LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಡಿಕೆಶಿ ಸೋದರರಿಂದ ಮತದಾರರ ಮೇಲೆ ಗೂಂಡಾಗಿರಿ: ಅಶೋಕ್

ಬೆಂಗಳೂರು: ಬೆಂಗಳೂರು ಗ್ರಾಮಾಂತರದಲ್ಲಿ ಸೋಲು ಗ್ಯಾರೆಂಟಿ ಆಗುತ್ತಿದ್ದಂತೆ, ಶಾಶ್ವತವಾಗಿ CM-in-waiting DV ಆಗಿ ಉಳಿಯಬೇಕಾಗುತ್ತಲ್ಲಾ ಎನ್ನುವ ಹತಾಶೆಯಿಂದ ಕಂಗಾಲಾಗಿರುವ ಡಿ.ಕೆ.ಶಿವಕುಮಾರ್ ಹಾಗೂ ಅವರ ಸಹೋದರ ಡಿ.ಕೆ. ಸುರೇಶ್ ಆ ಮತದಾರರ ಮೇಲಿನ ಕೋಪಕ್ಕೆ ಗೂಂಡಾಗಿರಿಗೆ ಇಳಿದಿದ್ದಾರೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ.

ಎಕ್ಸ್‍ನಲ್ಲಿ ತಿಳಿಸಿದ ಅವರು, ಬಿಜೆಪಿ ಕಾರ್ಯಕರ್ತ ಸಹೋದರ ನವೀನ್ ಮೇಲೆ ಕಾಂಗ್ರೆಸ್ಸಿನ ಗೂಂಡಾಗಳು ಮಾರಣಾಂತಿಕ ಹಲ್ಲೆ ಮಾಡಿದ್ದರೂ ಆತನನ್ನು ಬಂಧಿಸದೆ ಕಾಟಾಚಾರಕ್ಕೆ ಕೇಸ್ ಹಾಕುವ ಮೂಲಕ ಯಾರನ್ನು ರಕ್ಷಣೆ ಮಾಡುತ್ತಿದ್ದೀರಿ ಸಿಎಂ ಸಿದ್ದರಾಮಯ್ಯನವರೇ? ಸ್ಟ್ರಾಂಗ್ ಸಿಎಂ ಎಂದು ಹೇಳಿಕೊಳ್ಳುವ ನೀವು ಡಿಕೆ ಸಹೋದರದ ಮುಂದೆ ಅಷ್ಟೊಂದು ವೀಕ್ ಯಾಕಾಗಿದ್ದೀರಿ ಎಂದು ಪ್ರಶ್ನೆ ಮಾಡಿದ್ದಾರೆ.

ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರು ನಿರ್ಭೀತಿಯಿಂದ ಮತದಾನ ಮಾಡುವ ವಾತಾವರಣ ಕೆಡಸಿ ಮತದಾರರಲ್ಲಿ ಭಯದ ವಾತಾವರಣ ಸೃಷ್ಟಿ ಮಾಡುವ ಈ ದುಷ್ಕೃತ್ಯಕ್ಕೆ ಚುನಾವಣಾ ಆಯೋಗ ಕಡಿವಾಣ ಹಾಕಬೇಕು. ಕಾಂಗ್ರೆಸ್ ಪಕ್ಷದ ವಿರುದ್ಧ ಕ್ರಮಕೈಗೊಂಡು ನಿಷ್ಪಕ್ಷಪಾತವಾಗಿ ಅವಕಾಶ ಕಲ್ಪಿಸಿ, ಮತದಾರರಲ್ಲಿ ಧೈರ್ಯ, ವಿಶ್ವಾಸ ತುಂಬುವ ಕೆಲಸ ಮಾಡಬೇಕು ಎಂದು ಸಲಹೆ ನೀಡಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು