LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Chitradurga

ಆಗಸ್ಟ್ ವೇಳೆಗೆ ಚಿತ್ರದುರ್ಗ ಶಾಖಾ ಕಾಲುವೆಗೆ ಭದ್ರಾ ನೀರು: ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ

ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆ? ಕಾಮಗಾರಿಗಳಿಗೆ ವೇಗ ನೀ ಡಲಾಗಿದ್ದು,2028ರ ಒಳಾಗಾಗಿ ಎಲ್ಲಾ ಸಿವಿಲ್ ಕಾಮಗಾರಿಗಳನ್ನು ಪೂ ರ್ಣಗೊಳಿಸಲಾಗುವುದು.ಯೋಜನೆಯ ಪ್ರಮುಖ ಅಂಗವಾದ ಚಿತ್ರದು ರ್ಗ ಶಾಖಾ ಕಾಲುವೆಗೆ,ಭದ್ರಾ ಜಲಾಶಯದಲ್ಲಿ ನೀರಿನ ಲಭ್ಯತೆ ಆಧರಿಸಿ ಮುಂಬರುವ ಆಗಸ್ಟ್-2026ವೇಳಗೆ ಪ್ರಾಯೋಗಿಕವಾಗಿ ನೀರನ್ನು ಹರಿ ಸಿ ಚಾಲನೆ ನೀಡಲಾಗುವುದು ಎಂದು ಜಲಸಂಪನ್ಮೂಲ ಸಚಿವ ರಾಮ ಲಿಂಗಾರೆಡ್ಡಿ ಹೇಳಿದರು.ಚಿತ್ರದುರ್ಗ ಶಾಖಾ ಕಾಲುವೆ ಗೋನೂರು ಅಕ್ವಾಡಕ್ಟ್ ಕಾಮಗಾರಿ ವೀಕ್ಷಿ ಸಿದ ಸಚಿವ ರಾಮಲಿಂಗಾರೆಡ್ಡಿ ಅವರು ನಂತರ ಚಿತ್ರದುರ್ಗ ನಗರದ ಭ ದ್ರಾ ಮೇಲ್ದಂಡೆ ಯೋಜನಾ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ.ದಶಕಗಳಿಂದ ನೆನೆಗುದಿಗೆ ಬಿದ್ದಿರುವ ಹಾಗೂ ಈ ಭಾಗದ ರೈತರ ಬಹುಕಾಲದ ಕನಸಾಗಿರುವ ಭದ್ರಾ ಮೇಲ್ದಂಡೆಯೋಜನೆಯನ್ನು 2028ರ ವೇಳೆಗೆ ಸಂಪೂರ್ಣವಾಗಿಪೂರ್ಣಗೊಳಿಸಿ,ಜನರಿಗೆನೀರು ತ ಲುಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು.ಚಿತ್ರದುರ್ಗ ಶಾ ಖಾ ಕಾಲುವೆಯು ಒಟ್ಟು134.597 ಕಿಲೋಮೀಟರ್ ಉದ್ದವನ್ನುಹೊಂ ದಿದ್ದು,ಇದಕ್ಕೆ 16.36 ಟಿ.ಎಂ.ಸಿ ನೀರನ್ನು ಹಂಚಿಕೆ ಮಾಡಲಾಗಿದೆ. ಈ ಮೂಲಕ ಜಗಳೂರು ಶಾಖಾ ಕಾಲುವೆ ಸೇರಿದಂತೆ ಚಳ್ಳಕೆರೆ, ಪಾವ ಗಡ, ಹೊಳಲ್ಕೆರೆ ಮತ್ತು ಮೊಳಕಾಲ್ಮೂರು ತಾಲೂಕುಗಳ ಕೆರೆಗಳನ್ನು ತುಂಬಿಸಲಾಗುವುದು. ಚಿತ್ರದುರ್ಗ ಶಾಖಾ ಕಾಲುವೆಯ ಚಿಕ್ಕಮಗಳೂ ರು ಜಿಲ್ಲೆಯ ಅಜ್ಜಂಪುರದ ಹತ್ತಿರವಿರುವ ವೈ-ಜಂಕ್ಷನ್ನಿAದ ಚಿತ್ರದು ರ್ಗ ತಾಲೂಕಿನ ಗೋನೂರು ಅಕ್ವೆಡಕ್ಟ÷್ವರೆಗಿನ ಒಟ್ಟು 114 ಕಿಲೋಮೀ ಟರ್ ವ್ಯಾಪ್ತಿಯ ಎಲ್ಲಾ ಭೂಸ್ವಾಧೀನ ಪ್ರಕ್ರಿಯೆಯ ಅಡೆತಡೆಗಳು ಸಂ ಪೂರ್ಣವಾಗಿ ನಿವಾರಣೆಯಾಗಿವೆ.ಹೆಗಡೆಹಳ್ಳಿಯ ಬಳಿ 200 ಮೀಟರ್ ಕಲ್ಲು ಬಂಡೆಗಳ ಹಾಸು ಎದುರಾಗಿದ್ದು,ಶೀಘ್ರವೇ ಕಲ್ಲು ಬಂಡೆ ತೆರವು ಗೊಳಿಸಿ ಯೋಜನೆ ಪೂರ್ಣಗೊಳಿಸಲು ತಾಕೀತು ಮಾಡಿದ್ದೇನೆ. ಉಳಿದಂತೆ ಕಾಲುವೆ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ. ಭದ್ರಾ ಜಲಾಶಯದಲ್ಲಿ ನೀರಿನ ಲಭ್ಯತೆಗೆ ಅನುಗುಣವಾಗಿ, ಮುಂಬರುವ ಆ ಗಸ್ಟ್-2026 1ಪ್ರಾಯೋಗಿಕವಾಗಿ ಕಾಲುವೆಯಲ್ಲಿ ನೀರನ್ನು ಹರಿಸಲು ಇಲಾಖೆಯು ಸರ್ವಸನ್ನದ್ಧವಾಗಿ ಯೋಜಿಸಿದೆ. ಈ ಪ್ರಾಯೋಗಿಕ ನೀರು ಹರಿಸುವ ಸಂದರ್ಭದಲ್ಲಿ ನಾಲ್ಕು ತಾಲೂಕುಗಳ ಒಟ್ಟು 78 ಕೆರೆಗಳಿಗೆ ನೀರನ್ನು ತುಂಬಿಸಲು ಯೋಜಿಸಲಾಗಿದ್ದು, ಇದರಲ್ಲಿ ಹೊಸದುರ್ಗದ 32 ಕೆರೆಗಳು, ಹೊಳಲ್ಕೆರೆಯ 30 ಕೆರೆಗಳು, ಹಿರಿಯೂರಿನ 12 ಕೆರೆಗ ಳು ಹಾಗೂ ಚಿತ್ರದುರ್ಗ ತಾಲೂಕಿನ 4 ಕೆರೆಗಳು ಒಳಗೊಂಡಿವೆ ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.ಚಿತ್ರದುರ್ಗ ಶಾಖಾ ಕಾಲುವೆಯ ಒಟ್ಟು ಅಚ್ಚುಕಟ್ಟು ಪ್ರದೇಶ 1,20,46 5 ಹೆಕ್ಟೇರ್ ಆಗಿದ್ದು, ಯೋಜನಾ ವರದಿಯಲ್ಲಿದ್ದ 157 ಕೆರೆಗಳ ಜೊತೆಗೆ ಹೆಚ್ಚುವರಿಯಾಗಿ 383 ಕೆರೆಗಳನ್ನು ಪರಿಗಣನೆಗೆ ತೆಗೆದುಕೊಳ್ಳಲಾಗಿದೆ. ಶಾಸಕ ಕೆ.ಸಿ.ವಿರೇಂದ್ರ ಪಪ್ಪಿ ಅವರು ಚಿತ್ರದುರ್ಗ ತಾಲ್ಲೂಕಿನ 8 ಕೆರೆಗಳ ನ್ನು ಯೋಜನೆಯಡಿ ತುಂಬಿಸಲು ಮನವಿ ಮಾಡಿದ್ದಾರೆ. ಈ ವಿಷಯ ಮಂಡಳಿ ಸಭೆಯಲ್ಲಿ ಚರ್ಚಿಸಿ ಅನುಮೋದನೆ ನೀಡುವುದಾಗಿ ಸಚಿವ ರಾಮಲಿಂಗಾರೆಡ್ಡಿ ಭರವಸೆ ನೀಡಿದರು.ಯೋಜನೆಯಲ್ಲಿ ನಡೆದಿರಬಹುದಾದ ಲೋಪದೋಷಗಳು ಹಾಗೂ ಕಾ ಮಗಾರಿಯ ಗುಣಮಟ್ಟದ ಬಗ್ಗೆ ಹಾಗೂ ಯೋಜನೆಯಡಿ ವಿತರಣಾ ನಾಲೆಗಳು ಹಾಗೂ ಪೈಪ್ಲೆöÊನ್ಗಳ ಸ್ಥಿತಿಗತಿ ಕುರಿತು ಮರು ಸಮೀಕ್ಷೆ ನ ಡೆಸಲು ಆದೇಶಿಸಲಾಗಿದೆ.ವಿತರಣಾ ಕಾಲುವೆಗಳು ಎಲ್ಲೆಲ್ಲಿ ಹಾನಿಗೊಳ ಗಾಗಿವೆ,ಅಥವಾ ಪೈಪ್ಗಳು ನಿರುಪಯುಕ್ತವಾಗಿಬಿದ್ದಿವೆ,ಎಂಬುದನ್ನು ಪತ್ತೆಹಚ್ಚಿ, ಅವುಗಳನ್ನು ದುರಸ್ತಿಗೊಳಿಸಲು ಅಗತ್ಯ ಕ್ರಮ ಕೈಗೊಳ್ಳ ಲಾ ಗುವುದು. ಯೋಜನೆ ಪೂರ್ಣ ಸ್ಥಿತಿಗತಿಗಳನ್ನು ತಿಳಿದು ಕೊಳ್ಳೂವ ಸಲು ವಾಗಿ ವಾರದ ಒಳಗೆ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸುವುದಾಗಿ ಪತ್ರಕರ್ತರ ಪ್ರಶ್ನೆಗೆ ಸಚಿವ ರಾಮಲಿಂಗಾರೆಡ್ಡಿ ಉತ್ತರಿ ಸಿದರು.ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಮಾತನಾಡಿ,ಭದ್ರಾ ಮೇಲ್ದಂಡೆ ಯೋಜನೆಯಡಿ ಜಿಲ್ಲೆಯ ವಿವಿಧ ತಾಲೂಕುಗಳ ಕೆರೆಗಳಿಗೆ ನೀರು ಉ ಣಿಸುವ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸ ಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು.ಜಿಲ್ಲೆಯ ನೀರಾವರಿ ಹಾ ಗೂ ಕುಡಿಯುವ ನೀರಿನ ಸಮಸ್ಯೆ ನೀಗಿಸುವ ನಿಟ್ಟಿನಲ್ಲಿ ಭದ್ರಾಮೇಲ್ದಂ ಡೆ ಯೋಜನೆಯು ಅತ್ಯಂತ ಮಹತ್ವದ್ದಾಗಿದೆ. ಈ ಯೋಜನೆಯ ವ್ಯಾಪ್ತಿಗೆ ಒಳಪಡುವ ಕಡೂರು,ತರೀಕೆರೆ, ಹೊಸದುರ್ಗ, ಹೊಳಲ್ಕೆರೆ,ಹಿರಿಯೂರು ಹಾಗೂ ನಮ್ಮಚಳ್ಳಕೆರೆ,ಮೊಳಕಾಲ್ಮೂರು ತಾಲೂಕುಗಳ ಕೆರೆಗಳಿಗೆ ನೀರು ಕೊಡುವ ಕೆಲಸವನ್ನು ಮುಂದಿನ ವರ್ಷದಲ್ಲಿ ಮುಗಿಸಬೇಕೆಂದು ಉದ್ದೇಶಿಸಲಾಗಿದೆ. ಯೋಜನೆಯ ಅನುಷ್ಠಾನಕ್ಕೆ ಸಂಬAಧಿಸಿದAತೆ ಕೇಂದ್ರ ಸರ್ಕಾರದಿಂದ ರಾಷ್ಟ್ರೀಯ ಯೋಜನೆಯಡಿ ಒಟ್ಟು ರೂ. 5,300 ಕೋಟಿ ಅನುದಾನ ಬಿಡುಗಡೆಯಾಗಬೇಕಿದ್ದು, ಅದನ್ನು ನಾವು ಅತ್ಯಂತ ಆಶಾದಾಯಕವಾ ಗಿ ನಿರೀಕ್ಷಿಸುತ್ತಿದ್ದೇವೆ. ಇದರೊಂದಿಗೆ ರಾಜ್ಯ ಸರ್ಕಾರವೂ ಸಹ ತನ್ನ ಪಾ ಲಿನಿಂದ ಎಷ್ಟು ಸಾಧ್ಯವೋ ಅಷ್ಟು ಹಣವನ್ನು ಒದಗಿಸಿ,ಕಾಮಗಾರಿಯ ನ್ನು ಶೀಘ್ರವಾಗಿ ಮುಗಿಸಲು ಸರ್ವ ರೀತಿಯ ವ್ಯವಸ್ಥೆಗಳನ್ನು ಮಾಡುತ್ತಿ ದೆ ಎಂದು ವಿವರಿಸಿದರು.ಈಗಾಗಲೇ ಸದನದಲ್ಲಿ ಪ್ರಸ್ತಾಪವಾಗಿರುವಂತೆ 2028ರ ಮಾರ್ಚ್ ವೇ ಳೆಗೆ ಯೋಜನೆಯನ್ನು ಪೂರ್ಣಗೊಳಿಸಲು ಗಡುವು ನಿಗದಿಪಡಿಸಲಾಗಿ ದೆ.ಈ ಹಿನ್ನೆಲೆಯಲ್ಲಿ ಕಾಮಗಾರಿಗಳನ್ನು ಚುರುಕುಗೊಳಿಸಲು ಎಲ್ಲ ಅಗ ತ್ಯ ಪ್ರಯತ್ನಗಳನ್ನು ನಡೆಸುವಂತೆ ಸಂಬoಧಪಟ್ಟ ಸಚಿವರಿಗೆ ನಾವೆಲ್ಲ ರೂ ಮನವಿ ಮಾಡಿದ್ದೇವೆ. ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಸಕ್ರಿಯ ಸಹಭಾಗಿತ್ವದಲ್ಲಿ ಯೋಜನೆ ಶೀಘ್ರವಾಗಿ ಪೂರ್ಣಗೊಳ್ಳಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.ಈ ಸಂಧರ್ಭದಲ್ಲಿ ಶಾಸಕರಾದ ಎನ್.ವೈ.ಗೋಪಾಕೃಷ್ಣ,ಬಿ.ಜಿ.ಗೋವಿಂ ದಪ್ಪ,ಕೆ.ಸಿ.ವೀರೇಂದ್ರ ಪಪ್ಪಿ,ವಿಧಾನ ಪರಿಷತ್ ಸದಸ್ಯರಾದಶ್ರೀನಿವಾಸ, ಕೆ.ಎಸ್.ನವೀನ್,ಆದಿ ಜಾಂಬವ ನಿಗಮದ ಅಧ್ಯಕ್ಷ ಜಿ.ಎಸ್.ಮಂಜು ನಾಥ್,ರಾಜ್ಯ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ಡಾ.ಯೋಗೇಶ್ ಬಾಬು, ನ ಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎಂ.ಕೆ.ತಾಜ್ಪೀರ್,ಜಿಲ್ಲಾಧಿಕಾರಿ ಟಿ. ವೆಂಕಟೇಶ್,ಜಿ.ಪA.ಸಿಇಓ ಡಾ.ಎಸ್.ಆಕಾಶ್,ಜಿಲ್ಲಾ ಪೊಲೀಸ್ ವರಿ ಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು,ಭದ್ರಾ ಮೇಲ್ದಂಡೆ ಮುಖ್ಯ ಇಂಜಿನಿಯರ್ ರವಿಶಂಕರ್,ಮಾಜಿ ಸಚಿವ ಹೆಚ್.ಆಂಜನೇಯ,ಮಾಜಿ ಸಂಸದ ಎಂ.ಚAದ್ರಪ್ಪ ಸೇರಿದಂತೆ ಮತ್ತಿರರು ಭಾಗವಹಿಸಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು