LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಟಾರ್ಗೆಟ್ ಡಿಕೆ ಬ್ರದರ್ಸ್ ಸೋದರರನ್ನು ಮಣಿಸಲು ಬಿಜೆಪಿ ಕೇಂದ್ರ ನಾಯಕರ ನಿರ್ಧಾರ

ಬೆಂಗಳೂರು: ಈ ಬಾರಿಯ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಡಿಕೆ ಸಹೋದರರನ್ನು ಬಿಜೆಪಿ ಹೈಕಮಾಂಡ್ ನಾಯಕರು ಗುರಿಯಾಗಿಸಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.ಇತ್ತೀಚೆಗೆ ರಾಜ್ಯದಲ್ಲಿ ಅತ್ಯಂತ ಹೆಚ್ಚು ಡಿಕೆ ಸಹೋದರರು ಶಕ್ತಿಶಾಲಿಗಳಾಗುತ್ತಿದ್ದಾರೆ. ಅವರನ್ನು ಈಗ ಟಾರ್ಗೆಟ್ ಮಾಡಲೇಬೇಕು. ಅವರಿಗೆ ಸೋಲಿನ ರುಚಿ ತೋರುವ ಮೂಲಕ ಪಾಠ ಕಲಿಸಬೇಕೆಂದು ಬಿಜೆಪಿ ಹೈಕಮಾಂಡ್ ನಾಯಕರು ನಿರ್ಧರಿಸಿದ್ದಾರೆ ಎಂದು ಹೇಳಲಾಗಿದೆ.

ಇನ್ನು 2019 ರ ಲೋಕಸಭಾ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಅಖಾಡದಲ್ಲಿ ಸೋಲಿಸುವ ಮೂಲಕ, ಅವರಿಗೆ ದೊಡ್ಡ ಪ್ರಮಾಣದಲ್ಲಿ ಮುಜುಗರ ತರಿಸಿದ್ದ ಬಿಜೆಪಿ ಹೈಕಮಾಂಡ್ ನಾಯಕರು, ಈ ಬಾರಿ ಡಿಕೆ ಸಹೋದರರು ಗುರಿಯಾಗಿಸಿಕೊಂಡಿದ್ದಾರೆ.ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಅಖಾಡದಲ್ಲಿ ಬಿಜೆಪಿ ಚಿಹ್ನೆಯಡಿಯಲ್ಲಿ ಡಾ.ಸಿ. ಎನ್.ಮಂಜುನಾಥ್ ರಂಗಪ್ರವೇಶ ಮಾಡಿದ್ದಾರೆ.

ಕಳೆದ ಮೂರ್ನಾಲ್ಕು ದಶಕಗಳಿಂದ ಡಾ.ಸಿ.ಎನ್. ಮಂಜುನಾಥ್ ಆರೋಗ್ಯ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದು, ಅವರಿಂದಲೂ ಡಿಕೆ ಸಹೋದರರ ಕಟ್ಟಿ ಹಾಕುವುದು ಹೈಕಮಾಂಡ್ ನಾಯಕರ ತಂತ್ರವಾಗಿದೆ.ಬೆಂಗಳೂರು ಗ್ರಾಮಾಂತರ ಉಸ್ತುವಾರಿ ಬದಲಾವಣೆಯಾಗಿದ್ದು, ಆರ್.ಅಶೋಕ್ ಬದಲಿಗೆ ಡಾ.ಸಿ. ಎನ್. ಅಶ್ವತ್ಥ್‍ನಾರಾಯಣ್ ಅವರಿಗೆ ಬಿಜೆಪಿ ಹೈಕಮಾಂಡ್ ನಾಯಕರು ಮಣೆ ಹಾಕಿದ್ದಾರೆ. ಈ ಮೂಲಕ ಕಳೆದ ಬಾರಿ ಖರ್ಗೆ, ಈ ಬಾರಿ ಡಿಕೆ ಸಹೋದರರು ಹಣೆಯುವುದು ಬಿಜೆಪಿ ನಾಯಕರ ಒನ್‍ಲೈನ್ ಅಜೆಂಡಾ ಆಗಿದೆ ಎನ್ನಲಾಗಿದೆ.

ಕಳೆದ ಬಾರಿ ಲೋಕಸಭೆಯಲ್ಲಿ ಕೇಂದ್ರ ಬಿಜೆಪಿ ಸರ್ಕಾರವನ್ನುಕಾಂಗ್ರೆಸ್ ಪಕ್ಷದ ನಾಯಕರಾಗಿದ್ದ ಮಲ್ಲಿಕಾರ್ಜುನ ಖರ್ಗೆ ಅವರು ತೀವ್ರವಾಗಿ ತರಾಟೆಗೆ ತೆಗೆದುಕೊಳ್ಳುತ್ತಿದ್ದ ಹಿನ್ನೆಲೆಯಲ್ಲಿ ಅವರನ್ನು ಹೇಗಾದರೂ ಮಾಡಿ ಸೋಲಿಸಲೇ ಬೇಕು ಎಂದು ಪಣತೊಟ್ಟ ಕೇಂದ್ರ ಬಿಜೆಪಿ ನಾಯಕರು ಉಮೇಶ್ ಜಾದವ್ ಅವರನ್ನು ಕಾಂಗ್ರೆಸ್‍ನಿಂದ ಬಿಜೆಪಿಗೆ ಸೆಳೆದು ಲೋಕಸಭೆ ಚುನಾವಣೆಯಲ್ಲಿ ಖರ್ಗೆ ವಿರುದ್ಧ ಸ್ಪರ್ಧಿಸುವಂತೆ ಮಾಡಿದ್ದರು.

ಆ ಚುನಾವಣೆಯಲ್ಲಿ ಖರ್ಗೆ ಪರಾಭವಗೊಳ್ಳುವ ಮೂಲಕ ಸೋಲಿಲ್ಲದ ಸರದಾರ ಎನಿಸಿಕೊಂಡಿದ್ದ ಖರ್ಗೆ ಹಿನ್ನೆಡೆ ಅನುಭವಿಸುವಂತೆ ಆಗಿತ್ತು. ಅದೇ ರೀತಿ ಈ ಬಾರಿ ಡಿಕೆ ಸಹೋದರರಿಗೆ ಸೋಲಿನ ರುಚಿ ತೋರಿಸಬೇಕು ಎಂದು ಕೇಂದ್ರ ಬಿಜೆಪಿ ನಾಯಕರು ನಿಧರಿಸಿದ್ದಾರೆ ಎನ್ನಲಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು