ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ 76ನೇ ಹುಟ್ಟುಹಬ್ಬ ಹಾಗೂ ಸಾರ್ವಜನಿಕ ಸೇವೆಯ 25 ವರ್ಷಗಳ ಅಂಗವಾಗಿ ಇಂದು ದೇಶದ ನಾನಾ ರಾಜ್ಯಗಳಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಚರಿಸಲಾಗುತ್ತಿದೆ. ಮೋದಿ ಅವರು ಪ್ರತಿನಿಧಿಸುವ ಉತ್ತರಪ್ರದೇಶದ ವಾರಣಾಸಿಯಲ್ಲಿ ವಿಶೇಷ ಪೂಜೆ ಸಲ್ಲಿಸಿ ಲಾಡು ತಯಾರಿಸಿ ಸಿಹಿ ಹಂಚಿಕೆ ಮಾಡಲಾಗುತ್ತಿದೆ.ಮೋದಿ ಅವರು ಇಂದು ಸೆಮೆಕಂಡಕ್ಟರ್ ಉತ್ಪಾದನೆಗಳ ಪ್ರದರ್ಶನ ನಡೆಯುತ್ತಿರುವ ಸೆಮಿಕಾನ್ ಸ್ಥಳಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ್ದಾರೆ. ಅವರ ಹುಟ್ಟುಹಬ್ಬದ ಅಂಗವಾಗಿ ಬಹುತೇಕ ಕಡೆ ಸ್ವಚ್ಛತಾ ಕಾರ್ಯ ಆರೋಗ್ಯ ತಪಾಸಣೆ, ರಕ್ತದಾನ ಶಿಬಿರಗಳು ನಡೆದಿವೆ. ಪ್ರಮುಖವಾಗಿ ಇಂದು ಸಂಜೆ 6 ಗಂಟೆಯಿAದ 1ಗಂಟೆಗಳ ಕಾಲ ಆಶೀರ್ವಾದ ದೀಪ ಹೆಸರಿನಲ್ಲಿ ದೀಪ ಬೆಳಗಿಸಲು ಕರೆ ನೀಡಲಾಗಿದೆ. ಬೆಂಗಳೂರಿನ ರಾಜ್ಯಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಆಶೀರ್ವಾದ ದೀಪ ಕಾರ್ಯಕ್ರಮ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಪಕ್ಷದ ಹಿರಿಯ ಮುಖಂಡ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿಪಕ್ಷ ನಾಯಕರಾದ ಆರ್. ಅಶೋಕ್ ಚಲವಾದಿ ನಾರಾಯಣಸ್ವಾಮಿ, ರಾಜ್ಯಾಧ್ಯಕ್ಷ ವಿಜಯೇಂದ್ರ ಪಾಲ್ಗೊಳ್ಳಲಿದ್ದಾರೆ.ಇಂದು ಬೆಳಗ್ಗೆ ಯಶವಂತಪುರದ ಅರ್ಜುನ್ ಹೆಲ್ತ್ ಪ್ರಾರ್ಥಮಿಕ ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿತ್ತು. ತುಮಕೂರಿನಲ್ಲಿ ಕೇಂದ್ರ ರಾಜ್ಯ ರೈಲ್ವೆ ಸಚಿವ ವಿ. ಸೋಮಣ್ಣ ಅವರು ರೈಲು ನಿಲ್ದಾಣದಲ್ಲಿ ನಡೆದ ಸತತ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ನಂತರ ಸುಬ್ರಮಣ್ಯ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ರೈಲ್ವೆ ಕೆಳ ಸೇತುವೆ ಉದ್ಘಾಟನೆ ನೆರವೇರಿಸಿ ಸಂಜೆಯವರೆಗೂ ವಿವಿಧ ಸಾಮಾಜಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಕೇಂದ್ರ ಸಚಿವ ಅಮಿತ್ ಶಾ ಅವರು ಮಾತನಾಡಿ, ಪ್ರಧಾನಿ ಅವರು ಪರಿಶ್ರಮ, ತ್ಯಾಗ ಮತ್ತು ಅವರ ಸೇವಾ ಕಾರ್ಯಗಳು ದೇಶದ ಎಲ್ಲರಿಗೂ ಸ್ಫೂರ್ತಿ ಹಾಗೂ ಮಾದರಿಯಾಗಿವೆ ಎಂದು ಶುಭಾಶಯ ಕೋರಿದ್ದಾರೆ.
ಇದೇ ಸಂದರ್ಭದಲ್ಲಿ ಲೋಕಸಭೆ ವಿಪಕ್ಷ ನಾಯಕ ಕಾಂಗ್ರೆಸ್‌ನ ರಾಹುಲ್ ಗಾಂಧಿ ಅವರು ಸಹ ಮೋದಿ ಅವರಿಗೆ ಶುಭಾಶಯ ಕೋರಿ ದೀರ್ಘಾಯುಶ್ಯ ಮತ್ತು ಆರೋಗ್ಯ ಲಭಿಸಲಿ ಎಂದು ಶುಭ ಹಾರೈಸಿದ್ದಾರೆ.