LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಭಗೀರಥ ಟೀಸರ್ ಬಿಡುಗಡೆ

ವಿಭಿನ್ನ ಕಥೆಇಟ್ಟು ಕೊಂಡು "ಭಗೀರಥ" ಸಿನಿಮಾ ಬರುತ್ತಿದೆ. ಮುಂದಿನ ತಿಂಗಳು ಜೂನ್(ಮಾನ್ಸೂನ್ ವೇಳೆ)ನಲ್ಲಿ ಚಿತ್ರ ಬಿಡುಗಡೆಯಾಗಲಿದೆ
ಕೆ.ರಮೇಶ್, ಬಿ.ಭೈರಪ್ಪನಿರ್ಮಿಸಿರುವ ಹಾಗೂ ರಾಮ್ ಜನಾರ್ದನ್ ನಿರ್ದೇಶನದ ಈ ಚಿತ್ರದ ಟೀಸರ್ ಬಿಡುಗಡೆಯಾಯಿತು. ಎನ್ ಎಂ ಸುರೇಶ್ ಟೀಸರ್ ಬಿಡುಗಡೆ ಮಾಡಿದರು. ಚಿತ್ರೀಕರಣ ಮುಕ್ತಾಯವಾಗಿ, ತೆರೆಗೆ ಬರಲು ಅಣಿಯಾಗಿದೆ. ಮಂದಿನ ತಿಂಗಳಲ್ಲಿ ತೆರೆಗೆ ತರುವ ಪ್ರಯತ್ನ ನಡೆಯುತ್ತಿದೆ. ಚಿತ್ರತಂಡದ ಸಹಕಾರದಿಂದ ಉತ್ತಮವಾಗಿ ಮೂಡಿಬಂದಿದೆ.

"ಭಗೀರಥ" ನನ್ನ ನಿರ್ದೇಶನದ ಐದನೇ ಚಿತ್ರ. ಇದೊಂದು ಪ್ರಸ್ತುತ ರಾಜಕಾರಣದ ಕಥಾಹಂದರ ಹೊಂದಿರುವ ಹಾಗೂ ಪತ್ರಕರ್ತರೊಬ್ಬರ ಸುತ್ತ ನಡೆಯುವ ಕಥೆ. ಎಂದರು ನಿರ್ದೇಶಕ ರಾಮ್ ಜನಾರ್ದನ್.ಪತ್ರಕರ್ತನಾಗಿದ್ದ ನಾನು, "ಜಮಾನ" ಚಿತ್ರದ ಮೂಲಕ ನಟನಾದೆ ಎಂದು ಮಾತನಾಡಿದ ನಾಯಕ ಜಯಪ್ರಕಾಶ್ ಅವರು, "ಭಗೀರಥ" ನನ್ನ ಮೂರನೇಯ ಚಿತ್ರ. "ಸೂರ್ಯಪ್ರಕಾಶ್" ನನ್ನ ಪಾತ್ರದ ಹೆಸರು. ನಿರ್ದೇಶಕರು ಒಳ್ಳೆಯ ಕಥೆ ಮಾಡಿಕೊಂಡಿದ್ದಾರೆ. "ಭಗೀರಥ" ಹೆಸರಿಗೆ ತಕ್ಕಂತೆ ನೀರಿಗೆ ಸಂಬಂಧಿಸಿದ ಕಥೆಯೂ ಈ ಚಿತ್ರದಲ್ಲಿದೆ ಎಂದರು.

ನಿರ್ದೇಶಕರು ಹೇಳಿದ ಕಥೆ ಇಷ್ಟವಾಯಿತು. ಹಾಗಾಗಿ ನಿರ್ಮಾಣಕ್ಕೆ ಮುಂದಾದೆವು. ಸದ್ಯದಲ್ಲೇ ಚಿತ್ರ ಬಿಡುಗಡೆ ಮಾಡುತ್ತೇವೆ. ಪ್ರೋತ್ಸಾಹ ನೀಡಿ ಎಂದರು ನಿರ್ಮಾಪಕರಾದ ಕೆ.ರಮೇಶ್ ಹಾಗೂ ಬಿ.ಭೈರಪ್ಪ.ನಾನು ನಾಯಕನ ಸೋದರತ್ತೆಯ ಮಗಳ ಪಾತ್ರದಲ್ಲಿ ನಟಿಸಿದ್ದೇನೆ ಎಂದು ನಟಿ ಶ್ರೀಯಾ ಪಾವನಿ ತಿಳಿಸಿದರು. ಹಾಡುಗಳ ಬಗ್ಗೆ ಸಂಗೀತ ನಿರ್ದೇಶಕ ಪ್ರದೀಪ್ ವರ್ಮ ಹಾಗೂ ಛಾಯಾಗ್ರಹಣದ ಕುರಿತು ಸೂರಿ ಚಿತ್ತೂರು ಮಾಹಿತಿ ನೀಡಿದರು. ಜಯಪ್ರಕಾಶ್, ಚಂದನ ರಾಘವೇಂದ್ರ, ಸುಧಾ ಬೆಳವಾಡಿ, ಶಿವರಾಜ್ ಕೆ.ಆರ್ ಪೇಟೆ, ರವಿಕಾಳೆ, ಶ್ರೀನಿವಾಸಪ್ರಭು, ಬಾಲ ರಾಜವಾಡಿ, ನಯನ, ಸುರಭಿ ರವಿ, ಶ್ರೀಯಾ ಪಾವನಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು