LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

7ನೇ ಬಾರಿಗೆ ಆಸ್ಟ್ರೇಲಿಯಾ ವಿಶ್ವಚಾಂಪಿಯನ್ ಪಟ್ಟ

ಕ್ರೀಡೆ:ಆಸ್ಟ್ರೇಲಿಯಾ ಮಹಿಳಾ ಕ್ರಿಕೆಟ್ ತಂಡವು ಜಾಗತಿಕ ಕ್ರಿಕೆಟ್‌ನಲ್ಲಿ ತನ್ನ ಅಪ್ರತಿಮ ಪ್ರಾಬಲ್ಯವನ್ನು ಮುಂದುವರಿಸಿದೆ. ಈ ಪ್ರಾಬಲ್ಯದೊಂದಿಗೆ ಐಸಿಸಿ ಮಹಿಳಾ ಟಿ20 ವಿಶ್ವಕಪ್ ಇತಿಹಾಸದಲ್ಲಿ ಬರೋಬ್ಬರಿ 7ನೇ ಬಾರಿಗೆ ವಿಶ್ವಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಬಾರಿ ಆಸೀಸ್ ಪಡೆ ಒಂದೇ ಒಂದು ಮ್ಯಾಚ್‌ನಲ್ಲಿ ಸೋಲದೇ ವಿಶ್ವ ಕಿರೀಟವನ್ನು ಮುಡಿಗೇರಿಸಿಕೊಂಡಿರುವುದು ವಿಶೇಷ.
ಐಸಿಸಿ ಮಹಿಳಾ ಟಿ20 ವಿಶ್ವಕಪ್ 2026 ರಲ್ಲಿ ಆಸ್ಟ್ರೇಲಿಯಾ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಲಾರ್ಡ್್ಸ ಮೈದಾನದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕಿ ಸೋಫಿ ಮೊಲಿನ್ಯೂ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡವು ನಿರೀಕ್ಷಿತ ಆರಂಭ ಪಡೆದಿರಲಿಲ್ಲ.
ಆರಂಭಿಕರಾಗಿ ಕಣಕ್ಕಿಳಿದ ಆಯಮಿ ಜೋನ್ಸ್ 6 ರನ್‌ಗಳಿಸಿ ಔಟಾದರೆ, ಡ್ಯಾನಿ ವ್ಯಾಟ್ 8 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಈ ಹಂತದಲ್ಲಿ ಕಣಕ್ಕಿಳಿದ ಇಂಗ್ಲೆAಡ್ ತಂಡದ ನಾಯಕಿ ನ್ಯಾಟ್ ಸೀವರ್ ಬ್ರಂಟ್ 53 ಎಸೆತಗಳಲ್ಲಿ 58 ರನ್ ಬಾರಿಸಿದರು. ಇನ್ನು ಅಂತಿಮ ಓವರ್‌ಗಳ ವೇಳೆ ಅಬ್ಬರಿಸಿದ ಫ್ರೇಯ ಕೆಂಪ್ 28 ಎಸೆತಗಳಲ್ಲಿ 44 ರನ್ ಚಚ್ಚಿದರು. ಈ ಮೂಲಕ ಇಂಗ್ಲೆAಡ್ ತಂಡವು 20 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 150 ರನ್ ಕಲೆಹಾಕಿತು.
151 ರನ್‌ಗಳ ಗುರಿ ಪಡೆದ ಆಸ್ಟ್ರೇಲಿಯಾ ತಂಡಕ್ಕೆ ಬೆತ್ ಮೂನಿ ಸ್ಫೋಟಕ ಆರಂಭ ಒದಗಿಸಿದ್ದರು. ಮೊದಲ ಓವರ್‌ನಿಂದಲೇ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಮೂನಿ 49 ಎಸೆತಗಳಲ್ಲಿ 10 ಫೋರ್‌ಗಳೊಂದಿಗೆ 69 ರನ್ ಬಾರಿಸಿದರು. ಇನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಫೀಬಿ ಲಿಚ್‌ಫೀಲ್ಡ್ 35 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 6 ಫೋರ್‌ಗಳೊಂದಿಗೆ 48 ರನ್ ಚಚ್ಚಿದರು. ಈ ಮೂಲಕ ಆಸ್ಟ್ರೇಲಿಯಾ ತಂಡ 17.1 ಓವರ್‌ಗಳಲ್ಲಿ 153 ರನ್ ಬಾರಿಸಿ 7 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿತು.
ಆಸೀಸ್ ಮುಡಿಗೆರಿದ ಕಿರೀಟ: ಈ ಗೆಲುವಿನೊಂದಿಗೆ ಆಸ್ಟ್ರೇಲಿಯಾ ಮಹಿಳಾ ತಂಡವು 7ನೇ ಬಾರಿ ಟಿ20 ವಿಶ್ವಕಪ್ ಗೆದ್ದುಕೊಂಡಿದೆ. ಆಸೀಸ್ ಪಡೆ ವಿಶ್ವಕಪ್ ಗೆದ್ದ ವರ್ಷಗಳ ಪಟ್ಟಿ ಈ ಕೆಳಗಿನಂತಿದೆ.
2010 ಮೊದಲ ಪ್ರಶಸ್ತಿ (ನ್ಯೂಝಿಲೆಂಡ್ ವಿರುದ್ಧ ಗೆಲುವು)
2012 ಎರಡನೇ ಪ್ರಶಸ್ತಿ (ಇಂಗ್ಲೆಂಡ್ ವಿರುದ್ಧ ಗೆಲುವು)
2014 ಮೂರನೇ ಪ್ರಶಸ್ತಿ (ಇಂಗ್ಲೆಂಡ್ ವಿರುದ್ಧ ಗೆಲುವು)
2018 ನಾಲ್ಕನೇ ಪ್ರಶಸ್ತಿ (ಇಂಗ್ಲೆಂಡ್ ವಿರುದ್ಧ ಗೆಲುವು)
2020 ಐದನೇ ಪ್ರಶಸ್ತಿ (ಭಾರತದ ವಿರುದ್ಧ ಗೆಲುವು)
2023 ಆರನೇ ಪ್ರಶಸ್ತಿ (ಸೌತ್ ಆಫ್ರಿಕಾ ವಿರುದ್ಧ ಗೆಲುವು)
2026 ಏಳನೇ ಪ್ರಶಸ್ತಿ (ಇಂಗ್ಲೆಂಡ್ ವಿರುದ್ಧ ಗೆಲುವು)

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು