LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಕನ್ನಡದಲ್ಲಿ ಬರಲಿದೆ ಅಯೋಧ್ಯೆಯ ಶ್ರೀರಾಮಮಂದಿರದ ಬಯೋಪಿಕ್

ಈ ಐತಿಹಾಸಿಕ ಚಿತ್ರಕ್ಕೆ ಸಾಕಷ್ಟು ಯಶಸ್ವಿ ಚಿತ್ರಗಳ ನಿರ್ದೇಶಕ ಶ್ರೀನಿವಾಸರಾಜು ನಿರ್ದೇಶನಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣಪ್ರತಿಷ್ಠಾಪನೆಯಾದ ಮಹಾಪರ್ವ ಕಾಲವಿದು. ಆದರೆ ಶ್ರೀರಾಮ ತನ್ನ ಜನ್ಮಭೂಮಿಯಲ್ಲಿ ಪ್ರತಿಷ್ಠಾಪನೆಯಾಗಲು 500 ವರ್ಷಗಳು ಕಾಯಬೇಕಾಯಿತು. 1528 ರಲ್ಲಿ ಅಯೋಧ್ಯೆಯಲ್ಲಿ ಬಾಬರಿ ಮಸೀದಿ ನಿರ್ಮಾಣವಾಯಿತು.

ಆನಂತರ ಆ ಜಾಗದಲ್ಲಿ ಶ್ರೀರಾಮನ ಮಂದಿರ ನಿರ್ಮಾಣವಾಗಬೇಕೆಂದು ಸಾಕಷ್ಟು ಹೋರಾಟಗಳು ನಡೆದವು. ಈ ವಿವಾದ ಕೋರ್ಟ್ ಮೆಟ್ಟಿಲು ಏರಿತ್ತು. ನೂರಕ್ಕೂ ಹೆಚ್ಚು ವರ್ಷಗಳ ಕಾಲ ಯಾವುದಾದರೂ ಒಂದು ಕೇಸ್ ಕೋರ್ಟ್ ನಲ್ಲಿ ನಡೆದಿದ್ದರೆ ಅದು ಶ್ರೀರಾಮ ಜನ್ಮಭೂಮಿಯದೆ ಇರಬಹುದು. ಕೊನೆಗೂ 2019 ರಲ್ಲಿ ನ್ಯಾಯಾಲಯ ಅಯೋಧ್ಯೆಯಲ್ಲಿ ಶ್ರೀರಾಮನ ದೇವಾಲಯ ನಿರ್ಮಾಣಕ್ಕೆ ಅನುಮತಿ ನೀಡಿತ್ತು. 2024 ರ ಜನವರಿಯಲ್ಲಿ ಅದ್ದೂರಿಯಾಗಿ ಶ್ರೀರಾಮನ ಪ್ರತಿಷ್ಠಾಪನೆಯಾಯಿತು. ಕೋಟ್ಯಾಂತರ ಜನರ ಕನಸು ನನಸ್ಸಾಯಿತು.

ಈ ಅಯೋಧ್ಯೆಯ ಶ್ರೀರಾಮನ ಮಂದಿರದ ಬಯೋಪಿಕ್ ಅನ್ನು ಸಿನಿಮಾ ರೂಪದಲ್ಲಿ ತರಲು ನಿರ್ದೇಶಕ ಶ್ರೀನಿವಾಸರಾಜು ಮುಂದಾಗಿದ್ದಾರೆ. ಈ ಚಿತ್ರದ ಶೀರ್ಷಿಕೆ ಇನ್ನು ನಿಗದಿಯಾಗಿಲ್ಲ. ಆದರೆ "ಸತ್ಯಂ ಶಿವಂ ಸುಂದರಂ" ಎಂಬ ಟ್ಯಾಗ್ ಲೈನ್ ಇದೆ. "ಕೃಷ್ಣಂ ಪ್ರಣಯ ಸಖಿ" ಚಿತ್ರವನ್ನು ನಿರ್ಮಿಸಿರುವ ಪ್ರಶಾಂತ್ ಜಿ ರುದ್ರಪ್ಪ ತ್ರಿಶೂಲ್ ಎಂಟರ್ಟೈನ್ಮೆಂಟ್ ಸಂಸ್ಥೆ ಮೂಲಕ ಈ ಚಿತ್ರವನ್ನು ನಿರ್ಮಾಣ ಮಾಡಲಿದ್ದಾರೆ..

ಸಾಮಾನ್ಯವಾಗಿ ಮನುಷ್ಯರ ಬಯೋಪಿಕ್ ಇರುತ್ತದೆ. ಆದರೆ, ದೇವಸ್ಥಾನವೊಂದರ ಬಯೋಪಿಕ್ ಇರುವುದು ಅಯೋಧ್ಯೆಯ ಶ್ರೀರಾಮಮಂದಿರಕ್ಕೆ ಮಾತ್ರ ಎನ್ನುವುದು ನನ್ನ ಅಭಿಪ್ರಾಯ. ಸುಮಾರು 500 ವರ್ಷಗಳ ಇತಿಹಾಸವನ್ನು ತೆರೆಯ ಮೇಲೆ ತರುವ ಪ್ರಯತ್ನ ಮಾಡುತ್ತಿದ್ದೇನೆ. ಕನ್ನಡದಲ್ಲಿ ಈ ಚಿತ್ರ ನಿರ್ಮಾಣವಾಗಲಿದೆ. ಬಾಬರಿ ಮಸೀದಿ ಗೂ ಮೊದಲು ರಾಜಾ ವಿಕ್ರಮಾದಿತ್ಯ ಪ್ರತಿಷ್ಠಾಪಿಸಿದ ಶ್ರೀರಾಮ ಮಂದಿರದಿಂದ ಈ ಚಿತ್ರದ ಕಥೆ ತೆರೆದುಕೊಳ್ಳುತ್ತದೆ. ಇದರ ಜೊತೆಗೆ ರಾಮಾಯಣದ ಕೆಲವು ಅಂಶಗಳನ್ನು ತೆಗೆದುಕೊಳ್ಳುತ್ತಿದ್ದೇನೆ.

ಹಾಗಂತ ಇದು ಸಂಪೂರ್ಣ ರಾಮಾಯಣದ ಕಥೆಯಲ್ಲ. ದಶರಥ, ರಾಮ, ಸೀತಾ, ಹನುಮಂತ, ವಾಲಿ ಹಾಗೂ ವಾಲ್ಮೀಕಿ ಈ ಆರು ಪಾತ್ರಗಳು ಮಾತ್ರ ಇರುತ್ತದೆ. ತುಳಿಸಿದಾಸರ ಪಾತ್ರ ಕೂಡ ಈ ಚಿತ್ರದಲ್ಲಿರಲಿದೆ. ಶ್ರೀರಾಮನ ಆದರ್ಶದ ಗುಣಗಳನ್ನು ಈ ಚಿತ್ರದಲ್ಲಿ ತೋರಿಸಲಾಗುತ್ತದೆ. "ಸತ್ಯಂ ಶಿವಂ ಸುಂದರಂ" ಎಂಬ ಟ್ಯಾಗ್ ಲೈನ್ ಈ ಚಿತ್ರಕ್ಕಿದ್ದು, ಮೂರು ಭಾಗಗಳಲ್ಲಿ ಚಿತ್ರ ಬರಲಿದೆ.

ಶೀರ್ಷಿಕೆ ಇನ್ನು ನಿಗದಿಯಾಗಿಲ್ಲ. ಚಿತ್ರ ಬಹಳ ಅದ್ದೂರಿಯಾಗಿ ನಿರ್ಮಾಣವಾಗಲಿದ್ದು, ಭಾರತದ ಹೆಸರಾಂತ ಕಲಾವಿದರು ಹಾಗೂ ತಂತ್ರಜ್ಞರು ಈ ಚಿತ್ರದಲ್ಲಿ ಭಾಗಿಯಾಗಲಿದ್ದಾರೆ. ನಾನೇ ಕಥೆ, ಚಿತ್ರಕಥೆ ಬರೆದಿದ್ದೇನೆ. ಶ್ರೀರಾಮನವಮಿಯ ಪರ್ವಕಾಲದಲ್ಲಿ ಈ ನೂತನ ಚಿತ್ರದ ಕುರಿತು ಇಷ್ಟು ಹೇಳಲು ಬಯಸುತ್ತೇನೆ. ಮುಂದಿನ ದಿನಗಳಲ್ಲಿ ಚಿತ್ರದ ಶೀರ್ಷಿಕೆ ಸೇರಿದಂತೆ ಹೆಚ್ಚಿನ ಮಾಹಿತಿ ನೀಡುವುದಾಗಿ ನಿರ್ದೇಶಕ ಶ್ರೀನಿವಾಸರಾಜು ತಿಳಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು