LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ರೋಹಿತ್ ಶರ್ಮಾ ನಿವೃತ್ತಿ ವದಂತಿಗಳಿಗೆ ಬಿಸಿಸಿಐ ಬ್ರೇಕ್!

ಕ್ರೀಡೆ: ಇಂಗ್ಲೆಂಡ್ ವಿರುದ್ಧ ಲಾರ್ಡ್್ಸ ಮೈದಾನದಲ್ಲಿ ಭಾನುವಾರ ನಡೆಯಲಿರುವ 3ನೇ ಏಕದಿನ ಪಂದ್ಯವೇ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ರೋಹಿತ್ ಶರ್ಮಾ ಅವರ ವೃತ್ತಿಜೀವನದ ಕೊನೆಯ ಅಂತರರಾಷ್ಟ್ರೀಯ ಪಂದ್ಯವಾಗಲಿದೆ ಎಂಬ ಎಲ್ಲಾ ವದಂತಿಗಳನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಅಧಿಕೃತವಾಗಿ ತಳ್ಳಿಹಾಕಿದೆ. ಮಂಡಳಿಯ ಕಾರ್ಯದರ್ಶಿಯಾದ ದೇವಜಿತ್ ಸೈಕಿಯಾ ಅವರು ಮಾಧ್ಯಮಗಳೊಂದಿಗೆ ಮಾತನಾಡಿ, ರೋಹಿತ್ ಶರ್ಮಾ ಅವರ ನಿವೃತ್ತಿಯ ಕುರಿತು ಯಾವುದೇ ರೀತಿಯ ಚರ್ಚೆಗಳು ನಡೆದಿಲ್ಲ ಮತ್ತು ಅವರು ತಂಡದ ಪ್ರಮುಖ ಭಾಗವಾಗಿ ಮುಂದುವರಿಯಲಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.ಲಾರ್ಡ್್ಸ ಕೊನೆಯ ಪಂದ್ಯವಲ್ಲ!: ಇಂಗ್ಲೆAಡ್ ವಿರುದ್ಧದ ಅಂತಿಮ ಏಕದಿನ ಪಂದ್ಯವು 39 ವರ್ಷದ ಮಾಜಿ ನಾಯಕ ರೋಹಿತ್ ಶರ್ಮಾ ಅವರ ವಿದಾಯದ ಪಂದ್ಯವಲ್ಲ ಎಂಬುದನ್ನು ಮಂಡಳಿ ಖಚಿತಪಡಿಸಿದೆ.ಈ ಬಗ್ಗೆ ಮಾತನಾಡಿದ ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ, ರೋಹಿತ್ ಶರ್ಮಾ ಅವರ ಭವಿಷ್ಯದ ಬಗ್ಗೆ ಮಾಧ್ಯಮಗಳಲ್ಲಿ ಸಾಕಷ್ಟು ವದಂತಿಗಳು ಹರಿದಾಡುತ್ತಿವೆ. ಆದರೆ ಭಾನುವಾರ ಲಾರ್ಡ್್ಸನಲ್ಲಿ ರೋಹಿತ್ ತಮ್ಮ ಕೊನೆಯ ಪಂದ್ಯವನ್ನು ಆಡಲಿದ್ದಾರೆ ಎಂಬ ಯಾವುದೇ ಚರ್ಚೆ ನಡೆದಿಲ್ಲ ಎಂದು ನಾನು ದೃಢವಾಗಿ ಹೇಳಲು ಬಯಸುತ್ತೇನೆ ಎಂದು ತಿಳಿಸಿದ್ದಾರೆ. ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಮತ್ತು ಮುಖ್ಯ ಕೋಚ್ ಗೌತಮ್ ಗಂಭೀರ್ ಅವರು ರೋಹಿತ್ ಶರ್ಮಾ ಅವರನ್ನು ತಂಡದಿAದ ಹಂತಹAತವಾಗಿ ಹೊರಗಿಡಲು ಯೋಚಿಸುತ್ತಿದ್ದಾರೆ ಎಂಬ ವರದಿಗಳ ಬೆನ್ನಲ್ಲೇ ಬಿಸಿಸಿಐ ಈ ಸ್ಪಷ್ಟನೆ ನೀಡುವ ಮೂಲಕ ಗೊಂದಲಗಳಿಗೆ ತೆರೆ ಎಳೆದಿದೆ. ರೋಹಿತ್ ಶರ್ಮಾ ಅವರು 2027 ರ ಏಕದಿನ ವಿಶ್ವಕಪ್‌ವರೆಗೂ ಆಡುವ ಇಚ್ಛೆಯನ್ನು ಹೊಂದಿದ್ದಾರೆ. ಆದರೆ ಅವರ ಫಾರ್ಮ್ ಮತ್ತು ದೈಹಿಕ ಫಿಟ್‌ನೆಸ್ ಆಧರಿಸಿ ಆಯ್ಕೆ ಮಂಡಳಿ ಮುಂದಿನ ನಿರ್ಧಾರ ತೆಗೆದುಕೊಳ್ಳಲಿದೆ ಬಿಸಿಸಿಐ ಕಾರ್ಯದರ್ಶಿ ತಿಳಿಸಿದ್ದಾರೆ.ವದಂತಿಗಳು ಹರಡಲು ಕಾರಣವೇನು?: ಪ್ರಸ್ತುತ ಇಂಗ್ಲೆAಡ್ ವಿರುದ್ಧ ನಡೆಯುತ್ತಿರುವ ದ್ವಿಪಕ್ಷೀಯ ಸರಣಿಯ ಪಂದ್ಯಗಳಲ್ಲಿ ರೋಹಿತ್ ಮಂಕಾಗಿದ್ದರು. ಇದೇ ಸಮಯದಲ್ಲಿ, 2027ರ ವಿಶ್ವಕಪ್ ದೃಷ್ಟಿಯಿಂದ ಯುವ ಆಟಗಾರ ಯಶಸ್ವಿ ಜೈಸ್ವಾಲ್ ಅವರಿಗೆ ಆರಂಭಿಕನಾಗಿ ದೀರ್ಘಾವಧಿಯ ಅವಕಾಶ ನೀಡಲು ಮಂಡಳಿ ಚಿಂತಿಸುತ್ತಿದೆ ಎಂಬ ಮಾಧ್ಯಮ ವರದಿಗಳು ಅಭಿಮಾನಿಗಳಲ್ಲಿ ಆತಂಕ ಮೂಡಿಸಿದ್ದವು. ಈ ಬಗ್ಗೆ ಮಾತನಾಡಿದ ಭಾರತದ ಬ್ಯಾಟಿಂಗ್ ಕೋಚ್ ಸಿತಾಂಶು ಕೊಟಕ್, ರೋಹಿತ್ ಲಾರ್ಡ್್ಸನಲ್ಲಿ ಭರ್ಜರಿ ಕಂಬ್ಯಾಕ್ ಮಾಡಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಮೂಲಕ ಲಾರ್ಡ್್ಸ ಪಂದ್ಯದೊAದಿಗೆ ಹಿಟ್‌ಮ್ಯಾನ್ ನಿವೃತ್ತಿಯಾಗಲಿದ್ದಾರೆ ಎಂಬ ವದಂತಿಯನ್ನು ತಳ್ಳಿಹಾಕಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು