LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

"ನಟ ಉಪೇಂದ್ರ ದಂಪತಿ ಮೊಬೈಲ್ ಹ್ಯಾಕ್ ಪ್ರಕರಣ ಬಿಹಾರ ಮೂಲದ ಆರೋಪಿ ಬಂಧನ"

ಬೆಂಗಳೂರು : ಕನ್ನಡ ಚಲನಚಿತ್ರದ ಪ್ರಖ್ಯಾತ ನಟರಾದ ಉಪೇಂದ್ರ ಪ್ರಿಯಾಂಕಾ ದಂಪತಿಯ ಮೊಬೈಲ್ ಹ್ಯಾಕ್ ಪ್ರಕರಣ ಸಂಬಂಧ ಆರೋಪಿಯನ್ನು ಸದಾಶಿವನಗರ ಪೊಲೀಸರು ಬಂಧಿಸಿದ್ದಾರೆ. ಬಿಹಾರ ಮೂಲದ ವಿಕಾಸ್ ಕುಮಾರ್ ಬಂಧಿತ ಆರೋಪಿಯಾಗಿದ್ದಾನೆ, ಆರೋಪಿ ಬಂಧನಕ್ಕೆಂದು ಬಿಹಾರಕ್ಕೆ ಹೋದ ಪೊಲೀಸರೇ ಈ ಸೈಬರ್ ಖದೀಮರ ಜಾಲ ನೋಡಿ ಅಚ್ಚರಿಗೊಳಗಾಗಿದ್ದಾರೆ. ಇಲ್ಲಿನ ೨೦ರಿಂದ ೨೫ ವಯಸ್ಸಿನ ಯುವಕರು ಸೈಬರ ವಂಚನೆ ಜಾಲದಲ್ಲಿ ನಿರತರಾಗಿದ್ದು, ಊರಿನ ೧೫೦ ಮಂದಿ ಯುವಕರು ಸೈಬರ್ ಅಪರಾಧದಲ್ಲೇ ತೊಡಗಿಗೊಂಡಿರುವ ಆಘಾತಕಾರಿ ವಿಷಯ ಈ ವೇಳೆ ಬೆಳಕಿಗೆ ಬಂದಿದೆ.

ಕಳೆದ ಸೆ.೧೫ರಂದು ಉಪೇಂದ್ರ ದಂಪತಿ ಮೊಬೈಲ್ ಹ್ಯಾಕ್ ಆಗಿತ್ತು. ಆನ್‌ಲೈನ್‌ನಲ್ಲಿ ಕೆಲ ವಸ್ತುಗಳನ್ನು ಪ್ರಿಯಾಂಕಾ ಉಪೇಂದ್ರ ಬುಕ್ ಮಾಡಿದ್ದರು. ಈ ವೇಳೆ ಮೊಬೈಲ್‌ಗೆ ಲಿಂಕ್ ಬಂದಿದ್ದು, ಆ ಲಿಂಕ್ ಅನ್ನು ಪ್ರಿಯಾಂಕ ಕ್ಲಿಕ್ ಮಾಡಿದ್ದರು. ಬಳಿಕ ನಟಿ ಪ್ರಿಯಾಂಕಾ ವಾಟ್ಸಾಪ್ ಹ್ಯಾಕ್ ಮಾಡಿದ್ದ ಖದೀಮ, ಅವರ ಸಂಪರ್ಕದಲ್ಲಿದ್ದವರಿಗೆ ೫೫ ಸಾವಿರ ಹಣ ಕಳುಹಿಸುವಂತೆ ಮೆಸೇಜ್ ಮಾಡಿದ್ದ. ಈ ವೇಳೆ ಆರೋಪಿ ಯಾರೆಂದು ತಿಳಿಯಲು ಯತ್ನಿಸಿರುವ ಪ್ರಿಯಾಂಕಾ, ಪತಿ ಉಪೇಂದ್ರ ಹಾಗೂ ಮ್ಯಾನೇಜರ್ ನಂಬರ್‌ನಿಂದ ಕರೆ ಮಾಡಿದ್ದರು. ಬಳಿಕ ಮ್ಯಾನೇಜರ್ ಹಾಗೂ ಉಪೇಂದ್ರ ಮೊಬೈಲ್ ಕೂಡ ಹ್ಯಾಕ್ ಆಗಿತ್ತು. ಹಣ ಅಗತ್ಯವಿದೆ ಎಂದು ಪ್ರಿಯಾಂಕ ಅವರ ವಾಟ್ಸಾ÷್ಯಪ್?ನಿಂದ ಆರೋಪಿ ಹಲವರಿಗೆ ಮೆಸೇಜ್‌ಮಾಡಿದ್ದು, ಈ ವೇಳೆ ಪ್ರಿಯಾಂಕಾ ಅವರೇ ಸಂದೇಶ ಕಳುಹಿಸಿದ್ದು ಎಂದು ಕೆಲವರು ಹಣ ಹಾಕಿದ್ದಾರೆ.

ಸ್ವತಃ ಉಪೇಂದ್ರ ಪುತ್ರ ಕೂಡ ತಾಯಿ ಅಕೌಂಟ್‌ಗೆ ಐವತ್ತು ಸಾವಿರ ಹಣಹಾಕಿದ್ದರು. ಇನ್ನು ಕೆಲವರು ಅನುಮಾನಗೊಂಡು ಪ್ರಿಯಾಂಕಾ ಅವರ ನಂಬರ್‌ಗೆ ಕರೆ ಮಾಡಿದರೆ ಕಾಲ್? ಕಟ್?? ಆಗುತ್ತಿತ್ತು. ವಿಷಯ ಗೊತ್ತಾಗುತ್ತಿದ್ದಂತೆ ಸದಾಶಿವನಗರ ಠಾಣೆಗೆ ಈ ಬಗ್ಗೆ ಪ್ರಿಯಾಂಕಾ ದೂರು ನೀಡಿದ್ದರು. ಆದರೆ, ಅದಾಗಲೇ ಸೈಬರ್ ವಂಚಕನ ಅಕೌಂಟ್‌ಗೆ ಒಂದೂವರೆ ಲಕ್ಷ ರೂಪಾಯಿ ಹಣ ವರ್ಗಾವಣೆ ಆಗಿತ್ತು.ದೂರು ದಾಖಲಾಗುತ್ತಿದ್ದಂತೆ ಅಲರ್ಟ್ ಆದ ಪೊಲೀಸರು, ಆರೋಪಿ ಪತ್ತೆಗೆ ಬಲೆ ಬೀಸಿದ್ದರು. ತನಿಖೆ ವೇಳೆ ಆರೋಪಿ ಬಿಹಾರದ ದಶರತಪುರದ ನಿವಾಸಿ ಎನ್ನುವುದು ಗೊತ್ತಾಗಿತ್ತು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು