LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Ramanagara

ನಿಂತಿದ್ದ ಟ್ರ್ಯಾ ಕ್ಟರ್‌ಗೆ ಬೈಕ್ ಡಿಕ್ಕಿ: 

ಐಟಿಬಿಪಿ ಯೋಧ ಸಾವು


ರಾಮನಗರ: ನಿಂತಿದ್ದ ಟ್ರ್ಯಾ ಕ್ಟರ್‌ಗೆ ಬೈಕ್ ಡಿಕ್ಕಿಯಾಗಿ, ರಜೆಯ ಮೇಲೆ ಊರಿಗೆ ಬಂದಿದ್ದ ಐಟಿಬಿಪಿ ಯೋಧ ಮೃತಪಟ್ಟ ಘಟನೆ ಕನಕಪುರ ಬೈಪಾಸ್ ರಸ್ತೆಯ ಗಡಸಳ್ಳಿ ಬಳಿ ತಡರಾತ್ರಿ ನಡೆದಿದೆ.ಕನಕಪುರ ತಾಲೂಕಿನ ಶಿವನಹಳ್ಳಿ ನಿವಾಸಿ ಚನ್ನವೀರೇಗೌಡ (45) ಮೃತಪಟ್ಟ ಯೋಧ. ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲಿಸ್ ಪಡೆಯ ಯೋಧರಾಗಿದ್ದ ಚನ್ನವೀರೇಗೌಡ, ಮೊನ್ನೆಯಷ್ಟೇ ರಜೆಯ ಮೇಲೆ ಸ್ವಗ್ರಾಮಕ್ಕೆ ಬಂದಿದ್ದರು. ತಡರಾತ್ರಿ ಯೋಧ ತಮ್ಮ ಮಗನೊಂದಿಗೆ ಬೈಕ್‌ನಲ್ಲಿ ತೆರಳುತ್ತಿದ್ದಾಗ, ಗಡಸಳ್ಳಿ ಬಳಿ ರಸ್ತೆ ಬದಿ ನಿಂತಿದ್ದ ಟ್ರ್ಯಾ ಕ್ಟರ್‌ಗೆ ಬೈಕ್ ಡಿಕ್ಕಿಯಾಗಿದೆ. ಅಪಘಾತದ ತೀವ್ರತೆಗೆ ಚನ್ನವೀರೇಗೌಡಗೆ ಗಂಭೀರ ಗಾಯಗಳಾಗಿದ್ದು, ಕೂಡಲೇ ಕನಕಪುರ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ. ಆದರೆ ಆಸ್ಪತ್ರೆಯಲ್ಲಿ ಯೋಧನಿಗೆ ಸೂಕ್ತ ಚಿಕಿತ್ಸೆ ಸಿಗದೇ ಮೃತಪಟ್ಟಿರೋದಾಗಿ ಕುಟುಂಬಸ್ಥರು ಆರೋಪ ಮಾಡಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST