LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಭೈರ್ಯ ಕೆಎ-07 ಮೋಷನ್ ಪೋಸ್ಟರ್ ಬಿಡುಗಡೆ

ಅನಾಥನಾಗಿ ಬೇರೆಯವರ ಆಶ್ರಯದಲ್ಲಿ ಬೆಳೆದ ಗೌರಿಬಿದನೂರಿನ ರೋಷನ್.ಎಂ.ರಾವ್ ಭರತನಾಟ್ಯ ಪ್ರವೀಣ, ಮುಂಬೈನಲ್ಲಿ ನಟನೆ ತರಭೇತಿ ಪಡೆದುಕೊಂಡು ಬಂದಿದ್ದಾರೆ. ಮುಂದೆ ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಯಾಗಿ, ಸ್ಕ್ರಿಪ್ಟ್ ಬರೆದುಕೊಂಡು ಹಲವು ಚಿತ್ರಗಳಿಗೆ ಸೆಟ್ ಕೆಲಸ ನಿರ್ವಹಿಸಿ, ಮಧ್ಯೆ ತಲ್ವಾರ್ ಕಿರುಚಿತ್ರಕ್ಕೆ ಬಣ್ಣ ಹಚ್ಚಿದ್ದಾರೆ.

ಇದೆಲ್ಲಾ ಅನುಭವದಿಂದ ಭೈರ್ಯ ಕೆಎ-07? ಚಿತ್ರಕ್ಕೆ ಕಥೆ ಬರೆದು ನಾಯಕನಾಗಿ ನಟಿಸುತ್ತಿದ್ದಾರೆ. ಇವರ ಪ್ರತಿಭೆಯನ್ನು ಗುರುತಿಸಿರುವ ಕನ್ನಡ ಪ್ರೇಮಿ ಬಾಗಲಕೋಟೆಯ ಷರೀಫ ಬೇಗಂ ನಡಾಫ್, ಎನ್ಜಿಓ ಸಂಘ ನಡೆಸುತ್ತಿದ್ದು, ಸಾಧನೆ ಮಾಡುವ ಸಲುವಾಗಿ ಸಿನಿಮಾಕ್ಕೆ ಬಂಡವಾಳ ಹೂಡುತ್ತಿದ್ದಾರೆ. ಮೊನ್ನೆ ನಡೆದ ಕಾರ್ಯಕ್ರಮದಲ್ಲಿ ಹಿತೈಷಿ ಉದ್ಯಮಿ ಜಿ.ಬಾಲಾಜಿ ಮೋಷನ್ ಪೋಸ್ಟರ್ ಬಿಡುಗಡೆ ಮಾಡಿ ತಂಡಕ್ಕೆ ಶುಭ ಹಾರೈಸಿದರು.

ಭೂಗತ ಲೋಕದ ಕಥೆಯಲ್ಲಿ ನಾಯಕನ ಹೆಸರು ಶೀರ್ಷಿಕೆಯಾಗಿರುತ್ತದೆ. ಬೆಂಗಳೂರಿನ ಡಾನ್ಗಳ ಕುರಿತಂತೆ ಸಾಕಷ್ಟು ಸಿನಿಮಾಗಳು ಬಂದಿವೆ. ಆದರೆ ಚಿಕ್ಕಬಳ್ಳಾಪುರ, ಕೋಲಾರ, ಕೆಜಿಎಫ್, ಚಿಂತಾಮಣಿ, ಶಿಡ್ಲಘಟ್ಟವನ್ನು ಜನರು ಮರೆತು ಹೋಗಿದ್ದಾರೆ. ಕೆಜಿಎಫ್ದಲ್ಲಿರುವ ಚಿನ್ನದ ಗಣಿಯನ್ನು ರಕ್ಷಣೆ ಮಾಡಿದವರು ಯಾರು? ಅಂದು ಅಧ್ಯಕ್ಷರಾಗಿದ್ದವರು ಯಾರು ಇವತ್ತಿನವರೆಗೂ ಅದು ಯಾಕೆ ಸರ್ಕಾರದ ಅಧೀನದಲ್ಲಿಲ್ಲ ಇಂತಹ ಎಲ್ಲಾ ರೀತಿಯ ಅಂಶಗಳನ್ನು ತೋರಿಸುವ ಪ್ರಯತ್ನ ಮಾಡಲಾಗಿದೆ.

ಇಷ್ಟೆಲ್ಲಾ ವಿಷಯಗಳನ್ನು ಸಂಶೋಧನೆ ನಡೆಸಿ, ಅಧ್ಯಯನ ಮಾಡಿ ಚಿತ್ರಕಥೆಯನ್ನು ತಂಡದೊಂದಿಗೆ ಸೇರಿಕೊಂಡು ಸಿದ್ದಪಡಿಸಲಾಗಿದೆ. 1970 ರಿಂದ 1985ರ ತನಕ ಸಿನಿಮಾವು ಸಾಗುತ್ತದೆ. ಶಿವಮೊಗ್ಗ ಮೂಲದ ಆಶಿಕಾರಾವ್ ನಾಯಕಿಯಾಗಿ ಎರಡನೇ ಅವಕಾಶ. ಇನ್ನುಳಿದಂತೆ ನಿರ್ದೇಶಕ, ಹಿರಿಯ ಪೆÇೀಷಕ ಕಲಾವಿದರು, ಹೆಸರಾಂತ ತಂತ್ರಜ್ಘರು ಚಿತ್ರದಲ್ಲಿ ಇದ್ದಾರೆ. ಇವೆಲ್ಲಾ ಮಾಹಿತಿಗಳನ್ನು ಮುಂದಿನ ಟೀಸರ್ ಬಿಡುಗಡೆ ಸಮಾರಂಭದಲ್ಲಿ ನೀಡುವುದಾಗಿ ರೋಷನ್ ಮಾಧ್ಯಮದವರನ್ನು ಕೋರಿಕೊಂಡಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು