LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Chamarajanagara

ಕೈಗಾರಿಕಾ ಪ್ರದೇಶಕ್ಕೆ ಸಫಾಯಿ ಕರ್ಮಚಾರಿಗಳ ಆಯೋಗದ ಸದಸ್ಯ ಸಿ. ಶಂಕರ ಅಂಕನಶೆಟ್ಟಿಪುರ ಭೇಟಿ: ಸ್ವಚ್ಛತಾ ಕಾರ್ಮಿಕರ ಸೌಲಭ್ಯಗಳ ಪರಿಶೀಲನೆನ

ಚಾಮರಾಜನಗರ: ತಾಲ್ಲೂಕಿನ ಬದನಗುಪ್ಪೆ-ಕೆಲ್ಲಂಬಳ್ಳಿ ಕೈಗಾರಿಕಾ ಪ್ರದೇಶದ ಹಲವು ಕಂಪನಿಗಳಿಗೆ ಸಫಾಯಿ ಕರ್ಮಚಾರಿಗಳ ಆಯೋಗದ ಸದಸ್ಯರಾದ ಶಂಕರ ಸಿ. ಅಂಕನಶೆಟ್ಟಿಪುರ ಅವರು ಇಂದು ಭೇಟಿ ನೀಡಿ, ಸ್ವಚ್ಛತಾ ಕಾರ್ಮಿಕರ ಕುಂದುಕೊರತೆಗಳನ್ನು ವಿಚಾರಿಸಿದರು.ನಗರದ ಹೊರವಲಯದಲ್ಲಿರುವ ಬದನಗುಪ್ಪೆ-ಕೆಲ್ಲಂಬಳ್ಳಿ ಕೈಗಾರಿಕಾ ಪ್ರದೇಶದ ಓಪಸ್ ಬಿರ್ಲಾ ಕಂಪನಿಗೆ ಮೊದಲಿಗೆ ಭೇಟಿ ನೀಡಿ, ಸ್ವಚ್ಛತಾ ಕಾರ್ಮಿಕರೊಂದಿಗೆ ಸಂವಾದ ನಡೆಸಿದರು. ಕಾರ್ಮಿಕರಿಗೆ ಕನಿಷ್ಠ ವೇತನ, ಮೂಲ ಸೌಕರ್ಯ ಹಾಗೂ ಇನ್ನಿತರೆ ಸೌಲಭ್ಯಗಳನ್ನು ಸಮರ್ಪಕವಾಗಿ ಒದಗಿಸಲಾಗುತ್ತಿದೆಯೇ ಎಂದು ಕಾರ್ಮಿಕರನ್ನು ಪ್ರಶ್ನಿಸಿ ಮಾಹಿತಿ ಪಡೆದುಕೊಂಡರು.ಈ ಸಂದರ್ಭದಲ್ಲಿ ಬಿರ್ಲಾ ಕಂಪನಿಯ ಮಾನವ ಸಂಪನ್ಮೂಲ ವ್ಯಕ್ತಿ ಅಶೋಕ್ ವಿಠ್ಠಲ್ ಮಾತನಾಡಿ ನಮ್ಮ ಕಂಪನಿಯಲ್ಲಿ ಪ್ರಸ್ತುತ ಒಟ್ಟು 46 ಜನರು ಸ್ವಚ್ಛತಾ ಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದಾರೆ. ಅವರಿಗೆ ಸೂಕ್ತ ಸಮಯಕ್ಕೆ ವೇತನ ಮತ್ತು ವೇತನ ರಶೀತಿ ನೀಡುತ್ತಿದ್ದೇವೆ. ಇಎಸ್‌ಐ ಮತ್ತು ಪಿಎಫ್ ಕಟ್ಟಲಾಗುತ್ತಿದೆ. ಕಾಲಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಸಲಾಗುತ್ತಿದ್ದು, ಉತ್ತಮ ರೀತಿಯಲ್ಲಿ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.ಈ ವೇಳೆ ಸಫಾಯಿ ಕರ್ಮಚಾರಿಗಳ ಆಯೋಗದ ಸದಸ್ಯರಾದ ಶಂಕರ ಸಿ. ಅಂಕನಶೆಟ್ಟಿಪುರ ಮಾತನಾಡಿ ಸ್ವಚ್ಛತಾ ಕಾರ್ಮಿಕರಿಗೆ 3 ತಿಂಗಳಿಗೊಮ್ಮೆ ಸಾಮಾನ್ಯ ವೈದ್ಯಕೀಯ ತಪಾಸಣೆಯನ್ನು ಕಡ್ಡಾಯವಾಗಿ ಮಾಡಿಸಬೇಕು. ಅಗತ್ಯ ಸುರಕ್ಷತಾ ಪರಿಕರಗಳನ್ನು ನೀಡಬೇಕು. ಕಂಪನಿಯಲ್ಲಿ ಸಫಾಯಿ ಕರ್ಮಚಾರಿಗಳ ಮಕ್ಕಳಿಗೆ ಉದ್ಯೋಗದ ಅವಕಾಶವನ್ನು ನೀಡಬೇಕು ಎಂದು ತಿಳಿಸಿದರು.
ಬಳಿಕ ಆಯೋಗದ ಸದಸ್ಯರಾದ ಶಂಕರ ಸಿ. ಅಂಕನಶೆಟ್ಟಿಪುರ ಅವರು ಎಲ್ಕಿಚ್ ಕಂಪನಿಗೆ ಭೇಟಿ ನೀಡಿ, ಸ್ವಚ್ಛತಾ ಕಾರ್ಮಿಕರ ಸಮಸ್ಯೆಯನ್ನು ಆಲಿಸಿದರು. ಈ ವೇಳೆ ಸ್ವಚ್ಛತಾ ಕಾರ್ಮಿಕರಿಗೆ ಕನಿಷ್ಠ ವೇತನ ನೀಡದೆ ಇರುವುದಕ್ಕೆ ಕಂಪನಿಯ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರು. ಸ್ವಚ್ಛತಾ ಕಾರ್ಮಿಕರಿಗೆ ಕನಿಷ್ಠ ವೇತನ ನೀಡದೆ ವಂಚನೆ ಮಾಡುತ್ತಿದ್ದೀರಿ ಎಂದು ಆಕ್ರೋಶ ವ್ಯಕ್ತಪಡಿಸಿದರು. ಆಯೋಗಕ್ಕೆ ವರದಿ ನೀಡಿ ಪ್ರಕರಣ ದಾಖಲಿಸಲಾಗುವುದು ಎಂದು ತಿಳಿಸಿದರು. ನಂತರ ಸಾವಿತ್ರಿ ಪ್ಲೇ ಬೋರ್ಡ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕಂಪನಿಗೆ ದಿಡೀರ್ ಭೇಟಿ ನೀಡಿ, ಸ್ವಚ್ಛತಾ ಕಾರ್ಮಿಕರ ಅಹವಾಲುಗಳನ್ನು ಆಲಿಸಿದರು.ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಮಿಕ ಅಧಿಕಾರಿ ರಾಮಚಂದ್ರಯ್ಯ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರಾದ ದೊರೈ ರಾಜು, ಸಮಾಜ ಕಲ್ಯಾಣ ಇಲಾಖೆಯ ಸಿ. ಮಹದೇವಸ್ವಾಮಿ ಹಾಗೂ ಇತರರು ಇದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು