LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಟೂರ್ನಿ ಪ್ರಾರಂಭಕ್ಕೆ ಮುನ್ನವೇ RCB `ಜೋಶ್'ಗೆ ಹಿನ್ನಡೆ!

ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ (RCB) ಬೆಂಗಳೂರು ತಂಡ ಇದೀಗ ಇಂಡಿಯನ್ ಪ್ರೀಮಿಯರ್ ಲೀಗ್ ನ 19ನೇ ಆವೃತ್ತಿಗೆ ಭರ್ಜರಿ ತಯಾರಿಯಲ್ಲಿ ನಿರತವಾಗಿದೆ. ಆದರೆ ಗಾಯಗೊಂಡಿರುವ ತಂಡದ ಪ್ರಧಾನ ವೇಗಿ ಜೋಶ್ ಹೇಜಲ್ವುಡ್ ಅವರು ನಿಧಾನಗತಿಯಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ. ಹೀಗಾಗಿ ಮಾರ್ಚ್ 28ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಭಾಗವಹಿಸುವುದು ಅನುಮಾನವಗಿದೆ.
ಕಳೆದ ಆವೃತ್ತಿಯಲ್ಲಿ ಆರ್ ಸಿಬಿ ಯಶಸ್ಸಿನಲ್ಲಿ ಮಹತ್ವದ ಪಾತ್ರ ವಹಿಸಿದ್ದ ಅವರು ಇದೀಗ ಸ್ಪರ್ಧಾತ್ಮಕ ಕ್ರಿಕೆಟ್ ನಲ್ಲಿ ಹೆಚ್ಚು ಕಾಣಿಸಿಕೊಂಡಿಲ್ಲ. 2025ರ ನವೆಂಬರ್ ನಲ್ಲಿ ದೇಶೀಯ ಕ್ರಿಕೆಟ್ ಟೂರ್ನಿ ಆಗಿರುವ ಶೆಫೀಲ್ಡ್ ಶೀಲ್ಡ್ ಟೂರ್ನಿಯಲ್ಲಿ ವಿಕ್ಟೋರಿಯಾ ಮತ್ತು ನ್ಯೂಸೌತ್ ವೇಲ್ಸ್ ನಡುವಿನ ಪಂದ್ಯದಲ್ಲಿ ಅವರು ಕಾಣಿಸಿಕೊಂಡಿದ್ದು ಕೊನೆ. ಆ ಮೇಲೆ ನಡೆದ ಆ?ಯಶಸ್ ಸರಣಿ ವೇಳೆ ಗಾಯದ ಕಾರಣಕ್ಕೆ ಅವರನ್ನು ಪರಿಗಣಿಸಿರಲಿಲ್ಲ.
ಇತ್ತೀಚೆಗೆ ಮುಗಿದ ಐಸಿಸಿ ಟಿ20 ವಿಶ್ವಕಪ್ 2026 ಟೂರ್ನಿಗೆ ಘೋಷಿಸಲ್ಪಟ್ಟ ಆಸ್ಟೇಲಿಯಾದ ತಂಡದಲ್ಲಿ ಅವರು ಸ್ಥಾನ ಪಡೆದಿದ್ದರು. ಆದರೆ ಐರ್ಲೆಂಡ್ ವಿರುದ್ಧದ ಉದ್ಘಾಟನಾ ಪಂದ್ಯಕ್ಕೂ ಮೊದಲೇ ಅವರು ಮತ್ತೆ ಗಾಯಗೊಂಡರು. ಹೀಗಾಗಿ ಪಂದ್ಯಗಳನ್ನು ಆಡಲು ಸಾಧ್ಯವಾಗಲಿಲ್ಲ. ಹೇಜಲ್ವುಡ್ ಕಳೆದ ಕೆಲ ತಿಂಗಳಿಂದ ಕಾಲಿನ ಸ್ನಾಯು, ಮಂಡಿರಜ್ಜು ನೋವಿನಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರಿಗೆ ಕಣದಲ್ಲಿ ಕಾಣಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಕಳೆದ ಐಪಿಎಲ್ ಸೀಸನ್ ನಲ್ಲೂ ಅವರನ್ನು ಗಾಯದ ಸಮಸ್ಯೆ ವಿಪರೀತ ಕಾಡಿತ್ತು.
``ಅವರಿನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು ಐಪಿಎಲ್ ಆಡಬೇಕಾದರೆ ವೈದ್ಯರ ಅನುಮತಿ ಬೇಕಾಗುತ್ತದೆ. ಹೀಗಾಗಿ ವೈದ್ಯದ ತಂಡ ಕಾದು ನೋಡುವ ನೀತಿ ಅನುಸರಿಸುತ್ತಿದೆ'' ಎಂದು ಮೂಲಗಳು ತಿಳಿಸಿವೆ ಎಂದು ಹಿಂದೂಸ್ತಾನ್ ಟೈಂಸ್ ವರದಿ ಮಾಡಿದೆ.
ಬಿಸಿಸಿಐಯು ಐಪಿಎಲ್ 2026ರ ಮೊದಲ ಹಂತದ 20 ಪಂದ್ಯಗಳ ವೇಳಾಪಟ್ಟಿಯನ್ನು ಮಾರ್ಚ್ 11ರಂದು ಬಿಡುಗಡೆ ಮಾಡಿದೆ. ಪಶ್ಚಿಮಬಂಗಾಳ ಸೇರಿದಂತೆ ಕೆಲ ರಾಜ್ಯಗಳ ಚುನಾವಣೆಯ ದಿನಾಂಕವನ್ನು ಚುನಾವಣಾ ಆಯೋಗ ಬಿಡುಗಡೆ ಮಾಡಿದೊಡನೆ ಉಳಿದ ಪಂದ್ಯಗಳ ವೇಳಾಪಟ್ಟಿ ಸಹ ಬಿಡುಗಡೆ ಆಗುವ ಇದೆ. ಈಗಿನ ವೇಳಾಪಟ್ಟಿಯ ಪ್ರಕಾರ ಮೊದಲ ಹಂತದಲ್ಲಿ ಎಲ್ಲಾ ತಂಡಗಳು ತಲಾ 4 ಪಂದ್ಯಗಳನ್ನು ಆಡಲಿವೆ. ಆರ್ ಸಿಬಿಯು ತನ್ನ ಮೊದಲ ಪಂದ್ಯವನ್ನು ಮಾರ್ಚ್ 28ರಂದು ಬೆಂಗಳೂರಿನಲ್ಲಿ ಸನ್ ರೈಸರ್ಸ್ ವಿರುದ್ಧ,, ಏಪ್ರಿಲ್ 5ರಂದು ಚೆನ್ನೈ ಕಿಂಗ್ಸ್, 10ರಂದು ಗುವಾಹಟಿಯಲ್ಲಿ ರಾಜಸ್ಥಾನ ರಾಯಲ್ಸ್, 12ರಂದು ಮುಂಬೈನಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಆಡಲಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು