LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಉಪಚುನಾವಣೆಯಲ್ಲೂ ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರಿಕೆ

ಬೆಂಗಳೂರು: ರಾಜ್ಯದಲ್ಲಿ ಸದ್ಯದಲ್ಲೇ ಎದುರಾಗಲಿರುವ ಮೂರು ವಿಧಾನಸಭಾ ಕ್ಷೇತ್ರಗಳ ಉಪ- ಚುನಾವಣೆಗೆ ಸಂಬಂಧಪಟ್ಟಂತೆ ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರಿಯಲಿದೆ.ಉಪ-ಚುನಾವಣೆಯ ಅಖಾಡದಲ್ಲಿಯೂ ಮುಂದುವರೆಯಲಿದೆ ಮೈತ್ರಿ ಎಂದು ಹೇಳಲಾಗುತ್ತಿದೆ. 2:1 ರ ಅನುಪಾತದಲ್ಲಿ ಚುನಾವಣೆ ಎದುರಿಸಲು ಬಿಜೆಪಿ-ಜೆಡಿಎಸ್ ಸಜ್ಜಾಗುತ್ತಿದೆ.

ರಾಜ್ಯದಲ್ಲಿ ಎದುರಾಗಲಿರುವ ಮೂರು ವಿಧಾನಸಭಾ ಕ್ಷೇತ್ರಗಳ ಉಪ-ಚುನಾವಣೆ ನಡೆಯಲಿದ್ದು, ಚನ್ನಪಟ್ಟಣ, ಸಂಡೂರು ಹಾಗೂ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರಗಳಲ್ಲಿ ಶಾಸಕರಾಗಿದ್ದವರು ಸಂಸತ್ ಪ್ರವೇಶ ಹಿನ್ನೆಲೆಯಲ್ಲಿ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪ-ಚುನಾವಣೆ ನಡೆಯಲಿದೆ. ಈ ಉಪಚುನಾವಣೆಯನ್ನು 2:1 ರ ಅನುಪಾತದಲ್ಲಿ ಎದುರಿಸಬೇಕು ಎಂದು ಎರಡು ಪಕ್ಷಗಳು ಚರ್ಚಿಸಿ ಒಮ್ಮತಕ್ಕೆ ಬಂದಿವೆ ಎನ್ನಲಾಗಿದೆ. 2 ಕ್ಷೇತ್ರಗಳಲ್ಲಿ ರಾಷ್ಟ್ರೀಯ ಪಕ್ಷ ಬಿಜೆಪಿ, ಪಕ್ಷದ ಚಿಹ್ನೆ ಕಮಲದಡಿಯಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದು.

ಸಂಡೂರು ಹಾಗೂ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರಗಳಲ್ಲಿ ಕಮಲ ಚಿಹ್ನೆಯಡಿಯಲ್ಲಿ ಅಭ್ಯರ್ಥಿಗಳು ಕಣಕ್ಕಿಳಿಯುವುದು.ಹಳೆಯ ಮೈಸೂರು ಭಾಗವಾದ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್‍ನ ಚಿಹ್ನೆಯಡಿಯಲ್ಲಿ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಬಗ್ಗೆ ಮಾತುಕತೆ ನಡೆದಿದೆ ಎನ್ನಲಾಗಿದೆ.ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಬಿಜೆಪಿ ಹೈಕಮಾಂಡ್ ನಾಯಕರ ಜೊತೆಗೆ ಇದೇ ಅನುಪಾತದ ಬಗ್ಗೆ ಮಾತುಕತೆ ನಡೆದಿದೆ.

ಮಾತುಕತೆ ಮಾಡುವ ನಿಟ್ಟಿನಲ್ಲಿಯೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ದೆಹಲಿಯಲ್ಲಿ ವಾಸ್ತವ್ಯ ಹೂಡಿದ್ದಾರೆ.ಪ್ರಮುಖವಾಗಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ- ಚುನಾವಣೆ ಕುತೂಹಲ ಮೂಡಿಸಿದ್ದು, ಅಭ್ಯರ್ಥಿ ಆಯ್ಕೆ ಸಂಬಂಧ ದೆಹಲಿಯಲ್ಲಿರುವ ವಿಜಯೇಂದ್ರ ಅವರು ವಿಧಾನಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಅವರನ್ನು ದೆಹಲಿಗೆ ಕರೆಸಿಕೊಂಡಿದ್ದಾರೆ. ಯೋಗೇಶ್ ಅವರೊಂದಿಗೆ ಮಾತುಕತೆ ನಡೆಸಿ ಎರಡು ಪಕ್ಷಗಳ ಒಮ್ಮತದ ಅಭ್ಯರ್ಥಿಯನ್ನು ನಿರ್ಧರಿಸಲಾಗುವುದು ಎಂದು ಹೇಳಲಾಗುತ್ತಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು