LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಕೈಮಗ್ಗ ಮೀಸಲಾತಿ ಅಧಿನಿಯಮ-1985 ರ ವಿದ್ಯುತ್ ಮಗ್ಗ ನೇಕಾರರಿಗೆ ಅರಿವು

ದೊಡ್ಡಬಳ್ಳಾಪುರ: ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಸ್ಥಳೀಯ ದೊಡ್ಡಬಳ್ಳಾಪುರ ಕ್ಷೇತ್ರದ ವಿದ್ಯುತ್ ಮಗ್ಗ ನೇಕಾರರಿಗೆ ?ಕೈಮಗ್ಗ ಮೀಸಲಾತಿ ಅಧಿನಿಯಮ-1985? ರಡಿ ಕಾಯ್ದೆಯ ಬಗ್ಗೆ ಅರಿವು ಮೂಡಿಸಲಾಯಿತು.

ಕೇಂದ್ರ ಸರ್ಕಾರವು ಕೈಮಗ್ಗ ಮೀಸಲಾತಿ ಅಧಿನಿಯಮ-1985 ಕಾಯ್ದೆಯನ್ನು ಜಾರಿಗೆ ತಂದಿದ್ದು ಈ ಕಾಯ್ದೆಯಡಿ ವಿದ್ಯುತ್ ಮಗ್ಗದಲ್ಲಿ ರೇಷ್ಮೆ ಸೀರೆ, ದೋತಿ, ಟವಲ್ ಮತ್ತು ಗಮ್‍ಚ, ಲುಂಗಿ, ಬೆಡ್ ಶೀಟ್, ಬೆಡ್ ಕವರ್, ಚಮಕಲಮ್, ಡ್ರೆಸ್ ಮೇಟಿರೀಯಲ್, ಕಂಬಳಿ, ಶಾಲ್, ಉಲ್ಲನ್ ಟ್ವೀಡ್, ಚಾದರ್ ಈ 11 ವಿವಿಧ ಬಗೆಯ ಉತ್ಪನ್ನಗಳನ್ನು ಉತ್ಪಾದಿಸುವಲ್ಲಿ ಮೀಸಲಾತಿ ಇರುವುದರ ಬಗ್ಗೆ ನೇಕಾರರಿಗೆ ಮಾಹಿತಿ ನೀಡಿದರು.

ದೊಡ್ಡಬಳ್ಳಾಪುರ ತಾಲ್ಲೂಕು ದಕ್ಷಿಣ ಭಾಗದಲ್ಲಿ ಭೌಗೋಳಿಕವಾಗಿ ಅತಿ ಹೆಚ್ಚು ನೇಕಾರಿಕೆ ಸಾಂದ್ರತೆ ಇರುವ ಪ್ರದೇಶವಾಗಿದ್ದು ಈ ಭಾಗದಲ್ಲಿ ಹೆಚ್ಚಾಗಿ ವಿದ್ಯುತ್ ಮಗ್ಗವನ್ನು ಅವಲಂಬಿಸಿ ನೇಕಾರರು ಜೀವನವನ್ನು ಸುಧಾರಿಸುತ್ತಿರುತ್ತಾರೆ. ಈ ನಿಟ್ಟಿನಲ್ಲಿ ಸದರಿ ಮಗ್ಗಗಳಲ್ಲಿ ಮೀಸಲಿರಿಸಿರುವ ಉತ್ಪನ್ನಗಳನ್ನು ಹೊರತುಪಡಿಸಿ ಡೂಪೀಯಾನ್, ಎಲ್ ಟಿ ಪಾಲಿಸ್ಟಾರ್ ನಂತಹ ಇತರೆ ಉತ್ಪನ್ನಗಳನ್ನು ಉತ್ಪಾದನೆಯಲ್ಲಿ ತೊಡಗಿಸಿಕೊಳ್ಳಬಹುದೆಂದು ನೇಕಾರರಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ಉಪನಿರ್ದೇಶಕರು ಅರಿವು ಮೂಡಿಸಿದರು.

ಕಾರ್ಯಕ್ರಮದಲ್ಲಿ ಕೇಂದ್ರ ಸರ್ಕಾರದ ಪ್ರಾದೇಶಿಕ ಜಾರಿ ನಿರ್ದೇಶನಾಲಯದ ಅಧಿಕಾರಿ ಮನೋಹರ್, ಜಿಲ್ಲೆಯ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರಾದ ಸೌಮ್ಯ ಎಂ, ಸಹಾಯಕ ನಿರ್ದೇಶಕರಾದ ಸುರೇಶ್ ಕುಮಾರ್ ಎಸ್, ಕೈಮಗ್ಗ ಮತ್ತು ಜವಳಿ ಇಲಾಖೆ ಅಧಿಕಾರಿ ಷನ್ಮುಗಂ, ನೇಕಾರರು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು