LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಮಳವಳ್ಳಿಯಲ್ಲಿ ಬಹುಜನ ದಿವಸ್ ಜಾಗೃತಿ ಸಮಾವೇಶ

ಮಳವಳ್ಳಿ: ಒಳಮೀಸಲಾತಿ ಹೆಸರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಉದ್ದೇಶಪೂರ್ವಕವಾಗಿ ಪರಿಶಿಷ್ಟ ಜಾತಿಗಳನ್ನು ಒಡೆಯುವ ನೀತಿಯನ್ನು ಅನುಸರಿಸಿದೆ ಎಂದು ಬಹುಜನ ಸಮಾಜ ಪಕ್ಷದ (ಬಿಎಸ್ಪಿ) ರಾಜ್ಯಾಧ್ಯಕ್ಷ ಎಂ. ಕೃಷ್ಣಮೂರ್ತಿ ಆರೋಪಿಸಿದರು.
ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಪುತ್ಥಳಿ ಆವರಣದಲ್ಲಿ ಬಹುಜನ ಸಮಾಜ ಪಕ್ಷದ ಸಂಸ್ಥಾಪಕರಾದ ಕಾನ್ಶಿರಾಂ ಜೀ ಅವರ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ಬಹುಜನ ದಿವಸ್ ಜಾಗೃತಿ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪರಿಶಿಷ್ಟ ಜಾತಿಯ ಒಂದು ಪಂಗಡ ಒಳಮೀಸಲಾತಿಗಾಗಿ ಕಳೆದ 35 ವರ್ಷಗಳಿಂದ ಹೋರಾಟ ನಡೆಸುತ್ತಿದೆ. ಈ ವಿಚಾರವಾಗಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ನೇತೃತ್ವದಲ್ಲಿ ಸಮಿತಿಯನ್ನು ರಚಿಸಿತ್ತು. ಆದರೆ ಅವೈಜ್ಞಾನಿಕ ರೋಸ್ಟರ್ ವ್ಯವಸ್ಥೆ ಅಳವಡಿಸಿ ಪರಿಶಿಷ್ಟ ಜಾತಿಗಳಲ್ಲಿ ಗೊಂದಲ ಉಂಟುಮಾಡಿದೆ ಎಂದು ಅವರು ಹೇಳಿದರು.
ಎಸ್ಸಿ-ಎಸ್ಟಿ ಸಮುದಾಯಗಳಿಗಾಗಿ ಮೀಸಲಾಗಿದ್ದ ಸುಮಾರು ರೂ.53 ಸಾವಿರ ಕೋಟಿ ಹಣವನ್ನು ಬೇರೆ ಯೋಜನೆಗಳಿಗೆ ದುರುಪಯೋಗ ಮಾಡಲಾಗುತ್ತಿದೆ. ಇದರ ಕುರಿತು ಮಳವಳ್ಳಿ ಕ್ಷೇತ್ರದ ಶಾಸಕ ಪಿ.ಎಂ. ನರೇಂದ್ರಸ್ವಾಮಿ ಸೇರಿದಂತೆ ಕಾಂಗ್ರೆಸ್ ದಲಿತ ಶಾಸಕರೂ ಮಾತನಾಡುತ್ತಿಲ್ಲ ಎಂದು ಅವರು ಟೀಕಿಸಿದರು. ಇಂತಹ ದಲಿತ ವಿರೋಧಿ ನೀತಿಗಳನ್ನು ಅನುಸರಿಸುವ ಕಾಂಗ್ರೆಸ್ ಪಕ್ಷಕ್ಕೆ ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸಬೇಕು ಎಂದು ಹೇಳಿದರು.
ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರವೂ ಧರ್ಮದ ಆಧಾರದ ಮೇಲೆ ದೇಶವನ್ನು ಒಡೆಯುತ್ತಿದೆ. ಮೋದಿ ಅಧಿಕಾರಕ್ಕೆ ಬಂದಾಗ ನೀಡಿದ ಭರವಸೆಗಳನ್ನು ಈಡೇರಿಸಿಲ್ಲ. ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷಗಳು ಅಂಬೇಡ್ಕರ್ ಮತ್ತು ಸಂವಿಧಾನ ವಿರೋಧಿ ನೀತಿಗಳನ್ನು ಅನುಸರಿಸುತ್ತಿದ್ದು, ಜಾತಿ ಹಾಗೂ ಧರ್ಮದ ಹೆಸರಿನಲ್ಲಿ ಸಮಾಜವನ್ನು ವಿಭಜಿಸುತ್ತಿವೆ ಎಂದು ಆರೋಪಿಸಿದರು.
ಬಿಎಸ್ಪಿ ರಾಜ್ಯ ಉಪಾಧ್ಯಕ್ಷ ಜಾಕೀರ್ ಹುಸೇನ್ ಮಾತನಾಡಿ, ಮಾರಾಟವಾಗದ ಮತದಾರರನ್ನು ಸೃಷ್ಟಿಸುವ ಮೂಲಕ ಬೇಡುವ ಸಮಾಜವನ್ನು ನೀಡುವ ಸಮಾಜವನ್ನಾಗಿ ಮಾಡುವ ಪ್ರಯತ್ನವನ್ನು ಕಾನ್ಶಿರಾಂ ಜೀ ಮಾಡಿದ್ದಾರೆ. ಮಳವಳ್ಳಿ ಕ್ಷೇತ್ರದ ಮುಸ್ಲಿಂ ಬಾಂಧವರು ಮತ್ತು ದಲಿತರು ಪ್ರಬುದ್ಧ ನಾಯಕತ್ವ ಹೊಂದಿರುವ ಬಹುಜನ ಸಮಾಜ ಪಕ್ಷಕ್ಕೆ ಬೆಂಬಲ ನೀಡಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ರಾಜ್ಯ ಉಸ್ತುವಾರಿಗಳಾದ ಹ.ರಾ ಮಹೇಶ, ಗಂಗಾಧರ್ ಬಹುಜನ್, ರಾಜ್ಯ ಜಿಲ್ಲಾ ಅಧ್ಯಕ್ಷ ಶಿವ ಶಂಕರ್, ಪ್ರಧಾನ ಕಾರ್ಯದರ್ಶಿ ನವೀನ್ ಕುಮಾರ್, ಜಿಲ್ಲಾ ಕಾರ್ಯದರ್ಶಿ ಉಮೇಶ.ಎಸ್.ಮೌರ್ಯ, ಬಿಎಸ್ಪಿ ಮುಖಂಡರಾದ, ಸೇರಿದಂತೆ ಇತರರು ಇದ್ದರು

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು