LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Ramanagara

ಕಾಂಗ್ರೆಸ್ ತೆಕ್ಕೆಗೆ ಬಿದ್ದ ಬಿಡದಿ ಸೊಸೈಟಿ. ಜೆಡಿಎಸ್ - ಬಿಜೆಪಿ ಮೈತ್ರಿಕೂಟಕ್ಕೆ ತೀವ್ರ ಮುಖಭಂಗ | 12 ನಿರ್ದೇಶಕ ಸ್ಥಾನಗಳ ಪೈಕಿ 11 ಕಾಂಗ್ರೆಸ್, 1ರಲ್ಲಿ ಜೆಡಿಎಸ್ ಬೆಂಬಲಿತರ ಗೆಲುವು

ರಾಮನಗರ: ಜಿದ್ದಾಜಿದ್ದಿನಿಂದ ಕೂಡಿದ್ದ ಬಿಡದಿ ರೈತರ ವಿವಿದ್ದೋದ್ದೇಶ ಸಹಕಾರ ಸಂಘದ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದರೆ, ಜೆಡಿಎಸ್ - ಬಿಜೆಪಿ ಮೈತ್ರಿಕೂಟ ತೀವ್ರ ಮುಖಭಂಗ ಅನುಭವಿಸಿದೆ.ಸಂಘದ ಆಡಳಿತ ಮಂಡಳಿಯ 12 ನಿರ್ದೇಶಕರ ಸ್ಥಾನದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತರು 11 ಸ್ಥಾನಗಳಲ್ಲಿ ಭರ್ಜರಿ ಗೆಲುವು ಸಾಧಿಸಿದರೆ, ಜೆಡಿಎಸ್ - ಬಿಜೆಪಿ ಮೈತ್ರಿಕೂಟದ ಬೆಂಬಲಿತರು 1 ಕ್ಷೇತ್ರದಲ್ಲಷ್ಟೇ ಜಯ ಗಳಿಸಲು ಸಾಧ್ಯವಾಗಿದೆ.ಸಂಘದ 12 ನಿರ್ದೇಶಕರ ಸ್ಥಾನಗಳ ಚುನಾವಣೆಯಲ್ಲಿ ಒಟ್ಟು 29 ಅಭ್ಯರ್ಥಿಗಳು ಕಣದಲ್ಲಿದ್ದರು. ಇವರುಗಳ ನಡುವೆ ಜಿದ್ದಾ ಜಿದ್ದಿನ ಸ್ಪರ್ಧೆ ಏರ್ಪಟ್ಟಿತ್ತು. ಕಾಂಗ್ರೆಸ್ ಮತ್ತು ಜೆಡಿಎಸ್ - ಬಿಜೆಪಿ ಮೈತ್ರಿ ಪಕ್ಷಗಳು ಈ ಚುನಾವಣೆಯನ್ನು ಪ್ರತಿಷ್ಟೆಯಾಗಿ ತೆಗೆದುಕೊಂಡಿದ್ದವು. ಮಾಗಡಿ ಕ್ಷೇತ್ರ ಶಾಸಕ ಎಚ್ .ಸಿ. ಬಾಲಕೃಷ್ಣ ಕಾಂಗ್ರೆಸ್ ಬೆಂಬಲಿತರು ಹಾಗೂ ಮಾಜಿ ಶಾಸಕ ಎ.ಮಂಜುನಾಥ್ ರವರು ಜೆಡಿಎಸ್ - ಬಿಜೆಪಿ ಮಿತ್ರ ಪಕ್ಷಗಳ ಬೆಂಬಲಿತ ಅಭ್ಯರ್ಥಿಗಳ ಪರವಾಗಿ ಚುನಾವಣಾ ಪ್ರಚಾರ ಕೂಡ ಮಾಡಿದ್ದರು.ಈ ಚುನಾವಣೆಯಲ್ಲಿ ಬಾಲಕೃಷ್ಣರವರು ಮೇಲುಗೈ ಸಾಧಿಸುವ ಮೂಲಕ ಜೆಡಿಎಸ್ ನ ಭದ್ರಕೋಟೆಯಂತಿರುವ ಬಿಡದಿ ಪ್ರದೇಶದಲ್ಲಿ ಕೈ ಪಡೆ ಮತ್ತಷ್ಟು ಬಲಿಷ್ಠಗೊಳ್ಳುವಂತೆ ಮಾಡಿದ್ದಾರೆ.ಸಾಲಗಾರರಲ್ಲದ ಕ್ಷೇತ್ರದಿಂದ ಜೆಡಿಎಸ್ ಬೆಂಬಲಿತ ಡಿ.ನಿತ್ಯಾನಂದ -508, ಸಾಲಗಾರರ ಕ್ಷೇತ್ರದಿಂದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಾದ ವಿ.ಆರ್ ಮಹೇಶ್ - 1361 ಮತ, ಎಸ್.ಜೀವನ್ - 1360, ದೊಡ್ಡರೇವಯ್ಯ - 1333, ಸತ್ಯಮೂರ್ತಿ- 1263, ಹೆಚ್.ಎಸ್.ಮಧುಕುಮಾರ್ - 1195 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ.ಮಹಿಳಾ ಮೀಸಲು ಸ್ಥಾನದಿಂದ ಅನ್ನ ಪೂರ್ಣೇಶ್ವರಿ.ಎನ್ - 1245, ಶೋಭಾ ಸಿ.ಟಿ-1223, ಹಿಂದುಳಿದ ವರ್ಗ ಎ ಮೀಸಲಿನಿಂದ ಕೆ.ಪಿ.ಬಾಲಕೃಷ್ಣ -1372, ಹಿಂದುಳಿದ ವರ್ಗ ಬಿ ಮೀಸಲಿನಿಂದ ಸಂತೋಷ್ ಬಿ.ಎಸ್ -1418, ಪರಿಶಿಷ್ಟ ಜಾತಿ ಮೀಸಲಿಂದ ಆರ್.ರಮೇಶ್ - 1379, ಪರಿಶಿಷ್ಟ ಪಂಗಡ ಮೀಸಲಿನಿಂದ ಕೆಂಗಲ್ ಹನುಮಂತಯ್ಯ- 1464 ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ.ಹೊಸ ದಾಖಲೆ ಬರೆದ ಕೈಪಡೆ: ಈ ಮೊದಲಿ ನಿಂದಲೂ ಬಿಡದಿ ಸೊಸೈಟಿ ಮೇಲೆ ಜೆಡಿಎಸ್ ಪಕ್ಷವೇ ಹಿಡಿತ ಸಾಧಿಸುತ್ತಾ ಬಂದಿತ್ತು. ಕಾಂಗ್ರೆಸ್ ಪೂರ್ಣ ಬಹುಮತ ಪಡೆದು ಅಧಿಕಾರಕ್ಕೆ ಬಂದ ಉದಾಹರಣೆಯೇ ಇರಲಿಲ್ಲ. ಕಳೆದ ಬಾರಿಯ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ 7 ಮತ್ತು ಕಾಂಗ್ರೆಸ್ ಬೆಂಬಲಿತ 5 ಮಂದಿ ಗೆಲುವು ಸಾಧಿಸಿದ್ದರು. ಕೊನೆ ಅವಧಿಯಲ್ಲಿ ಜೆಡಿಎಸ್ ತೆಕ್ಕೆಯಲ್ಲಿದ್ದ ಅಧಿಕಾರವನ್ನು ಇಬ್ಬರು ದಳಪತಿಗಳ ಬೆಂಬಲ ದೊಂದಿಗೆ ಕಾಂಗ್ರೆಸ್ ವಶ ಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿತ್ತು. ಆದರೆ, ಈ ಬಾರಿಯ ಚುನಾವಣೆಯಲ್ಲಿ 12 ನಿರ್ದೇಶಕ ಸ್ಥಾನಗಳ ಪೈಕಿ 11ರಲ್ಲಿ ಕಾಂಗ್ರೆಸ್ ಬೆಂಬಲಿತರು ಗೆಲುವು ಸಾಧಿಸುವ ಮೂಲಕ ಹೊಸ ದಾಖಲೆ ಬರೆದಿದೆ. ಸೊಸೈಟಿ ಅಸ್ತಿತ್ವಕ್ಕೆ ಬಂದ 25 ವರ್ಷಗಳ ಬಳಿಕ ಕಾಂಗ್ರೆಸ್ ಬೆಂಬಲಿತರು ಸ್ಪಷ್ಟ ಬಹುಮತದೊಂದಿಗೆ ಅಧಿಕಾರದ ಗದ್ದುಗೆ ಹಿಡಿದಿದೆ.ಕಾರ್ಯಕರ್ತರ ವಿಜಯೋತ್ಸವ: ಸೊಸೈಟಿ ಚುನಾವಣೆಯಲ್ಲಿ 12ರ ಪೈಕಿ 11 ನಿರ್ದೇಶಕ ಸ್ಥಾನಗಳಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸುತ್ತಿರುವ ಸಂಗತಿ ತಿಳಿದ ಕೂಡಲೇ ಪಕ್ಷದ ಕಾರ್ಯಕರ್ತರು ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು. ಮತ ಎಣಿಕೆ ಕೇಂದ್ರದಿAದ ಹೊರ ಬಂದ ವಿಜೇತ ಅಭ್ಯರ್ಥಿಗಳಿಗೆ ಹಾರ ತುರಾಯಿ ಹಾಕಿದ್ದಲ್ಲದೆ, ಅವರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದರು. ಈ ವೇಳೆ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಗಾಣಕಲ್ ನಟರಾಜ್, ಬಿಡದಿ ಪುರಸಭೆ ವಿಪಕ್ಷ ನಾಯಕ ಸಿ. ಉಮೇಶ್, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಯರೇಹಳ್ಳಿ ಮಂಜು, ಎಪಿಎಂಸಿ ಮಾಜಿ ಅಧ್ಯಕ್ಷ ವಾಜರಹಳ್ಳಿ ರಮೇಶ್,ಬನ್ನಿಕುಪ್ಪೆ ಗ್ರಾಪಂ ಮಾಜಿ ಅಧ್ಯಕ್ಷ ಹೊಂಬೇಗೌಡ,, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಎಲ್. ಚಂದ್ರಶೇಖರ್, ಮುಖಂಡರಾದ ಅಬ್ಬನಕುಬ್ಬೆ ರಮೇಶ್, ಬ್ಯಾಡಪ್ಪ, ಎಚ್. ಎಸ್.ಯೋಗಾನಂದ, ಶೇಷಗಿರಿಹಳ್ಳಿ ಶಿವಣ್ಣ, ಸತೀಶ್ ಚಂದ್ರು, ಬಾನಂದೂರು ನಂಜುAಡಿ, ಶೇಷಗಿರಿಹಳ್ಳಿ ವೆಂಕಟೇಶ್, ಬಾನಂದೂರು ಗಂಗಾಧರ್, ಶಶಿ ಮತ್ತಿತರರು ಹಾಜರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು