LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

"ಬಾಲಯ್ಯ ಸಿನಿಮಾದಲ್ಲಿ ನಯನ ತಾರಾ"

ವೀರ ಸಿಂಹ ರೆಡ್ಡಿ ಸೂಪರ್ ಸಕ್ಸಸ್ ಬಳಿಕ ಬಾಲಯ್ಯ ನಿರ್ದೇಶಕ ಗೋಪಿಚಂದ್ ಮಲಿನೇನಿ ಮತ್ತೊಮ್ಮೆ ಕೈ ಜೋಡಿಸಿದ್ದಾರೆ. ಸದ್ಯ ರಾಮ್ ಚರಣ್ ಗೆ ಪೆದ್ದಿ ಚಿತ್ರ ನಿರ್ಮಾಣ ಮಾಡುತ್ತಿರುವ ವೃದ್ಧಿ ಸಿನಿಮಾಸ್ ಬ್ಯಾನರ್ ಅಡಿಯಲ್ಲಿ ವೆಂಕಟ ಸತೀಶ್ ಕಿಲಾರು ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಇದೀಗ ಚಿತ್ರತಂಡ ನಾಯಕಿಯನ್ನು ಪರಿಚಯಿಸಿದೆ.
ಬಾಲಕೃಷ್ಣಗೆ ಜೋಡಿಯಾಗಿ ಲೇಡಿ ಸೂಪರ್ ಸ್ಟಾರ್ ನಯನತಾರಾ ಸಾಥ್ ಕೊಡುತ್ತಿದ್ದಾರೆ. ಇಂದು ನಯನ್ ಬರ್ತಡೇ ವಿಶೇಷವಾಗಿ ಚಿತ್ರತಂಡ ಸ್ಪೆಷಲ್ ವಿಡಿಯೋ ಮೂಲಕ
ಅವರನ್ನು ಸ್ವಾಗತಿಸಿದೆ.

ಅಂದಹಾಗೇ ಸಿಂಹ, ಜೈ ಸಿಂಹ ಮತ್ತು ಶ್ರೀ ರಾಮ ರಾಜ್ಯಂ ಚಿತ್ರಗಳ ಬಳಿಕ ನಾಲ್ಕನೇ ಬಾರಿಗೆ ಬಾಲಯ್ಯ ಹಾಗೂ ನಯನತಾರಾ ಒಂದಾಗುತ್ತಿದ್ದಾರೆ. ಈ
ಯಶಸ್ವಿ ಜೋಡಿಯನ್ನು ಮತ್ತೊಮ್ಮೆ ತೆರೆಯ ಮೇಲೆ ನೋಡಲು ಪ್ರೇಕ್ಷಕರು ಉತ್ಸುಕರಾಗಿದ್ದಾರೆ. ಗೋಪಿಚಂದ್ ಮೆಲನೇನಿ ಅವರು ಈ ಬಾರಿ ಐತಿಹಾಸಿಕ ಕಥೆಯನ್ನು ಹೇಳೋದಿಕ್ಕೆ
ಹೊರಟಿದ್ದಾರೆ. ಕಮರ್ಷಿಯಲ್ ಹಿಟ್ ಕೊಟ್ಟಿರುವ ಬಾಲಯ್ಯ ಅವರನ್ನು ಹೊಸ ಗೆಟಪ್‌ನಲ್ಲಿ ಪ್ರೇಕ್ಷಕರಿಗೆ ತೋರಿಸಲು ಯೋಜನೆ ಹಾಕಿಕೊಂಡಿದ್ದಾರೆ. ಬಹಳ ಅದ್ದೂರಿಯಾಗಿ ಚಿತ್ರ
ನಿರ್ಮಾಣವಾಗಲಿದ್ದು, ಶೀಘ್ರದಲ್ಲೇ ಉಳಿದ ತಾರಾಬಳಗ ಹಾಗೂ ತಾಂತ್ರಿಕ ವರ್ಗದ ಬಗ್ಗೆ ಚಿತ್ರತಂಡ ಮಾಹಿತಿ ನೀಡಲಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು