LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ನಾಳೆ ಬ್ಲಿಂಕ್ ಚಿತ್ರ ಬಿಡುಗಡೆ ವಿನೂತನ ಪ್ರಚಾರ

ಈಗಾಗಲೇ ತಮ್ಮ ಹೊಸತನದಿಂದ ಜನರ ಗಮನಸೆಳೆದಿರುವ ಬ್ಲಿಂಕ್ ತಂಡವು ಮಾರ್ಚ್ 08 ಕ್ಕೆ ಚಿತ್ರಮಂದಿರದೊಳಗೆ ಪ್ರವೇಶಿಸಲು ಎಲ್ಲಾ ಸಿದ್ದತೆ ಮಾಡಿಕೊಂಡಿದೆ.ಇದರ ಸಲುವಾಗಿ ಬ್ಲಿಂಕ್ ಚಿತ್ರ ತಂಡವು ವಿನೂತನ ರೀತಿಯಲ್ಲಿ ಪ್ರಚಾರ ಮಾಡಲು ಮುಂದಾಗಿದೆ.
ನಗರದ ವಿವಿಧ ಭಾಗಗಳಲ್ಲಿ ಪ್ರಸ್ತುತ ಟ್ರೆಂಡಿನ ಹಾಡಿನ ಸಾಲುಗಳನ್ನು ಬಳಸಿಕೊಂಡು ತಮ್ಮ ಚಿತ್ರದ ಪ್ರಚಾರ ಮಾಡುತ್ತಿದ್ದಾರೆ.

ಈ ಪ್ರಚಾರವು ಸೋಶಿಯಲ್ ಮೀಡಿಯಾಗಳಲ್ಲಿ ಭಾರಿ ಸದ್ದು ಮಾಡಿದ್ದು ಜನರೆಲ್ಲ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಜನನಿ ಪಿಕ್ಚರ್ಸ್ ನಿರ್ಮಾಣದಲ್ಲಿ ಮೂಡಿಬರುತ್ತಿರುವ ಬ್ಲಿಂಕ್ ಚಿತ್ರವು ಸೈಫೈ ಪ್ರಕಾರದ ಚಿತ್ರವಾಗಿದ್ದು ಪ್ರೇಕ್ಷಕರನ್ನು ಸೆಳಿದಿಟ್ಟುಕೊಳ್ಳುವುದು ಖಂಡಿತವೆಂದು ನಿರ್ಮಾಪಕ ರವಿಚಂದ್ರ ಎ ಜೆ ಹೇಳುತ್ತಾರೆ.

ತಮ್ಮ ಚೊಚ್ಚಲ ನಿರ್ದೇಶನದಲ್ಲೇ ಚಿತ್ರದ ಟೀಸರ್ ಹಾಗೂ ಹಾಡುಗಳ ಮೂಲಕ ಜನರ ಮನಸ್ಸನ್ನು ಗೆದ್ದಿರುವ ನಿರ್ದೇಶಕ ಶ್ರೀನಿಧಿ ಬೆಂಗಳೂರುರವರು, ಇದೊಂದು ಕಾಲ್ಪನಿಕ ಕಥೆಯಾಗಿದ್ದು ..ಕನ್ನಡ ಚಿತ್ರರಂಗದಲ್ಲಿ ಈ ಪ್ರಕಾರದ ಚಿತ್ರಗಳು ತೀರಾ ಕಡಿಮೆ ತೆರೆಕಂಡಿದ್ದು ಈ ಚಿತ್ರವು ನೋಡುಗರಲ್ಲಿ ಹೊಸತನ ಮೂಡಿಸುತ್ತದೆ ಎಂದು ನಿರ್ದೇಶಕ ಶ್ರೀನಿಧಿ ಬೆಂಗಳೂರು ಹೇಳುತ್ತಾರೆ.

ದಿಯಾ, ದಸರಾ ಖ್ಯಾತಿಯ ನಟ ದೀಕ್ಷಿತ್ ಶೆಟ್ಟಿಯವರು ನಾಯಕ ನಟನ ಜವಬ್ದಾರಿಯನ್ನು ಹೊತ್ತಿದ್ದಾರೆ.. ಹಾಗೂ ಹೊಸ ದಿನಚರಿ ಖ್ಯಾತಿಯ ಮಂದಾರ ಬಟ್ಟಲಹಳ್ಳಿ ನಾಯಕಿನಟಿಯಾಗಿ ಕಾಣಿಸಿಕೊಳ್ಳಲಿದ್ದಾರೆ.ಇತ್ತೀಚಿಗೆ ತೆರೆಕಂಡ ಟೋಬಿ ಮತ್ತು ಸಪ್ತಸಾಗರದಾಚೆ ಎಲ್ಲೋ 2 ಚಿತ್ರದ ಸುರಭಿ ಪಾತ್ರಧಾರಿ ಚೈತ್ರ ಜೆ ಆಚಾರ್ ಬ್ಲಿಂಕ್ ಚಿತ್ರದಲ್ಲಿ ಮುಖ್ಯಭೂಮಿಕೆಯಲ್ಲಿ ಅಭಿನಯಿಸಿದ್ದಾರೆ ಹಾಗೂ ವಜ್ರಧೀರ್ ಜೈನ್, ಗೋಪಾಲಕೃಷ್ಣ ದೇಶಪಾಂಡೆ, ಕಿರಣ್ ನಾಯ್ಕ್ , ಮುರುಳಿ ಶೃಂಗೇರಿ , ಸುರೇಶ್ ಅನಗಹಳ್ಳಿ ಸೇರಿದಂತೆ ಇನ್ನು ದೊಡ್ಡ ತಾರಬಳಗವಿದೆ ...

ಈ ಚಿತ್ರಕ್ಕೆ ಪ್ರಸನ್ನ ಕುಮಾರ್ ಎಂ ಎಸ್ ರವರ ಸಂಗೀತ ನಿರ್ದೇಶನವಿದ್ದು , ಅವಿನಾಶ ಶಾಸ್ರ್ತಿರವರ ಕ್ಯಾಮೆರಾ ಕೈ ಚಳಕವಿದೆ..ಹಾಗೂ ಸಂಜೀವ್ ಜಾಗೀರ್ದಾರ್ ರವರ ಸಂಕಲನವಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು