LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಟೆಸ್ಟ್ ಕ್ರಿಕೆಟ್‌ನಲ್ಲಿ ಬ್ಯಾಡ್ ಲೈಟ್ ಸಮಸ್ಯೆಗೆ ಮುಕ್ತಿ

ಅಹಮದಾಬಾದ್: ಟೆಸ್ಟ್ ಪಂದ್ಯದಲ್ಲಿ ಒಂದು ದಿನಕ್ಕೆ 90 ಓವರ್ ಗಳೆಂದು ನಿಗದಿಯಾಗಿದ್ದರೂ ಮಂದ ಬೆಳಕಿ (Bad Light) ನಿಂದಾಗಿ ಬಹಳಷ್ಟು ವೇಳೆ ಕಡ್ಡಾಯ 85 ಓವರ್ ಗಳನ್ನೂ ಆಡಲು ಸಾಧ್ಯವಾಗುವುದಿಲ್ಲ. ಈ ಕಾರಣಕ್ಕೆ ಪಂದ್ಯ ಸ್ಥಗಿತಗೊಳ್ಳುವ ಸಮಸ್ಯೆಯನ್ನು ನಿಯಂತ್ರಿಸಲು, ಕೆಂಪು ಚೆಂಡಿನ ಬದಲಾಗಿ ಪಿಂಕ್ (ಗುಲಾಬಿ) ಬಣ್ಣ ಚೆಂಡನ್ನು ಬಳಸುವ ಪ್ರಾಯೋಗಿಕ ಯೋಜನೆಗೆ ಇದೀಗ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ಅನುಮೋದನೆ ನೀಡಿದೆ.
ಅಹಮದಾಬಾದ್‌ನಲ್ಲಿ ನಡೆದ ಐಸಿಸಿಯ ವಾರ್ಷಿಕ ಮಂಡಳಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಪಂದ್ಯದ ಓವರ್‌ಗಳನ್ನು ಪೂರ್ಣಗೊಳಿಸಲು ಫ್ಲಡ್‌ಲೈಟ್‌ಗಳನ್ನು ಬಳಸಲು ಅನುಮತಿ ನೀಡಲಾಗಿದೆ. ಆದರೆ ಸರಣಿ ಆರಂಭಕ್ಕೂ ಮುನ್ನ ಎರಡೂ ತಂಡಗಳು ಒಪ್ಪಿಗೆ ಸೂಚಿಸಿದರೆ ಮಾತ್ರ
ಈ ನಿಯಮ ಅನ್ವಯವಾಗುತ್ತದೆ.
ಎರಡು ದಿನಗಳ ಕಾಲ ನಡೆದ ಈ ಸಭೆಯಲ್ಲಿ ಹಲವು ಪ್ರಮುಖ ನಿಯಮಗಳ ಬದಲಾವಣೆಗೆ ನಿರ್ಧಾರ ಕೈಗೊಳ್ಳಲಾಗಿದೆ. ಟೆಸ್ಟ್ ಪಂದ್ಯದ ಪಾನೀಯ ವಿರಾಮ (ಆಡಿiಟಿಞ ಃಡಿeಚಿಞ) ವೇಳೆ ಮುಖ್ಯ ತರಬೇತುದಾರರು ಮೈದಾನಕ್ಕೆ ಪ್ರವೇಶಿಸಲು ಅನುಮತಿ, ಅಕ್ರಮ ಬೌಲಿಂಗ್ ಶೈಲಿಯನ್ನು ಪರಿಶೀಲಿಸಲು ಪಂದ್ಯದ ಅಧಿಕಾರಿಗಳಿಗೆ ಹಾಕ್-ಐ ಡೇಟಾ ಲಭ್ಯವಾಗುವಂತೆ ಮಾಡುವುದು ಮತ್ತು ಲೆಗ್-ಸೈಡ್ ವೈಡ್ ಪ್ರಾಯೋಗಿಕ ನಿಯಮವನ್ನು ಕಾಯಂಗೊಳಿಸುವುದು ಇದರಲ್ಲಿ ಸೇರಿವೆ. ಇದರೊಂದಿಗೆ, ಸದಸ್ಯತ್ವದ ಜವಾಬ್ದಾರಿಗಳನ್ನು ಉಲ್ಲಂಘಿಸಿದ ಕಾರಣಕ್ಕೆ ಕ್ರಿಕೆಟ್ ಕೆನಡಾವನ್ನು ಅಮಾನತುಗೊಳಿಸಲಾಗಿದೆ ಮತ್ತು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯ ಚುನಾವಣೆಯ ಮೇಲ್ವಿಚಾರಣೆಗೆ ಹಿರಿಯ ಐಸಿಸಿ ಅಧಿಕಾರಿಗಳನ್ನು ನಿಯೋಜಿಸಲಾಗಿದೆ.
ಸಾಮಾನ್ಯವಾಗಿ ಟೆಸ್ಟ್ ಕ್ರಿಕೆಟ್‌ನಲ್ಲಿ ಒಂದು ದಿನಕ್ಕೆ 90 ಓವರ್‌ಗಳನ್ನು ನಿಗದಿಪಡಿಸಲಾಗಿರುತ್ತದೆ. ಪಂದ್ಯವು ಸಾಂಪ್ರದಾಯಿಕ ಕೆಂಪು ಚೆಂಡಿನಲ್ಲೇ ಆರಂಭವಾಗುತ್ತದೆ. ಒಂದು ವೇಳೆ ಕೆಂಪು ಚೆಂಡಿನಲ್ಲಿ 75 ಓವರ್‌ಗಳು ಮುಗಿದ ನಂತರ ಮಂದಬೆಳಕಿನ ಸಮಸ್ಯೆ ಎದುರಾಗಿ, ಉಳಿದ 15 ಓವರ್‌ಗಳನ್ನು ಆಡಿಸಲು ಸಾಧ್ಯವಾಗದಿದ್ದರೆ, ಆಗ ಫ್ಲಡ್‌ಲೈಟ್‌ಗಳನ್ನು ಆನ್ ಮಾಡಿ ಪಿಂಕ್ ಚೆಂಡಿನ ಮೂಲಕ ಆ ಓವರ್‌ಗಳನ್ನು ಪೂರ್ಣಗೊಳಿಸಬಹುದು. ಟೆಸ್ಟ್ ಕ್ರಿಕೆಟ್‌ನಲ್ಲಿ ಸಮಯ ವ್ಯರ್ಥವಾಗುವುದನ್ನು ತಡೆಯಲು ಈ ಮಾದರಿಯನ್ನು ರೂಪಿಸಲಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು