LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಬೋಪಣ್ಣ-ಎಬ್ಡೆನ್‍ಗೆ ಮಿಯಾಮಿ ಓಪನ್ ಪ್ರಶಸ್ತಿ

ಮಿಯಾಮಿ (ಅಮೆರಿಕ): ಭಾರತದ ಖ್ಯಾತ ಆಟಗಾರ ರೋಹನ್ ಬೋಪಣ್ಣ ಮತ್ತು ಆವರ ಆಸ್ಟ್ರೇಲಿಯ ಜತೆಗಾರ ಮ್ಯಾಟ್ ಎಬ್ಡೆನ್ ಅವರು ಮಿಯಾಮಿ ಓಪನ್ ಟೆನಿಸ್ ಕೂಟದ ಡಬಲ್ಸ್ ಪ್ರಶಸ್ತಿ ಗೆದ್ದಿದ್ದಾರೆ. ಈ ಮೂಲಕ ಅವರು ವಿಶ್ವದ ನಂಬರ್ ವನ್ ಸ್ಥಾನಕ್ಕೆ ಮರಳಿದ ಸಾಧನೆ ಮಾಡಿದ್ದಾರೆ.

ಈ ವರ್ಷ ತಮ್ಮ ಶ್ರೇಷ್ಠ ನಿರ್ವಹಣೆ ಯನ್ನು ಮುಂದುವರಿಸಿದ 44ರ ಹರೆಯದ ಬೋಪಣ್ಣ ಮತ್ತು ಎಬ್ಡೆನ್ ಅವರು ಕ್ರೊವೇಶಿಯದ ಐವಾನ್ ಡೊಡಿಗ್ ಮತ್ತು ಅಮೆರಿಕದ ಆಸ್ಟಿನ್ ಕ್ರ್ಯಾಯಿಸೆಕ್ ಅವರನ್ನು 6-7 (3), 6-3, 10-6 ಸೆಟ್‍ಗಳಿಂದ ಉರುಳಿಸಿ ಪ್ರಶಸ್ತಿ ಗೆದ್ದರು.

ಈ ಗೆಲುವಿನಿಂದ ಬೋಪಣ್ಣ ಅವರು ಎಟಿಪಿ ಮಾಸ್ಟರ್ 1000 ಕೂಟದ ಪ್ರಶಸ್ತಿ ಗೆದ್ದ ಅತೀ ಹಿರಿಯ ಆಟಗಾರರೆಂಬ ದಾಖಲೆಯನ್ನು ಮತ್ತೆ ತನ್ನ ಹೆಸರಿಗೆ ಬರೆಸಿಕೊಂಡರು. ಅವರು ತನ್ನ 43ರ ಹರೆಯದಲ್ಲಿ ಕಳೆದ ವರ್ಷ ಇಂಡಿಯನ್ ವೆಲ್ಸ್‍ನಲ್ಲಿ ಪ್ರಶಸ್ತಿ ಗೆಲ್ಲುವ ಮೂಲಕ ಮಾಸ್ಟರ್ 1000 ಪ್ರಶಸ್ತಿ ಗೆದ್ದ ಹಿರಿಯ ಆಟಗಾರರೆಂಬ ದಾಖಲೆ ಮಾಡಿದ್ದರು. ಈ ಸಾಧನೆಯಿಂದ ಅವರು ಡಬಲ್ಸ್ ರ್ಯಾಂಕಿಂಗ್‍ನಲ್ಲಿ ಮತ್ತೆ ಅಗ್ರಸ್ಥಾನಕ್ಕೇರಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು