LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಕಾರ್ಯಾಗಾರಗಳಿಂದ ವಿದ್ಯಾರ್ಥಿಗಳಿಗೆ ನೆರವು

ಬೆಂಗಳೂರು: ಕಾರ್ಯಾಗಾರಗಳ ಮೂಲಕ, ಕಲೆ ಮತ್ತು ಕ್ರಾಫ್ಟ್‍ನಲ್ಲಿ ಹೊಸ ಪರಿಕಲ್ಪನೆಗಳು ಮತ್ತು ತಂತ್ರಗಳನ್ನು ಕಲಿಯಲು ವಿದ್ಯಾರ್ಥಿಗಳಿಗೆ ಅವಕಾಶವಾಗುತ್ತದೆ ಎಂದು ಯುವಾ ಮುಖ್ಯ ಕಾರ್ಯತಂತ್ರ ಅಧಿಕಾರಿ ಅಭಿಜಿತ್ ಸನ್ಯಾಲ್, ಯುವ ಸಂಸ್ಥೆಯ ಧ್ಯೇಯದ ಬಗ್ಗೆ ಮಾತನಾಡಿದರು.

ನವನೀತ್ ಎಜುಕೇಶನ್ ಅಡಿಯಲ್ಲಿ ಯುವಾ ಸ್ಟೇಷನರಿ ಇತ್ತೀಚೆಗೆ ಜನವರಿ 16 ರಿಂದ 18 ರ ವರೆಗೆ ಬೆಂಗಳೂರಿನಲ್ಲಿ ಕಲಾ ಕಾರ್ಯಾಗಾರಗಳ ಸರಣಿಯನ್ನು ನಡೆಸಿಕೊಟ್ಟಿದೆ. ವಿಲ್ ಇಂಡಿಯಾ ಚೇಂಜ್ ಫೌಂಡೇಶನ್‍ನ ಎನ್‍ಜಿಒ ಸಹಭಾಗಿತ್ವದಲ್ಲಿ ನಡೆಸಿದ ಕಾರ್ಯಾಗಾರವು `ವಸುಧೈವ ಕುಟುಂಬಕಂ’ ಎಂಬ ತತ್ವವನ್ನು ಆಧರಿಸಿತ್ತು. ಯುವ ಪ್ರತಿಭೆಗಳಲ್ಲಿ `ಏಕ ವಿಶ್ವ, ಏಕ ಕುಟುಂಬ’ ಎಂಬ ಪರಿಕಲ್ಪನೆಯನ್ನು ಮೂಡಿಸುವುದಕ್ಕೆ ಈ ಪರಿಕಲ್ಪನೆಯನ್ನು ರೂಪಿಸಲಾಗಿತ್ತು.

ಗಣಪತಿ ಎಸ್ ಹೆಗಡೆ ಅವರ ಮಾರ್ಗದರ್ಶನದಲ್ಲಿ ಬೆಂಗಳೂರು ನಗರದಲ್ಲಿ ಐದು ಆಕರ್ಷಕ ಕಾರ್ಯಾಗಾರಗಳನ್ನು ನಡೆಸಲಾಗಿತ್ತು ಮತ್ತು ಸುಮಾರು 2300 ವಿದ್ಯಾರ್ಥಿಗಳು ಸಕ್ರಿಯವಾಗಿ ಭಾಗವಹಿಸಿದ್ದರು. ಜನಪ್ರಿಯ ಸಂಸ್ಥೆಗಳಾದ ಶ್ರೀ ಜ್ಞಾನಾಕ್ಷಿ ವಿದ್ಯಾನಿಕೇತನ, ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರ, ಇನ್ನಿತರ ಶಾಲೆಗಳು ಈ ಕಾರ್ಯಕ್ರಮಕ್ಕೆ ಸಹಭಾಗಿತ್ವ ನೀಡಿದ್ದವು.

ಯುವಾ ಹಿರಿಯ ಬ್ರ್ಯಾಂಡ್ ಮ್ಯಾನೇಜರ್ ಅಮರ್ ಕುಲಕರ್ಣಿ ಅವರು, ಮಕ್ಕಳಿಗೆ ಸರಿಯಾದ ಮಾರ್ಗದರ್ಶನ ಸಿಕ್ಕರೆ ಅವರು ತಮ್ಮ ಕಲ್ಪನೆಗೆ ಹೊಸ ರೂಪ ನೀಡಬಲ್ಲರು. ಈ ಕಾರ್ಯಾಗಾರವು ಕಲಾತ್ಮಕ ಪ್ರತಿಭೆಯನ್ನು ಪ್ರದರ್ಶಿಸಿದ್ದಷ್ಟೇ ಅಲ್ಲ, ಮಕ್ಕಳಲ್ಲಿ ಒಗ್ಗಟ್ಟಿನ ಭಾವವನ್ನೂ ಇದು ಪೋಷಿಸಿದೆ. ಉನ್ನತ ಗುಣಮಟ್ಟದ ಕಲಾತ್ಮಕ ಪ್ರತಿಭೆಯನ್ನು ಪ್ರದರ್ಶಿಸಿದಂತೆಯೇ, ತಮ್ಮ ಅಭಿವ್ಯಕ್ತಿಗಾಗಿ ಮತ್ತು ಮಾನವೀಯತೆಯನ್ನು ಅನಾವರಣಗಳಿಸಲು ಯುವಕರಿಗೆ ಹೊಸ ವೇದಿಕೆಯನ್ನು ಒದಗಿಸಿದೆ ಎಂದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು