LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಬಿಎಂಟಿಸಿ ಬಸ್‍ಗೆ ಬೈಕ್ ಸವಾರ ಬಲಿ

ಬೆಂಗಳೂರು: ಕಿಲ್ಲರ್ ಬಿಎಂಟಿಸಿ ಬಸ್‍ಗೆ ಮತ್ತೊಂದು ಬಲಿಯಾಗಿದೆ. ಮಾರತ್ತಹಳ್ಳಿಯ ವರ್ತೂರು ಮುಖ್ಯ ರಸ್ತೆಯಲ್ಲಿ ಬಿಎಂಟಿಸಿ ವೋಲ್ವೋ ಬಸ್ ಹರಿದು ಬೈಕ್ ಸವಾರ ಮೃತಪಟ್ಟಿದ್ದಾನೆ.ಬೈಕ್ ಸವಾರ ಎಳಂಗೋವನ್ ಸೆಂಕತ್ತವಲ್(43) ಮೃತ ದುರ್ದೈವಿ. ಅಪಘಾತದಿಂದ ಸವಾರನ ತಲೆ ಹಾಗೂ ಮುಖದ ಭಾಗಕ್ಕೆ ಬಲವಾದ ಗಾಯಗಳಾಗಿದ್ದು ಆತನನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಪ್ರಾಣ ಹೋಗಿದೆ.

ನಿನ್ನೆ ಬೆಳಗ್ಗೆ 9.30ರ ಸುಮಾರಿಗೆ ಕುಂದಲಹಳ್ಳಿ ಜಂಕ್ಷನ್ ಕಡೆಯಿಂದ ಬೆಳ್ಳಂದೂರಿಗೆ ಮೃತ ಬೈಕ್ ಸವಾರ ಎಳಂಗೋವನ್ ಸೆಂಕತ್ತವಲ್ ತೆರಳುತ್ತಿದ್ದರು.ಅದೇ ಮಾರ್ಗದಲ್ಲಿ ಬರುತ್ತಿದ್ದ ಬಿಎಂಟಿಸಿ ವೊಲ್ವೋ ಬಸ್ ಡಿಕ್ಕಿ ಹೊಡೆದಿದೆ. ಬಸ್ ಡಿಕ್ಕಿ ರಭಸಕ್ಕೆ ಬೈಕ್ ಸವಾರ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು.

ಅಪಘಾತದಿಂದ ತಲೆ ಹಾಗೂ ಮುಖದ ಭಾಗಕ್ಕೆ ಗಂಭೀರ ಗಾಯವಾಗಿತ್ತು. ತಕ್ಷಣ ಆಸ್ಪತ್ರೆಗೆ ಕರೆದೊಯ್ಯುಲಾಗಿದ್ದು ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾನೆ. ಹೆಚ್‍ಎಎಲ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪಾದಚಾರಿ ಮಹಿಳೆ ಸಾವುಡಿಸೆಂಬರ್ 28ರಂದು ಬಿಎಂಟಿಸಿ ಬಸ್ ಡಿಕ್ಕಿಯಾಗಿ ಪಾದಚಾರಿ ಮಹಿಳೆ ಮೃತಪಟ್ಟಿದ್ದರು. ನಗರದ ಸುಬ್ಬಯ್ಯ ಸರ್ಕಲ್ ಬಳಿ ಪುಷ್ಪ ಎಂಬ ಮಹಿಳೆ ಬಿಎಂಟಿಸಿಗೆ ಡಿಕ್ಕಿಯಾಗಿ ಮೃತಪಟ್ಟಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು