LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Mysore

ಪಂಚಭೂತಗಳಲ್ಲಿ ಭೈರಪ್ಪ ಲೀನ

ಮೈಸೂರು : ಕನ್ನಡದ ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪ ಅವರು ಸೆ.೨೪ ರಂದು ನಿಧನರಾಗಿದ್ದು, ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ಬ್ರಾಹ್ಮಣ ಸಂಪ್ರದಾಯದAತೆ ಅಂತ್ಯಕ್ರಿಯೆ ನಡೆಯಿತು. ಹಿರಿಯ ಸಾಹಿತಿಗಳಿಗೆ ಜಿಲ್ಲಾಡಳಿತ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ನಮನ ಸಲ್ಲಿಸಿದೆ.

ಇಂದು ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನ ರುದ್ರ ಭೂಮಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಬ್ರಾಹ್ಮಣ ಸಂಪ್ರದಾಯದAತೆ ಎಸ್.ಎಲ್. ಭೈರಪ್ಪ ಅವರ ಪುತ್ರ ಪುತ್ರ ರವಿಶಂಕರ್ ಅವರ ಪಾರ್ಥೀವ ಶರೀರಕ್ಕೆ ಅಗ್ನಿಸ್ಪರ್ಷ ಮಾಡಿದ್ದಾರೆ.

ನಿನ್ನೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಅಂತಿಮ ದರ್ಶನ ಬಳಿಕ ಮೈಸೂರಿಗೆ ಪಾರ್ಥಿವ ಶರೀರ ತಂದು ಮೈಸೂರಿನ ಕಲಾಮಂದಿರಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ನಂತರ ಮೃತದೇಹವನ್ನ ಜೆಎಸ್‌ಎಸ್ ಮೆಡಿಕಲ್ ಕಾಲೇಜಿನ ಶವಗಾರದಲ್ಲಿ ಇರಿಸಲಾಯಿತು. ಇಂದು ಬೆಳಗ್ಗೆ ೮ ಗಂಟೆಗೆ ಆಸ್ಪತ್ರೆಯಿಂದ ನೇರವಾಗಿ ಮೈಸೂರಿನ ಕುವೆಂಪು ನಗರದ ನಿವಾಸಕ್ಕೆ ತೆಗೆದುಕೊಂಡು ಹೋಗಲಾಗುತ್ತದೆ. ಮನೆಯ ಬಳಿಯೂ ಕೆಲಹೊತ್ತು ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಅಂತ್ಯಕ್ರಿಯೆಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಚಿವರಾದ ಹೆಚ್.ಸಿ. ಮಹದೇವಪ್ಪ, ಕೆ.ವೆಂಕಟೇಶ್, ತೇಜಸ್ವನಿ ಅನಂತ್‌ಕುಮಾರ್, ಮೈಸೂರಿನ ಜಿಲ್ಲಾಧಿಕಾರಿ ಲಕ್ಷಿö್ಮÃಕಾಂತ್ ರೆಡ್ಡಿ, ಸೇರಿದಂತೆ ಹಲವು ಸಚಿವರು, ಶಾಸಕರು, ಸ್ಥಳೀಯ ಬಿಜೆಪಿ ಮುಖಂಡರು, ಸ್ನೇಹಿತರು, ಕುಟುಂಬಸ್ಥರು ಭಾಗಿಯಾಗಿದ್ದರು.
ಪ್ಯಾನ್ ಇಂಡಿಯಾ ನಾವಲಿಸ್ಟ್ ಭೈರಪ್ಪ ಈ ಇಹಲೋಕ ತ್ಯಜಿಸಿದ್ದಾರೆ. ತಮ್ಮ ಬರವಣಿಗೆಯ ಮೂಲಕವೇ ಜನಮಾನಸದಲ್ಲಿ ಅಚ್ಚಳಿಯದೇ ಉಳಿದಿದ್ದ ೯೪ ವರ್ಷದ ಸಾಹಿತಿ ಮೊನ್ನೆ ವಯೋಸಹಜ ಖಾಯಿಲೆಯಿಂದ ನಿಧನ ಹೊಂದಿದರು. ಇವರ ಸಾವಿಗೆ ಇಡೀ ಕರುನಾಡೇ ಮರುಕ ಪಟ್ಟಿದೆ.

 

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು