LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Chamarajanagara

ಜಿಪಂ ಸಿಇಓ ನೇತೃತ್ವದಲ್ಲಿ ಎಸ್‌ಐಆರ್ ಜಾಗೃತಿಗೆ ಬೈಕ್ ರ‍್ಯಾಲಿ

ಚಾಮರಾಜನಗರ: ಜಿಲ್ಲಾ ಪಂಚಾಯತ್, ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ನಗರದಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ ಬೈಕ್ ರ‍್ಯಾಲಿ ಗಮನ ಸೆಳೆಯಿತು.
ನಗರದ ಜಿಲ್ಲಾಡಳಿತ ಭವನದ ಆವರಣದಿಂದ ಹೊರಟ ಬೈಕ್ ರ‍್ಯಾಲಿ ಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಅವರು ಸಹ ಪಾಲ್ಗೊಂಡಿದ್ದು ವಿಶೇಷವಾಗಿತ್ತು. ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ಜಿಲ್ಲಾಡಳಿತ ಭವನದಿಂದ ಆರಂಭಗೊAಡ ಬೈಕ್ ರ‍್ಯಾಲಿಯು ಬಿ.ರಾಚಯ್ಯ ಜೋಡಿ ರಸ್ತೆ ಮೂಲಕ ರಾಮಸಮುದ್ರಕ್ಕೆ ತೆರಳಿ ಅಲ್ಲಿಂದ ನ್ಯಾಯಾಲಯ ರಸ್ತೆ, ಡಾ. ಬಿ.ಆರ್. ಅಂಬೇಡ್ಕರ್ ಭವನ, ಸತ್ತಿ ರಸ್ತೆ, ಜಿಟಿಸಿ ರೆಸಿಡೆನ್ಸಿ, ಸೋಮವಾರ ಪೇಟೆ, ಗುಂಡ್ಲುಪೇಟೆ ವೃತ್ತ, ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ, ಭುವನೇಶ್ವರಿ ವೃತ್ತ (ಪಚ್ಚಪ್ಪ ವೃತ್ತ) ಜೋಡಿ ರಸ್ತೆ ಮೂಲಕ ಜಿಲ್ಲಾಡಳಿತ ಭವನದಲ್ಲಿ ಮುಕ್ತಾಯವಾಯಿತು. ಇದೇ ವೇಳೆ ಮಾತನಾಡಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಅವರು ಭಾರತ ಚುನಾವಣಾ ಆಯೋಗವು ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯವನ್ನು ಕೈಗೊಳ್ಳಲು ಅಧಿಸೂಚನೆ ಹೊರಡಿಸಿ ವೇಳಾಪಟ್ಟಿ ಪ್ರಕಟಿಸಿದೆ. ಈ ಸಂಬಂಧ ಸ್ವೀಪ್ ಜಾಗೃತಿ ಅಭಿಯಾನ ಕೈಗೊಳ್ಳುವಂತೆ ನಿರ್ದೇಶನ ನೀಡಿದ್ದು, ಸಾರ್ವಜನಿಕರಿಗೆ ಅರಿವು ಮೂಡಿಸುವ ಸಲುವಾಗಿ ಜಿಲ್ಲಾ, ತಾಲ್ಲೂಕು ಹಾಗೂ ಗ್ರಾಮಪಂಚಾಯತಿ ಮಟ್ಟದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದರು. ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಎಸ್‌ಐಆರ್ ಪ್ರಕ್ರಿಯೆಯು ಎಲ್ಲಾ ಅರ್ಹ ನಾಗರಿಕರನ್ನು ಮತದಾರರ ಪಟ್ಟಿಯಲ್ಲಿ ಸರ್ಪಡೆಗೊಳಿಸುವುದಾಗಿದೆ. ಈ ವಿಶೇಷ ಸಮಗ್ರ ಪರಿಷ್ಕರಣೆಯ ಅವಧಿಯಲ್ಲಿ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಪರಿಶೀಲಿಸಿ ಖಚಿತಪಡಿಸಿಕೊಳ್ಳುವ ಮೂಲಕ ಬಿಎಲ್‌ಒ ಗಳಿಗೆ ಅಗತ್ಯ ಸಹಕಾರ ನೀಡಬೇಕು ಎಂದು ಜಿ.ಪಂ. ಸಿಇಒ ಮೋನಾ ರೋತ್ ಅವರು ತಿಳಿಸಿದರು. ಜಿಲ್ಲಾ ಪಂಚಾಯತ್ ಸಹಾಯಕ ಕಾರ್ಯದರ್ಶಿ ಶ್ರೀಕಂಠರಾಜೇ ಅರಸ್, ಪಶುಸಂಗೋಪನಾ ಇಲಾಖೆಯ ಉಪನಿರ್ದೇಶಕರಾದ ಮಂಜುನಾಥ್, ನಗರಸಭೆ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ರೂಪ, ಗ್ರಾಮ ಪಂಚಾಯತಿಗಳ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಇದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು