LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ನೇಹಾ ಹತ್ಯೆ ಖಂಡಿಸಿ ನಾಳೆ ಕ್ಯಾಂಡಲ್ ಪ್ರತಿಭಟನೆ

ಬೆಂಗಳೂರು: ಹುಬ್ಬಳ್ಳಿಯ ಕಾಲೇಜೊಂದರಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ ಅವರ ಬರ್ಬರ ಹತ್ಯೆಯನ್ನು ಬಿಜೆಪಿ ಮಹಿಳಾ ಮೋರ್ಚಾ ತೀವ್ರವಾಗಿ ಖಂಡಿಸುತ್ತದೆ ಎಂದು ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಅಧ್ಯಕ್ಷೆ ಸಿ. ಮಂಜುಳಾ ಅವರು ತಿಳಿಸಿದ್ದಾರೆ.

ಈ ಹೇಯ, ಅನಾಗರಿಕ ಕ್ರಮವನ್ನು ತೀವ್ರವಾಗಿ ಖಂಡಿಸುತ್ತೇವೆ. ಇದನ್ನು ಖಂಡಿಸಿ ನಾಳೆ ಸಂಜೆ 6 ಗಂಟೆಗೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಮಹಿಳಾ ಮೋರ್ಚಾ ವತಿಯಿಂದ ಮೊಂಬತ್ತಿ (ಕ್ಯಾಂಡಲ್) ಹಚ್ಚಿ ಪ್ರತಿಭಟನಾ ಸಭೆ ನಡೆಸಲಾಗುವುದು ಎಂದು ಅವರು ತಿಳಿಸಿದ್ದಾರೆ.ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಹಿಂದೂಗಳ ಮೇಲಿನ ದೌರ್ಜನ್ಯ ದಿನೇದಿನೇ ಹೆಚ್ಚುತ್ತಿದೆ.

ಸರಕಾರದ ಮುಖ್ಯಸ್ಥರು ಮತ್ತು ಸಚಿವರು ತನಿಖೆಗೂ ಮೊದಲೇ ಕ್ಷುಲ್ಲಕ ಹೇಳಿಕೆ ಕೊಟ್ಟು ತನಿಖೆಯ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಉಡುಪಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ವಿಡಿಯೋ ಮಾಡಿದ್ದು, ಬೆಳಗಾವಿಯಲ್ಲಿ ಮಹಿಳೆಯ ವಿವಸ್ತ್ರ ಪ್ರಕರಣ ನಡೆದಾಗಲೂ ಇವುಗಳ ಕುರಿತು ಸರಕಾರವು ತಪ್ಪು ಮಾಹಿತಿ ನೀಡಿತ್ತು ಎಂದು ಅವರು ಆಕ್ಷೇಪಿಸಿದ್ದಾರೆ. ಬೆಂಗಳೂರಿನಲ್ಲಿ ನಟಿ ಹರ್ಷಿಕಾ ಪೂಣಚ್ಚ ಮತ್ತು ಅವರ ಪತಿಯ ಮೇಲೆ ಹಲ್ಲೆ ಮಾಡಿ ದರೋಡೆ ಮಾಡಿದ ಘಟನೆಯೂ ನಡೆದಿದೆ ಎಂದು ವಿವರಿಸಿದ್ದಾರೆ.

ರಾಜ್ಯದಲ್ಲಿ ಹೆಣ್ಮಕ್ಕಳು ಸುರಕ್ಷಿತರಲ್ಲ ಎಂಬ ವಾತಾವರಣ ನಿರ್ಮಾಣವಾಗುತ್ತಿದೆ. ರಾಜ್ಯ ಸರಕಾರವು ಕೂಡಲೇ ಪೆÇಲೀಸ್ ಇಲಾಖೆ ಮುಖ್ಯಸ್ಥರೊಂದಿಗೆ ಸಭೆ ನಡೆಸಿ ಇಂಥ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಬೇಕು. ಸರಕಾರದ ಸಚಿವರು ತನಿಖೆಯ ದಾರಿ ತಪ್ಪಿಸುವಂತೆ ಹೇಳಿಕೆ ನೀಡಬಾರದು ಎಂದೂ ಅವರು ಆಗ್ರಹಿಸಿದ್ದಾರೆ.ಕಾಂಗ್ರೆಸ್ ಸರಕಾರದ ಅತಿಯಾದ ತುಷ್ಟೀಕರಣ ನೀತಿಯಿಂದ ಲವ್ ಜಿಹಾದ್ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು