`
ಸಮೃದ್ಧಿ ಮಂಜುನಾಥ್ ನಿರ್ಮಿಸಿರುವ, ಶ್ರೀನಿವಾಸರಾಜು ನಿರ್ದೇಶನದ ಹಾಗೂನಟ ಗಣೇಶ್ ಅಭಿನಯದ ‘ಬೃಂದಾವಿಹಾರಿ’ ಚಿತ್ರ ಅಕ್ಟೋಬರ್ 16 ರಂದು ಬಿಡುಗಡೆಯಾಗಬೇಕಿತ್ತು. ನವೆಂಬರ್ 20ಕ್ಕೆ ಚಿತ್ರ ಬಿಡುಗಡೆಯನ್ನು ಮುಂದೂಡಲಾಗಿದೆ. ಹೊಸತಂಡದ “ಪ್ರೇಮದ ಊರಲಿ” ಚಿತ್ರ ಎಲ್ಲಾ ಕಡೆ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಅಕ್ಟೋಬರ್ 16 ರಂದು ನಮ್ಮ ಚಿತ್ರ ಬಿಡುಗಡೆಯಾದರೆ ಚಿತ್ರಮಂದಿರಗಳ ಸಮಸ್ಯೆ ಎದುರಾಗಲಿದೆ. ಕನ್ನಡ ಚಿತ್ರವೊಂದು ಯಶಸ್ವಿ ಪ್ರದರ್ಶನ ಕಾಣುತ್ತಿರುವುದು ಎಲ್ಲಾ ಕನ್ನಡಿಗರಿಗೂ ಹೆಮ್ಮೆಯ ವಿಷಯ. ಹಾಗಾಗಿ ನಮ್ಮ ಚಿತ್ರದ ಬಿಡುಗಡೆಯನ್ನು ನವೆಂಬರ್ 20 ಕ್ಕೆ ಮುಂದೂಡಿರುವುದಾಗಿ ನಿರ್ಮಾಪಕ ಸಮೃದ್ಧಿ ಮಂಜುನಾಥ್ ಹಾಗೂ ನಾಯಕ ಗಣೇಶ್ ತಿಳಿಸಿದ್ದಾರೆ.