LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಅಡ್ವಾಣಿಗೆ ಭಾರತ ರತ್ನ ಕೇಂದ್ರ ಸರ್ಕಾರದಿಂದ ಮಹತ್ವದ ಘೋಷಣೆ

ದೆಹಲಿ: ಬಿಜೆಪಿಯ ಭೀಷ್ಮ ಎಂದೇ ಕರೆಯಲ್ಪಡುವ ಹಿರಿಯ ಮುಖಂಡ ಮಾಜಿ ಉಪ ಪ್ರಧಾನಿ ಎಲ್.ಕೆ. ಅಡ್ವಾಣಿ ಅವರಿಗೆ `ಭಾರತ ರತ್ನ' ಪ್ರಶಸ್ತಿ ಘೋಷಿಸಲಾಗಿದೆ.ಕೇಂದ್ರ ಸರ್ಕಾರದ ವತಿಯಿಂದ ಪ್ರಶಸ್ತಿ ಪ್ರಕಟಿಸಲಾಗಿದೆ.

ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಟ್ವಿಟರ್‍ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ದೇಶದ ಅಭಿವೃದ್ಧಿಗೆ ಎಲ್.ಕೆ. ಅಡ್ವಾಣಿ ಅವರ ಕೊಡುಗೆ ಅಪಾರವಾಗಿದೆ ಎಂದಿದ್ದಾರೆ. ಅಡ್ವಾಣಿಯವರು ದೇಶಕ್ಕಾಗಿ ಸಲ್ಲಿಸಿರುವ ಸೇವೆ, ಕೊಡುಗೆಗಳ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿರುವ ಪ್ರಧಾನಿಯವರು ಈ ವಿಷಯವನ್ನು ಹಂಚಿಕೊಳ್ಳಲು ತಮಗೆ ತೀವ್ರ ಸಂತೋಷವಾಗುತ್ತಿದೆ ಎಂದು ಹೇಳಿದ್ದಾರೆ.

ಈ ಕುರಿತು ನಾನು ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ವಿಷಯ ಹಂಚಿಕೊಂಡಿದ್ದು ಅದನ್ನು ಕೇಳಿ ಅವರು ಬಹಳ ಖುಷಿಪಟ್ಟರು ಎಂದು ಪ್ರಧಾನಿ ಮೋದಿ ಟ್ವೀಟ್‍ನಲ್ಲಿ ಹೇಳಿದ್ದಾರೆ.ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಅವಿರಥ ಶ್ರಮ ಪಟ್ಟಿದ್ದ ಅಡ್ವಾಣಿಜೀ. ಭಾರತೀಯ ಜನತಾ ಪಕ್ಷವನ್ನು ತಳಮಟ್ಟದಿಂದ ಸಂಘಟಿಸಿ ಕೇಂದ್ರದಲ್ಲಿ ಅಧಿಕಾರಕ್ಕೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಇತ್ತೀಚೆಗಷ್ಟೇ ಬಿಹಾರದ ಮುಖ್ಯಮಂತ್ರಿಯಾಗಿದ್ದ ದಿವಂಗತ ಕರ್ಪೂರಿ ಠಾಕೂರ್ ಅವರಿಗೆ ಭಾರತ ರತ್ನ ಘೋಷಣೆ ಮಾಡಿದ ಬೆನ್ನಲ್ಲೆ ಅಡ್ವಾಣಿಯವರಿಗೆ ಭಾರತ ರತ್ನ ಪ್ರಶಸ್ತಿ ಘೋಷಣೆ ಮಾಡಲಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು