ ಪುನೀತ್ ರಾಜಕುಮಾರ್ ಸಂತಸ ವ್ಯಕ್ತಪಡಿಸಿದರು.

ನಿರ್ದೇಶಕ ರಾಜ್ ಗುರು ಮಾತನಾಡಿ ನಿರ್ಮಾಪಕ ಅಶ್ವಿನಿ ಪುನೀತ್ ರಾಜಕುಮಾರ್ ಹಾಡನ್ನು ರಿಲೀಸ್ ಮಾಡಿರುವ ಬಗ್ಗೆ ಸಂತಸ ವ್ಯಕ್ತಪಡಿಸಿದರು. 'ದೊಡ್ಮನೆಗೂ ನನಗೂ ಒಂದು ಸಂಬಂಧವಿದೆ. ಅಪ್ಪು ಸರ್ ಜೊತೆ ಸಿನಿಮಾದಲ್ಲಿ ಕೆಲಸ ಮಾಡಿದ್ದೇನೆ. ನಮ್ಮ ಮಣ್ಣಿನ ಕಥೆಗಳ ಬಗ್ಗೆ ತುಂಬಾ ಮಾತನಾಡುತ್ತಿದ್ವಿ. ಈ ರೀತಿಯ ಸಿನಿಮಾ ಅವರಿಗೆ ತುಂಬಾ ಇಷ್ಟ' ಎಂದರು.

ನಾಯಕಿ ಬಿಂಧು ಶಿವರಾಮ್ ಮಾತನಾಡಿ, 'ಮಲೆನಾಡಿನ ಭಾಷೆ ನನಗೆ ತುಂಬಾ ಕಷ್ಟವಾಯಿತು. ಇಡೀ ಸಿನಿಮಾ ತಂಡ ಮಲೆನಾಡಿನವರಾಗಿದ್ದರಿಂದ ಅದೇ ಭಾಷೆಯನ್ನು ಮಾತನಾಡುತ್ತಿದ್ದರು. ಹಾಗಾಗಿ ನನಗೂ ಅವರ ಜೊತೆ ಸೇರಿ ಮಲೆನಾಡಿನ ಭಾಷೆ ಮಾತನಾಡಲು ಸುಲಭವಾಯ್ತು. ಈ ಚಿತ್ರದಲ್ಲಿ ನನ್ನ ಪಾತ್ರ ತುಂಬಾ ಗಟ್ಟಿಯಾಗಿದೆ' ಎಂದರು.

ನಾಯಕ ಗೌರಿಶಂಕರ್ ಮಾತನಾಡಿ, 'ಅಶ್ವಿನಿ ಮೇಡಮ್ ಸಿನಿಮಾದ ಟೀಸರ್, ಟ್ರೈಲರ್ ಹಾಡನ್ನು ನೋಡಿ ತುಂಬಾ ಇಷ್ಟಪಟ್ಟರು. ಈ ಸಿನಿಮಾ ನನಗೆ ಗೆಲ್ಲಲೇ ಬೇಕಾಗಿದೆ. ಏಕೆಂದರೆ ನಾನು ತುಂಬಾ ಸೋಲನ್ನು ಕಂಡಿದ್ದೇನೆ. ಸೋತು ಮನೆಯಲ್ಲಿ ಕೂರುವುದು ತುಂಬಾ ಕಷ್ಟ. ಸಿನಿಮಾ ಸಹವಾಸವೇ ಬೇಡ ಅಂತ ಇದ್ದೆ. ನಿರ್ದೇಶಕರು ಈ ಕಥೆ ಹೇಳಿದಾಗ ನನಗೆ ತುಂಬಾ ಇಷ್ಟವಾಯಿತು. ಹಾಗಾಗಿ ಈ ಸಿನಿಮಾ ಒಪ್ಪಿಕೊಂಡೆ. ತುಂಬಾ ಪ್ರಿಪರೇಷನ್ ಮಾಡಿದ್ದೇವೆ, ಗೆಲುವು ನನಗೆ ಅನಿವಾರ್ಯವಾಗಿದೆ' ಎಂದರು.

ಅಪ್ಪಟ ಹಳ್ಳಿ ಸೊಗಡಿನ ಸಿನಿಮಾ ಇದಾಗಿದ್ದು ಇದೇ ಮಾರ್ಚ್ 15ಕ್ಕೆ ಚಿತ್ರಮಂದಿರಕ್ಕೆ ಎಂಟ್ರಿ ಕೊಡುತ್ತಿದೆ. ಜನಮನ ಸಿನಿಮಾ ಸಂಸ್ಥೆಯಲ್ಲಿ ಮೂಡಿ ಬಂದಿರುವ ಕೆರಬೇಟೆ ಸಿನಿಮಾ ಹೇಗಿರಲಿದೆ, ಮಲೆನಾಡಿನ ಮೀನು ಬೇಟೆಯ ಸಂಸ್ಕೃತಿ ಹೇಗೆ ಮೂಡಿ ಬಂದಿದೆ ಎಂದು ನೋಡಲು ಅಭಿಮಾನಿಗಳು ಸಹ ಕಾತರರಾಗಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು