ನಾಗಮಂಗಲ: ರಸ್ತೆ ಬದಿಯ ಸೈನ್ ಬೋರ್ಡ್ಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟು 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಬೆಳ್ಳೂರು ಸಮೀಪದ ಹೆದ್ದಾರಿಯಲ್ಲಿ ನಡೆದಿದೆ.ಮೃತಪಟ್ಟವರನ್ನು ಬಸ್ ಕ್ಲೀನರ್ ಅಶೋಕ್(25), ಕಸ್ತೂರಿ ಶಾನ್‌ಬಾಗ್(64) ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಸಮೀಪದ ಬಿಜಿಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತಕ್ಕೀಡಾದ ಬಸ್ ಮಂಗಳೂರಿAದ ಬೆಂಗಳೂರಿಗೆ ಬರುತ್ತಿದ್ದು, ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.