LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಉದಯನಿಧಿ ಸ್ಟಾಲಿನ್ ಪೊಲೀಸ್ ವಶಕ್ಕೆ ನಟಿ ತ್ರಿಷಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ಹಿನ್ನೆಲೆ


ಚೆನ್ನೈ: ತಮಿಳುನಾಡಿನ ಮಾಜಿ ಉಪಮುಖ್ಯಮಂತ್ರಿ ಹಾಗೂ ಪ್ರಸ್ತುತ ವಿರೋಧಪಕ್ಷದ ನಾಯಕರಾಗಿರುವ ಡಿಎಂಕೆ ಪಕ್ಷದ ಉದಯನಿಧಿ ಸ್ಟಾಲಿನ್ ಅವರನ್ನು ಪೋಲಿಸರು ವಶಕ್ಕೆ ಪಡೆದುಕೊಂಡಿದ್ದಾರೆ. ತಂಜಾವೂರಿನಲ್ಲಿ ನಡೆದ ಕಾವೇರಿ ನೀರು ಹಂಚಿಕೆ ಪ್ರತಿಭಟನೆಯಲ್ಲಿ ನಟಿ ತ್ರಿಷಾ ಕೃಷ್ಣನ್ ಅವರ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ, ಮುಖ್ಯಮಂತ್ರಿ ವಿಜಯ್ ನೇತೃತ್ವದ `ತಮಿಳಾಗ ವೆಟ್ರಿ ಕಳಗಂ' ಪಕ್ಷ ನೀಡಿದ ದೂರಿನನ್ವಯ ಈ ಕ್ರಮ ಕೈಗೊಳ್ಳಲಾಗಿದೆ.ತಂಜಾವೂರಿನಲ್ಲಿ ಕಾವೇರಿ ನೀರಿನ ಬಿಕ್ಕಟ್ಟಿನ ಕುರಿತು ಡಿಎಂಕೆ ಆಯೋಜಿಸಿದ್ದ ರೈತರ ಪ್ರತಿಭಟನಾ ಸಭೆಯಲ್ಲಿ ಉದಯ ನಿಧಿ ಸ್ಟಾಲಿನ್ ಮಾತನಾಡುತ್ತಿದ್ದರು. ಉದಯನಿಧಿ ಅವರು ಮುಖ್ಯಮಂತ್ರಿ ಜೋಸೆಫ್ ವಿಜಯ್ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾಗ, ಸಭೆಯಲ್ಲಿದ್ದ ಕೆಲವರು ನಟಿ ತ್ರಿಷಾ ಅವರ ಹೆಸರನ್ನು ಕೂಗಲು ಪ್ರಾರಂಭಿಸಿದರು. ಇದಕ್ಕೆ ನಗುತ್ತಲೇ ಪ್ರತಿಕ್ರಿಯಿಸಿದ ಉದಯನಿಧಿ, ನೀರು ಎಲ್ಲಿಗೆ ತಲುಪುತ್ತದೋ ಇಲ್ಲವೋ, ಅಲ್ಲಿಗೆ ತಲುಪಲೇಬೇಕು. ನಾನು ಹೇಳಿದ್ದು ಕಾವೇರಿ ನೀರನ್ನು'' ಎಂದು ದ್ವಂದ್ವಾರ್ಥ ಬರುವ ರೀತಿಯಲ್ಲಿ ಮಾತನಾಡಿದ್ದರು. ಈ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.ಉದಯನಿಧಿ ಅವರ ಈ ಹೇಳಿಕೆಯನ್ನು ಕಟುವಾಗಿ ಖಂಡಿಸಿರುವ ಟಿವಿ ಕೆ ಪಕ್ಷ ಹಾಗೂ ಮಹಿಳಾ ಘಟಕದ ನಾಯಕಿಯರು ತಂಜಾವೂರು ಪೊಲೀಸ್ ಠಾಣೆ ಮತ್ತು ರಾಷ್ಟಿçÃಯ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ. 

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿಯದ ಯಶವಂತರಾಯಗೌಡರಾಜೀನಾಮೆ ನೀಡಿದರೆ  ತಕ್ಷಣ ಅಂಗೀಕಾರಸಂಪ್‌ನೊಳಗೆ ಬಿದ್ದಿದ್ದ ಗೋವು ರಕ್ಷಣೆಉದಯನಿಧಿ ಸ್ಟಾಲಿನ್ ಪೊಲೀಸ್ ವಶಕ್ಕೆ ನಟಿ ತ್ರಿಷಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ಹಿನ್ನೆಲೆವೈಭವದಿಂದ ಜರುಗಿದ ಶ್ರೀ ಕೃಷ್ಣರಾಜಮುಡಿ ಉತ್ಸವ`ರತ್ನಗರ್ಭ’ದ ಫಸ್ಟ್ ಲುಕ್  ಮೋಷನ್ ಪೋಸ್ಟರ್ ಬಿಡುಗಡೆ`ಕರ್ಣಾಟಬಲಂ ಅಜೇಯಂ' ಚಿತ್ರಕ್ಕಾಗಿ ಬಾದಾಮಿ ಬೆಟ್ಟದಲ್ಲಿ ಮೇಳೈಸಿದ ಕಲಾಮೇಳಹಣದ ವ್ಯಾಮೋಹದಲ್ಲಿ ಕಳೆಗುಂದಿದ ಮಾನವೀಯತೆ: ಪೋಷಕರನ್ನು ನಿರ್ಲಕ್ಷಿಸುವವರ ವಿರುದ್ಧ ಕಾಯ್ದೆಯ ಅಸ್ತ್ರ-ನ್ಯಾಯಾಧೀಶೆ ಜಯಶ್ರೀತೈಪೆ ಓಪನ್ ಬ್ಯಾಡ್ಮಿಂಟನ್ ಗೆದ್ದು ಇತಿಹಾಸ ಬರೆದ 17ರ ತನ್ವಿ ಶರ್ಮಾಶ್ರೀಲಂಕಾ-ಭಾರತ ಟೆಸ್ಟ್ ಸರಣಿಯಿಂದ ಜಸ್ಟ್ರೀತ್ ಬುಮ್ರ ಔಟ್, ಆಕಿಬ್ ನಬಿ ಇನ್!