LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಬಿಜೆಪಿ ಮುಖಂಡರ ಆಕ್ರೋಶ ಶಿವಾನಂದ ಪಾಟೀಲ್ ರೈತರ ವಿರುದ್ಧ ವಿವಾದದ ಹೇಳಿಕೆ

ಬೆಂಗಳೂರು: ರೈತರ ಕುರಿತು ಸಚಿವ ಶಿವಾನಂದ ಪಾಟೀಲ್ ಮತ್ತೆ ಉಡಾಫೆ ಮಾತುಗಳನ್ನು ಆಡಿದ್ದಾರೆ. ಪದೇ ಪದೆ ಬರಗಾಲ ಬರಲಿ ಎಂದು ರೈತರಿಗೆ ಆಸೆ ಇರುತ್ತದೆ.

ಕೃಷ್ಣಾ ನದಿ ನೀರು ಪುಕ್ಸಟ್ಟೆ ಇದೆ, ಕರೆಂಟ್ ಕೂಡ ಪುಕ್ಸಟ್ಟೆ ಇದೆ. ಬಹಳಷ್ಟು ಮುಖ್ಯಮಂತ್ರಿಗಳು ಬಿತ್ತನೆ ಬೀಜ ಕೊಟ್ಟರು, ಗೊಬ್ಬರನೂ ಕೊಟ್ಟರು. ಬರಗಾಲ ಬಂದರೇ ರೈತರು ಸಾಲಮನ್ನಾದ ನಿರೀಕ್ಷೆ ಇಟ್ಟುಕೊಳ್ಳುತ್ತಾರೆ ಎಂದು ರೈತರ ವಿಚಾರದಲ್ಲಿ ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಹಗುರವಾಗಿ ಮಾತನಾಡಿದ್ದಾರೆ ಎಂದು ಬಿಜೆಪಿ ಮುಖಂಡರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅಥಣಿ ತಾಲೂಕಿನ ಸುಟ್ಟಟ್ಟಿ ಗ್ರಾಮದಲ್ಲಿ ನಡೆದ ವಿವಿಧೋದ್ದೇಶ ಸಹಕಾರಿ ಸಂಘದ 25ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು ಹಿಂದಿನ ಸರ್ಕಾರಗಳು ಸಾಲಮನ್ನಾ ಮಾಡಿವೆ. ಆದರೆ ಸರ್ಕಾರ ಸಂಕಷ್ಟದಲ್ಲಿದ್ದಾಗ ರೈತರ ಸಾಲಮನ್ನ ಕಷ್ಟ ಸಾಧ್ಯ ಎಂದು ಹೇಳಿದ್ದಾರೆ.

ಈ ಹೇಳಿಕೆ ಪ್ರತಿಪಕ್ಷ ಬಿಜೆಪಿ ನಾಯಕರನ್ನು ಕೆರಳಿಸಿದ್ದು, ಶಿವಾನಂದ ಪಾಟೀಲ್ ಹೇಳಿಕೆ ವಿರುದ್ಧ ತೀವ್ರವಾಗಿ ಕಿಡಿಕಾರಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಸಚಿವರಾದ ಡಾ.ಸಿ.ಎನ್. ಅಶ್ವತ್ಥ್‍ನಾರಾಯಣ, ಸುನೀಲ್‍ಕುಮಾರ್ ಮತ್ತಿತರರು ಮಾತನಾಡಿ ಶಿವಾನಂದ ಪಾಟೀಲ್ ಅವರಿಗೆ ಮಾನಸಿಕ ಅಸ್ವಸ್ಥತೆಯೋ, ಬುದ್ಧಿ ಭ್ರಮಣೆಯಾಗಿದೆಯೋ ಗೊತ್ತಿಲ್ಲ. ಈ ಹಿಂದೆಯೂ ಸಹ ಹಗುರವಾಗಿ ಮಾತನಾಡಿದ್ದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರೈತಪರ ಕಾಳಜಿಯಿದ್ದರೆ ಶಿವಾನಂದಪಾಟೀಲ್ ಅವರನ್ನು ಸಂಪುಟದಿಂದ ಕೈಬಿಡಬೇಕು ಎಂದು ಹೇಳಿದ್ದರೆ ಪಾಟೀಲ್ ಅವರು ರೈತರನ್ನು ಅಪಮಾನ ಮಾಡುವ ಕೆಲಸ ಮಾಡುತ್ತಲೇ ಬಂದಿದ್ದಾರೆ. ರೈತಪರ ಚಿಂತನೆಯನ್ನು ಸಿದ್ದರಾಮಯ್ಯ ಸರ್ಕಾರ ಮಾಡಿರಲಿಲ್ಲ. ದೇಶಕ್ಕೆ ಅನ್ನಕೊಡುವ ರೈತರ ಬಗ್ಗೆ ಮಂತ್ರಿಗಳ ಈ ದೋರಣೆ ಸರಿಯಲ್ಲ. ಸಚಿವ ಜಮೀರ್ ಅಹಮ್ಮದ್ ಕೂಡ ಮೊನ್ನೆ ನಡೆದುಕೊಂಡಿದ್ದು ಸರಿಯಲ್ಲ

. ಐಷರಾಮಿ ವಿಮಾನದಲ್ಲಿ ಬಂದು ಅವರೇ ವಿಡೀಯೋ ಹಾಕಿಕೊಂಡಿದ್ದಾರೆ. ಸಚಿವರು ಸರ್ಕಾರದ ನಡವಳಿಕೆಯಿಂದ ತಲೆ ತಗ್ಗಿಸುವಂತೆ ಆಗಿದೆ. ರಾಜಕಾರಣಿಗಳೆಂದರೆ ಜನರಲ್ಲಿ ಒಂದು ರೀತಿಯ ಭಾವನೆಯಿದೆ. ಆದರೂ ಮಂತ್ರಿಗಳು ಇಂತಹ ಹೇಳಿಕೆ ನೀಡುತ್ತಲೇ ಇದ್ದಾರೆ. ಕೂಡಲೇ ಮಂತ್ರಿಗಳು ರೈತರ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಲಾಗಿದೆ.

ಪರಿಹಾರ ಕೊಡುವ ಕೆಲಸವಂತು ಮಾಡುತ್ತಿಲ್ಲ ಆದರೆ ರೈತರ ಬಗ್ಗೆ ಹಗುರವಾಗಿ ಮಾತನಾಡಲಾಗುತ್ತಿದೆ ಎಂದು ದೂರಿದ್ದಾರೆ.
ಬಿಜೆಪಿಯವರ ಖಂಡನಾ ಹೇಳಿಕೆ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಸಚಿವ ಶಿವಾನಂದಪಾಟೀಲ್ ತಾವು ಆ ರೀತಿಯ ಹೇಳಿಕೆ ನಿಡಿಲ್ಲ. ನನಗೆ ಮದ ಏರಿಲ್ಲ. ತಮ್ಮ ಹೇಳಿಕೆಯನ್ನು ತಿರುಚಲಾಗಿದೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯಕ್ಕಾಗಿ ಇಂತಹ ಕೆಲಸ ಮಾಡಲಾಗುತ್ತಿದೆ ಎಂದಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು