LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ನಾನು ಕರುಣಾಕರ ಚಿತ್ರದ ಆಡಿಯೋ-ಟ್ರೇಲರ್‌ ಬಿಡುಗಡೆ

ಇದೀಗ 'ನಾನು ಕರುಣಾಕರ' ಎಂಬ ತಂದೆ ಮಗನ ನಡುವಿನ ಬಾಂಧವ್ಯದ ಕಥೆಯನ್ನು ತೆರೆಗೆ ತರ್ತಿದ್ದಾರೆ. ರಂಗಭೂಮಿ ಹಿನ್ನೆಲೆಯಿಂದ ಬಂದ ಆರ್ಯನ್ ತೇಜಸ್ ಈ ಚಿತ್ರ ನಿರ್ದೇಶನದ ಜತೆಗೆ ನಾಯಕನ ಪಾತ್ರದಲ್ಲೂ ಕಾಣಿಸಿಕೊಂಡಿದ್ದಾರೆ.
ಈ ಹಿಂದೆ ಶಿಕ್ಷಣ ವ್ಯವಸ್ಥೆಯ ಸುತ್ತ ನಡೆಯುವ ಕಥೆ ಹೊಂದಿದ 'ಪಾರ್ಕ್ ರೋಡ್ 100 ರೂಪಾಯಿ' ಚಿತ್ರ ನಿರ್ದೇಶಿಸಿದ್ದ ಆರ್ಯನ್ ತೇಜಸ್, ಕೊರೊನಾಗೂ ಮೊದಲೇ ಈ ಕಥೆಯನ್ನು ರೆಡಿ ಮಾಡಿಕೊಂಡಿದ್ದರAತೆ. ನಂತರ ಅದನ್ನು ಸ್ನೇಹಿತ ನಮನ್ ನಾರಾಯಣ್ ಅವರಿಗೆ ಹೇಳಿದಾಗ ಅವರಿಗದು ಇಷ್ಟವಾಗಿ ನಿರ್ಮಾಣಕ್ಕೆ ಮುಂದಾಗಿದ್ದಾರೆ.
ಕನ್ನಡಕ್ಕೊಂದು ಒಳ್ಳೆಯ ಸಿನಿಮಾ ಕೊಡಬೇಕೆಂಬ ನಿಟ್ಟಿನಲ್ಲಿ
ಸ್ನೇಹಿತರಾದ ವೈಭವ್ ಸುರೇಶ್, ಸೇರಿ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ಸಂತೋಷ್ ಮತ್ತು ಶ್ರೀಕಾಂತ್ ಇವರ ಜತೆ ಕೈಜೋಡಿಸಿದ್ದಾರೆ. ಈ ಚಿತ್ರದ ಟ್ರೇಲರ್‌ ಮತ್ತು ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು.
ನಾನು ಕರುಣಾಕರ ಪ್ರತಿಯೊಬ್ಬರ ಜೀವನಕ್ಕೂ ಕನೆಕ್ಟ್ ಆಗುವಂಥ ಚಿತ್ರ. ಅಪ್ಪ ಮಗನ ಬಾಂಧವ್ಯ ಹಾಗೂ ಗಂಡ
ಹೆಂಡತಿಯ ಸಂಬAಧದ ಸುತ್ತ ನಡೆಯೋ ಕಥೆ ಇದಾಗಿದೆ. ಈಗಾಗಲೇ ತನ್ನೆಲ್ಲ ಕೆಲಸಗಳನ್ನು ಮುಗಿಸಿಕೊಂಡು ಬಿಡುಗಡೆಗೆ ಸಿದ್ದವಾಗಿರುವ ಈ ಚಿತ್ರ ಏಪ್ರಿಲ್ 3ರಂದು ರಾಜ್ಯಾದ್ಯಂತ ತೆರೆಕಾಣುತ್ತಿದೆ. ಪಾಪ್ ಕಾರ್ನ್ ಸಿನಿಮಾ ಪ್ರೊಡಕ್ಷನ್ಸ್ ಮೂಲಕ ನಿರ್ಮಾಣವಾಗಿರುವ ನಾನು ಕರುಣಾಕರ ಚಿತ್ರದಲ್ಲಿ ನಾಯಕನಾಗಿ ಆರ್ಯನ್ ತೇಜಸ್ ಹಾಗೂ ಅವರ ಪತ್ನಿಯಾಗಿ ಭಾರ್ಗವಿ ಎಲ್ ಎಲ್ ಬಿ ಖ್ಯಾತಿಯ ರಾಧಾ ಭಗವತಿ ಹಾಗೂ ಮಗನ ಪಾತ್ರದಲ್ಲಿ ಮಾ. ಭವೀಶ್ ಕಾಣಿಸಿಕೊಂಡಿದ್ದಾರೆ. ಉಳಿದಂತೆ ಕರಿಸುಬ್ಬು, ಎಂಕೆ ಮಠ, ಬಿ.ಎಂ. ವೆಂಕಟೇಶ, ಅಪೂರ್ವ ಸೇರಿದಂತೆ ಹಲವರು ನಟಿಸಿದ್ದಾರೆ.
ನಾಯಕ, ನಿರ್ದೇಶಕ ಆರ್ಯನ್ ತೇಜಸ್ ಮಾತನಾಡುತ್ತ ಪ್ರತಿಯೊಬ್ಬರ ಮನೆಯಲ್ಲೂ ಒಬ್ಬ ಕರುಣಾಕರ ರ‍್ತಾನೆ, ಮಧ್ಯಮ ವರ್ಗದ ಎಲ್ಲ ಫ್ಯಾಮಿಲಿಯಲ್ಲೂ ನಡೆವ ಕಥೆ, ಮೈಸೂರು, ಮೇಲುಕೋಟೆ, ಹಾಗೂ ಬೆಂಗಳೂರಿನ ಯಲಹಂಕ ಸುತ್ತಮುತ್ತ ಚಿತ್ರೀಕರಣ ನಡೆಸಲಾಗಿದೆ, ಒಬ್ಬ ಅಸಿಸ್ಟೆಂಟ್ ಡೈರೆಕ್ಟರ್ ತನ್ನ ಕುಟುಂಬವನ್ನು ಮುನ್ನಡೆಸಿಕೊಂಡು ಹೋಗಲು ಎಷ್ಟೆಲ್ಲ ಕಷ್ಟ ಪಡುತ್ತಾನೆ ಎಂಬುದನ್ನು ಈ ಚಿತ್ರದಲ್ಲಿಹೇಳಲಾಗಿದೆ, ಕುಟುಂಬದ ಯಜಮಾನನಾಗಿ ನಾನು ನಟಿಸಿದ್ದೇನೆ ಎಂದು ಹೇಳಿದರು.
ನಾಯಕಿ ರಾಧಾ ಭಗವತಿ ಮಾತನಾಡುತ್ತ ಇದು ನನ್ನ 5ನೇ ಚಿತ್ರ, ಮಿಡಲ್ ಕ್ಲಾಸ್ ಫ್ಯಾಮಿಲಿಯ ಗೃಹಿಣಿಯಾಗಿ ನಾನು ಕಾಣಿಸಿಕೊಂಡಿದ್ದೇನೆ, ಈ ಚಿತ್ರದಲ್ಲಿ ಅಭಿನಯಿಸುವಾಗ ನನ್ನ ಬಾಲ್ಯದ ದಿನಗಳ ನೆನಪಾಯ್ತು. ಆಕೆಗೆ ದೊಡ್ಡದಾಗಿ ಏನಾದರೂ ಮಾಡಬೇಕೆಂಬ ಆಸೆಯಿರುತ್ತೆ, ಆದರೆ ಗಂಡ, ಮಗನಿಗೋಸ್ಕರ ತನ್ನ ಕನಸನ್ನು ಬದಿಗೊತ್ತಿ ಅವರಿಗೆ ಸಪೋರ್ಟ್ ಮಾಡುತ್ತಾಳೆ ಎಂದು ವಿವರಿಸಿದರು,
ನಿರ್ಮಾಪಕ ವೈಭವ್ ಸುರೇಶ್ ಮಾತನಾಡುತ್ತ ಒಂದೊಳ್ಳೇ ಸಿನಿಮಾ ಮಾಡಬೇಕೆಂದು ತುಂಬಾ ವರ್ಷಗಳಿಂದ ಕನಸಿತ್ತು, ಅದು ಈ ಸಿನಿಮಾ ಮೂಲಕ ನನಸಾಗಿದೆ. ನಾನು ನಮನ್ ನಾರಾಯಣ ಸೇರಿ ಈ ಚಿತ್ರ ನಿರ್ಮಾಣ ಮಾಡಿದ್ದೇವೆ, ಚಿಕ್ಕ ಮಕ್ಕಳು ತಂದೆಗೆ ಹೇಗೆ ಕಷ್ಟ ಕೊಡುತ್ತಾರೆ, ಅದಕ್ಕಾಗಿ ತಂದೆ ಏನು ಮಾಡುತ್ತಾನೆ ಎಂಬುದೇ ಈ ಚಿತ್ರದ ಕಥೆ ಎಂದರು,
ಮತ್ತೊಬ್ಬ ನಿರ್ಮಾಪಕ ನಮನ್ ನಾರಾಯಣ ಮಾತನಾಡುತ್ತ ನಿರ್ದೇಶಕರು ನನಗೆ ಹಳೇ ಸ್ನೇಹಿತರು. ಅವರು ಈ ಕಥೆ ಹೇಳಿದಾಗ ನನ್ನ ತಂದೆಯ ನೆನಪಾಯಿತು,ಈ ಥರದ ಎಷ್ಟೋ ತಂದೆಯರು ಇದ್ದಾರೆ, ಅವರಿಗೆಲ್ಲ ಈ ಸಿನಿಮಾ ಅರ್ಪಣೆ, ಒಮ್ಮೆ ಭಾವನಾ ಬೆಳಗೆರೆ ಅವರೇ ಕಾಲ್‌ಮಾಡಿ ಕರೆಸಿಕೊಂಡು ಚಿತ್ರದ ಬಗ್ಗೆ ಮಾತಾಡಿ ಸಪೋರ್ಟ್ ಮಾಡುವುದಾಗಿ ಹೇಳಿದರು. ಟ್ರೇಲರ್‌ ಗೆ ಶ್ರೀನಗರ ಕಿಟ್ಟಿ ವಾಯ್ಸ್ ಕೂಡ ನೀಡಿದ್ದಾರೆ ಎಂದರು. ಸ್ನೇಹಿತನ ಪಾತ್ರ ಮಾಡಿರುವ ಲೋಕೇಶ್, ಪೇಂಟರ್ ಪಾತ್ರ ನಿರ್ವಹಿಸಿರುವ ಕರಿಸುಬ್ಬು ಚಿತ್ರದ ಬಗ್ಗೆ ಮಾತನಾಡಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು