LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಬೆಂಗಳೂರು ಪ್ರೇಮಿಗಳು ಹುಬ್ಬಳ್ಳಿಯಲ್ಲಿ ಆತ್ಮಹತ್ಯೆ

ಹುಬ್ಬಳ್ಳಿ: ಬೆಂಗಳೂರಿನಿಂದ ಹುಬ್ಬಳ್ಳಿಗೆ ಬಂದಿದ್ದ ಜೋಡಿಯೊಂದು ಆಟೋ ಡ್ರೈವರ್ ಮನೆಯಲ್ಲಿಯೇ ನೇಣಿಗೆ ಶರಣಾದ ಘಟನೆ ಹಳೇ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮೊರಾರ್ಜಿ ನಗರದಲ್ಲಿ ನಡೆದಿದೆ.

ಬೆಂಗಳೂರು ಮೂಲದ ಲೋಕೇಶ ಹಾಗೂ ಆತನ ಹೆಂಡತಿಯ ತಂಗಿಯಾದ ಶಾಂತಿ ಎಂಬುವರ ನಡುವೆ ಹಲವು ದಿನಗಳಿಂದ ಅನೈತಿಕ ಸಂಬಂಧ ಇತ್ತು. ಹೀಗಾಗಿ ಇಬ್ಬರು ಬೆಂಗಳೂರಿನಿಂದ ಹುಬ್ಬಳ್ಳಿ ನಗರಕ್ಕೆ ಓಡಿ ಬಂದಿದ್ದಾರೆ.ನಗರದಲ್ಲಿ ಅಟೋವೊಂದನ್ನ ಬಾಡಿಗೆ ಪಡೆದು ಅಕ್ಷಯ ಪಾರ್ಕ್ ಹಾಗೂ ವಿವಿಧ ಬಡಾವಣೆಗಳಿಗೆ ಸಂಚರಿಸಿ ಆಟೋ ಚಾಲಕನಿಗೆ ಹೇಳಿ ಊಟವನ್ನು ತರೆಸಿಕೊಂಡಿದ್ದಾರೆ. ಆಗ ಆಟೋ ಚಾಲಕ ಮೊರಾರ್ಜಿ ನಗರದಲ್ಲಿನ ತನ್ನ ಮನೆಯಲ್ಲಿಯೇ ಊಟವನ್ನು ಮಾಡಿ ಎಂದು ಇವರಿಬ್ಬರಿಗೆ ಹೇಳಿ ತಾನು ಬೇರೆ ಬಾಡಿಗೆ ಬಂದಿದ್ದು ಅವರನ್ನು ಬಿಡಲು ಹೋಗಿದ್ದಾನೆ.

ಪ್ರಯಾಣಿಕರನ್ನು ಬಿಟ್ಟು ಮನೆಗೆ ಬಂದು ನೋಡಿದಾಗ ಇಬ್ಬರೂ ಒಂದೇ ಪ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಕಂಡು ಹೆದರಿ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಹಳೇ ಹುಬ್ಬಳ್ಳಿ ಠಾಣೆಯ ಪೊಲೀಸರು ಎರಡು ಶವಗಳನ್ನು ಕಿಮ್ಸ್ ಶವಾಗಾರಕ್ಕೆ ರವಾನೆ ಮಾಡಿದ್ದಾರೆ.

ಮೃತಪಟ್ಟ ಶಾಂತಿ ಮೂರು ಮದುವೆ ಆಗಿದ್ದಳು. ಅಷ್ಟೇ ಅಲ್ಲದೆ ತನ್ನ ಅಕ್ಕನ ಗಂಡನ ಜೊತೆಯೇ ಅನೈತಿಕ ಸಂಬಂಧ ಹೊಂದಿದ್ದಳು ಎಂಬ ಮಾಹಿತಿ ಲಭ್ಯವಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು