LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಬೆಂಗಳೂರು ವಿವಿ: ಸಂವಹನ ವಿಭಾಗದ ಅದ್ದೂರಿ ಸ್ವಾಗತ ಕೂಟ ಕಾರ್ಯಕ್ರಮ

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಆಯೋಜಿಸಿದ್ದ ‘ಸಂವಹನ ವಿಭಾಗದ ಅದ್ದೂರಿ ಸ್ವಾಗತ ಕೂಟ ಕಾರ್ಯಕ್ರಮವನ್ನು ವಿಭಾಗದ ಮುಖ್ಯಸ್ಥರು ಹಾಗೂ ಪ್ರಾಧ್ಯಾಪಕರಾದ ಪ್ರೊ ಡಾ. ಬಿ. ಶೈಲಶ್ರೀರವರು ಉದ್ಘಾಟಿಸಿದರು.

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳ ಶಿಸ್ತು ಬದ್ಧವಾಗಿ ಅಧ್ಯಯನ ನಡೆಸಿದರೆ ಯಶಸ್ವಿಯಾಗಲು ಪೂರಕವಾಗಲಿದೆ. ಇನ್ನು ಕಾಲೇಜು ಹಂತಗಳಲ್ಲಿ ಸರಿಯಾಗಿ ಮಾಧ್ಯಮಕ್ಕೆ ಸಂಬಂಧಿಸಿದ ಹಲವಾರು ಕೌಶಲ್ಯಗಳನ್ನು ಕಲಿತರೆ ಮುಂಬರುವ ದಿನಗಳಲ್ಲಿ ನಾನಾ ರೀತಿಯ ಮಾಧ್ಯಮಗಳಲ್ಲಿ ಬದುಕು ಕಟ್ಟಿಕೊಳ್ಳಲು ಸಹಕಾರಿಯಾಗಲಿದೆ, ಸಮಾಜಕ್ಕೆ ಇನ್ನಷ್ಟು ಕೊಡುಗೆ ನೀಡಬಹುದೆಂದು ಮತ್ತಿತರ ವಿಷಯಗಳ ಬಗ್ಗೆ ವಿಸ್ತಾರವಾಗಿ ಮಾತನಾಡಿದರು.

ಸಹಾಯಕ ಪ್ರಾಧ್ಯಾಪಕರಾದ ಡಾ. ವಸುಂಧರಾ ಪ್ರಿಯದರ್ಶಿನಿರವರು ಇವರು ಮಾತನಾಡಿದರು. ನಂತರ ಕಾರ್ಯಕ್ರಮದ ಅಂಗವಾಗಿ ಮುಂಚಿತವಾಗಿ ಏರ್ಪಡಿಸಿದ್ದ ವಿಭಾಗದಿಂದ ಹಲವಾರು ಕ್ರೀಡಾ, ಸಾಂಸ್ಕೃತಿಕ, ಮತ್ತಿತರೆ ಚಟುವಟಿಕೆಗಳಲ್ಲಿ ಭಾಗವಹಿಸಿ ವಿಜೇತರಾದವರಿಗೆ ವಿಭಾಗದ ಮುಖ್ಯಸ್ಥರು ಪ್ರೊ . ಡಾ. ಬಿ.ಶೈಲಶ್ರೀರವರು ಬಹುಮಾನ ನೀಡಿದರು.

ವಿಭಾಗದ ಕಿರಿಯ ಮತ್ತು ಹಿರಿಯ ವಿದ್ಯಾರ್ಥಿಗಳಿಂದ ವಿಶೇಷವಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳು, ಗಾಯನ ಸ್ಪರ್ಧೆಗಳು, ಮತ್ತಿತರ ಆಯೋಜಿಸಲಾಯಿತು.ಇದೇ ಸಂದರ್ಭದಲ್ಲಿ ಬೋಧಕೇತರ ಸಿಬ್ಬಂದಿಗಳಾದ ನಾಗೇಶ್ ಕೆ.ಎಸ್, ಮಂಜುನಾಥ್, ಸಂಶೋಧನಾ ವಿದ್ಯಾರ್ಥಿಗಳು, ಸ್ನಾತಕೋತ್ತರ ಪದವಿ ವಿದ್ಯಾರ್ಥಿ - ವಿದ್ಯಾರ್ಥಿನಿಯರು, ಮತ್ತಿತರ ವಿದ್ಯಾರ್ಥಿ ಸಮೂಹದವರು ಪಾಲ್ಗೊಂಡಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು