LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಬಂಡಾಯಗಾರರ ಮನವೊಲಿಕೆ ಯತ್ನ

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ವಿಧಾನಸಭಾ ಉಪಚುನಾವಣೆಗೆ ನಾಮಪತ್ರ ಹಿಂಪಡೆಯಲು ಇಂದೇ ಕಡೆಯ ದಿನವಾಗಿದೆ. ಮಧ್ಯಾಹ್ನ ಮೂರು ಗಂಟೆಯ ವೇಳೆಗೆ ನಾಮಪತ್ರ ಸಲ್ಲಿಸಿರುವ ಅಭ್ಯರ್ಥಿಗಳು ತಮ್ಮ ನಾಮಪತ್ರ ಹಿಂಪಡೆಯಬಹುದಾಗಿದೆ.ಈಗಾಗಲೇ ಸಾಕಷ್ಟು ಮಂದಿ ಬಿಜೆಪಿ, ಕಾಂಗ್ರೆಸ್ ಅಧಿಕೃತ ಅಭ್ಯರ್ಥಿಗಳ ವಿರುದ್ಧ ಬಂಡಾಯಗಾರರಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.ದಾವಣಗೆರೆಯಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿ ವಿರುದ್ಧ ನಾಮಪತ್ರ ಸಲ್ಲಿಸಿರುವ ಸಾಧಿಕ್ ಪೈಲ್ವಾನ್ ಅವರನ್ನು ಮನವೊಲಿಸಿ ಅವರ ನಾಮಪತ್ರ ಹಿಂದಕ್ಕೆ ಪಡೆಯಲು ಮನವೊಲಿಕೆ ಕಾರ್ಯ ನಡೆಸಲಾಗುತ್ತಿದೆ. ಖುದ್ದಾಗಿ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಎಸ್.ಎಸ್. ಮಲ್ಲಿಕಾರ್ಜುನ್ ಅವರು ಪಕ್ಷದ ಅಧಿಕೃತ ಅಭ್ಯರ್ಥಿಯಾಗಿರುವ ತಮ್ಮ ಪುತ್ರ ಶಾಮನೂರು ಸಮರ್ಥ್ ಅವರ ಪರವಾಗಿ ನಾಮಪತ್ರ ಹಿಂತೆಗೆಸಲು ಕಸರತ್ತು ನಡೆಸುತ್ತಿದ್ದಾರೆ. ದಾವಣಗೆರೆ ಕ್ಷೇತ್ರದಲ್ಲಿ ಬಂಡಾಯವಾಗಿರುವ ಸಾದಿಕ್ ಅವರನ್ನು ನಾಮಪತ್ರ ಹಿಂಪಡೆಯುವAತೆ ಕಾಂಗ್ರೆಸ್ ಪಕ್ಷದ ವತಿಯಿಂದ ಸೂಚಿಸಲಾಗಿದೆ. ಆದರೆ ಸಾದಿಕ್ ಅವರು, ಯಾರ ಕೈಗೂ ಸಿಗದೆ ಓಡಾಡುತ್ತಿದ್ದಾರೆ. ಬಿಜೆಪಿ ಮಾತ್ರ ಸಾದಿಕ್ ಅವರು ಕಣದಲ್ಲಿದ್ದರೆ ಸಾಕು ಎಂಬ ಭಾವನೆಯಲ್ಲಿದೆ. ಈಗ ಎಲ್ಲರ ಚಿತ್ತ ಸಾದಿಕ್ ಅವರತ್ತ ನೆಟ್ಟಿದೆ.ಇತ್ತ ಬಾಗಲಕೋಟೆಯಲ್ಲೂ ಪಕ್ಷದ ಅಧಿಕೃತ ಅಭ್ಯರ್ಥಿ ಕಾಂಗ್ರೆಸ್‌ನ ಉಮೇಶ್ ಮೇಟಿ ವಿರುದ್ಧ ಗೋವಿಂದ ರಾಜ ಬಳ್ಳಾರಿ ಎಂಬುವರು ನಾಮಪತ್ರ ಸಲ್ಲಿಸಿದ್ದಾರೆ. ಗೋವಿಂದರಾಜ ಬಳ್ಳಾರಿ ಅವರನ್ನು ಮನವೊಲಿಸಿ ಅವರ ನಾಮಪತ್ರವನ್ನು ಹಿಂತೆಗೆಯಲು ಪ್ರಯತ್ನ ಮಾಡಲಾಗುತ್ತಿದೆ. ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ ಅವರು, ಗೋವಿಂದರಾಜು ಅವರ ನಾಮಪತ್ರ ಹಿಂತೆಗೆಸಲು ಖುದ್ದಾಗಿ ಕಸರತ್ತು ನಡೆಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು