LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ವೈಭವ್ ವಿಷಯದಲ್ಲಿ ತಾಳ್ಮೆ ಇರಲಿ, 22 ವರ್ಷದವರೆಗೆ ಕಾಯಿರಿ: ಕಪಿಲ್ ದೇವ್

ಕ್ರಿಕೆಟ್ ಲೋಕದ ಹೊಸ ಸೆನ್ಸೇಷನ್ ವೈಭವ್ ಸೂರ್ಯವಂಶಿ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಪಾದಾರ್ಪಣೆ ಮಾಡಲು ತುದಿಗಾಲಲ್ಲಿ ನಿಂತಿದ್ದಾರೆ. ಈ ಪಾದಾರ್ಪಣೆಯೊಂದಿಗೆ ಟೀಮ್ ಇಂಡಿಯಾ ಪರ ಅಂತಾರಾಷ್ಟ್ರೀಯ ಪಂದ್ಯವಾಡಿದ ಅತ್ಯಂತ ಕಿರಿಯ ಆಟಗಾರ ಎಂಬ ಹೆಗ್ಗಳಿಕೆ ವೈಭವ್ ಸೂರ್ಯವಂಶಿ ಪಾಲಾಗಲಿದೆ. ಇಂತಹದೊAದು ವಿಶೇಷ ದಾಖಲೆ ಬರೆಯಲಿರುವ ವೈಭವ್ ಸೂರ್ಯವಂಶಿ ಮೇಲೆ ಅತಿಯಾದ ನಿರೀಕ್ಷೆಗಳನ್ನು ಹೇರಬೇಡಿ ಎಂದು ಭಾರತ ತಂಡದ ಮಾಜಿ ನಾಯಕ ಕಪಿಲ್ ದೇವ್ ಮನವಿ ಮಾಡಿದ್ದಾರೆ.ಕಾರ್ಯಕ್ರಮವೊಂದರಲ್ಲಿ ಉದಯೋನ್ಮುಖ ಬ್ಯಾಟಿಂಗ್ ಪ್ರತಿಭೆಯ ಅಸಾಧಾರಣ ಆಟವನ್ನು ಶ್ಲಾಘಿಸಿರುವ ಕಪಿಲ್ ದೇವ್, ವೈಭವ್ ಸೂರ್ಯವಂಶಿ ಮೇಲೆ ಈಗಲೇ ಅತಿಯಾದ ನಿರೀಕ್ಷೆಗಳ ಭಾರವನ್ನು ಹೇರಬೇಡಿ. ಯಾವುದೇ ಹೋಲಿಕೆಗಳನ್ನು ಕೂಡ ಮಾಡಬೇಡಿ. ಒಂದು ವೇಳೆ ಹುಡಗ ವಿಫಲನಾದರೆ ಒತ್ತಡಕ್ಕೆ ಒಳಗಾಗುತ್ತಾನೆ. ಹೀಗಾಗಿ ಯಾರೂ ಸಹ ಅತಿಯಾದ ನಿರೀಕ್ಷೆಗಳನ್ನು ಹೇರಬೇಡಿ ಎಂದು ಕಪಿಲ್ ದೇವ್ ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ.ವೈಭವ್ ಸೂರ್ಯವಂಶಿ ಅವರಲ್ಲಿ ಅದ್ಭುತವಾದ ಪ್ರತಿಭೆ ಇದೆ ಎಂಬುದರಲ್ಲಿ ಯಾವುದೇ ಸಂಶಯವಿಲ್ಲ. ಆದರೆ ಕ್ರಿಕೆಟ್‌ನಲ್ಲಿ ದೀರ್ಘಕಾಲ ಉಳಿಯುವುದು ಕೇವಲ ಆರಂಭಿಕ ಫಾರ್ಮ್ ಮೇಲೆ ನಿರ್ಧಾರವಾಗುವುದಿಲ್ಲ. ವೈಭವ್ ಅವರಿಗೆ ಈಗ ಕೇವಲ 15 ವರ್ಷ. ಅವರಿಗೆ ಇನ್ನೂ ಸಾಕಷ್ಟು ಸಮಯವಿದೆ. ಅವರು 20 ರಿಂದ 22 ವರ್ಷ ತಲುಪಿದ ಬಳಿಕ ಅವರ ಆಟದ ಬಗ್ಗೆ ನಾವು ಒಂದು ನಿರ್ಧಾರಕ್ಕೆ ಬರಬಹುದು ಎಂದು ಕಪಿಲ್ ದೇವ್ ಅಭಿಪ್ರಾಯಪಟ್ಟಿದ್ದಾರೆ.ಸಚಿನ್ ತೆಂಡೂಲ್ಕರ್ ಅವರು 16ನೇ ವಯಸ್ಸಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದಾಗ ಮೂಡಿಸಿದ್ದ ನಿರೀಕ್ಷೆಗಳನ್ನೇ ವೈಭವ್ ಸೂರ್ಯವಂಶಿ ಕೂಡ ಮೂಡಿಸುತ್ತಿದ್ದಾರೆ. ಆದರೆ ಸಚಿನ್ ಅವರಂತೆ ಸುದೀರ್ಘ ಕಾಲ ದೇಶಕ್ಕಾಗಿ ಆಡಲು ವೈಭವ್‌ಗೆ ಸೂಕ್ತ ಸಮಯ ಮತ್ತು ಮುಕ್ತ ವಾತಾವರಣದ ಅಗತ್ಯವಿದೆ ಎಂದು ಇದೇ ವೇಳೆ ಕಪಿಲ್ ದೇವ್ ಹೇಳಿದ್ದಾರೆ. ಕ್ಲಬ್ ಕ್ರಿಕೆಟ್ ಅಥವಾ ವಯೋಮಿತಿಯ ಕ್ರಿಕೆಟ್‌ಗೆ ಹೋಲಿಸಿದರೆ ಹಿರಿಯರ ರಾಷ್ಟ್ರೀಯ ತಂಡದಲ್ಲಿ ಆಡುವುದು ಸಂಪೂರ್ಣ ಭಿನ್ನವಾಗಿರುತ್ತದೆ. ಆದ್ದರಿಂದ ಅವರು ಮೈದಾನಕ್ಕಿಳಿದ ತಕ್ಷಣವೇ ಅದ್ಭುತಗಳನ್ನು ಮಾಡುತ್ತಾರೆ ಎಂದು ನಿರೀಕ್ಷಿಸಬಾರದು. ಈಗ ಅತಿಯಾಗಿ ಹೊಗಳುವವರೇ ಆಟಗಾರ ಫಾರ್ಮ್ ಕಳೆದುಕೊಂಡಾಗ ತಕ್ಷಣವೇ ಟೀಕಿಸಲು ಶುರು ಮಾಡುತ್ತಾರೆ. ಇಂತಹ ಹೈಪ್‌ಗಳಿಂದ ವೈಭವ್ ಸೂರ್ಯವಂಶಿಯನ್ನು ದೂರ ಇಡುವುದು ಉತ್ತಮ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು