LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಮಕ್ಕಳ ನಾಪತ್ತೆ ಪ್ರಕರಣ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಕ್ಕಳ ನಾಪತ್ತೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಪ್ರಕರಣಗಳು ವರ್ಷದಿಂದ ವರ್ಷಕ್ಕೆ ಏರಿಕೆಯಾಗುತ್ತಿವೆ. ಕೊರೊನಾ ಬಳಿಕ ಮಕ್ಕಳು ಚಿಕ್ಕಪುಟ್ಟ ಕಾರಣಗಳಿಗೂ ಮನೆ ಬಿಟ್ಟು ಹೋಗುತ್ತಿದ್ದಾರೆ.

ತಂದೆ ಟಿವಿ ರಿಮೋಟ್ ನೀಡಿಲ್ಲ, ಶಾಲೆಯಲ್ಲಿ ಒಳ್ಳೆಯ ಮಾಕ್ರ್ಸ್ ಬಂದಿಲ್ಲ, ತಂದೆ-ತಾಯಿ ಜಗಳ ಕೌಟುಂಬಿಕ ಕಿರಿಕಿರಿಗೆ ಮಕ್ಕಳು ಮನೆ ಬಿಟ್ಟು ಹೋಗುವಂತಹ ನಿರ್ಧಾರಗಳನ್ನು ಮಾಡುತ್ತಿದ್ದಾರೆ. ಇದು ವರ್ಷದಿಂದ ವರ್ಷಕ್ಕೆ ಏರಿಕೆಯಾಗುತ್ತಿದೆ ಎಂದು ಚೈಲ್ಡ್ ರೈಟ್ ಸಂಸ್ಥೆ ವರದಿ ಬಿಡುಗಡೆ ಮಾಡಿದೆ.

ಕಳೆದ ಒಂದು ವರ್ಷದಲ್ಲಿ ಮಕ್ಕಳು ಕಾಣೆಯಾಗುತ್ತಿರುವ ಪ್ರಕರಣಗಳು ಶೇ 34% ರಷ್ಟು ಏರಿಕೆಯಾಗಿದೆ. 2020ರಲ್ಲಿ ನಾಪತ್ತೆಯಾಗಿದ್ದ 421 ಗಂಡು, 1136 ಹೆಣ್ಣು ಮಕ್ಕಳ ಪೈಕಿ 21 ಗಂಡು, 37 ಹೆಣ್ಣು ಮಕ್ಕಳು ಇನ್ನೂ ಪತ್ತೆ ಮಾಡಲು ಸಾಧ್ಯವಾಗಿಲ್ಲ. 2021 ರಲ್ಲಿ 488 ಗಂಡು, 1630 ಹೆಣ್ಣುಮಕ್ಕಳ ಪೈಕಿ 28 ಗಂಡು, 64 ಹೆಣ್ಣು ಮಕ್ಕಳ ಪತ್ತೆ ಇನ್ನೂ ಆಗಿಲ್ಲ.

2022 ಹಾಗೂ 23 ರಲ್ಲಿ ನಾಪತ್ತೆಯಾಗಿರುವ 5,144 ಮಕ್ಕಳ ಪೈಕಿ 934 ಮಕ್ಕಳನ್ನ ಇನ್ನಷ್ಟೇ ಪತ್ತೆ ಹಚ್ಚಬೇಕಾಗಿದೆ. ಈ ಮೂಲಕ 347 ಗಂಡು ಹಾಗೂ 853 ಹೆಣ್ಣು ಮಕ್ಕಳು ಸೇರಿ ಒಟ್ಟು 1200 ನಾಪತ್ತೆ ಪ್ರಕರಣಗಳಲ್ಲಿ ಮಕ್ಕಳನ್ನು ಇನ್ನಷ್ಟೇ ಪತ್ತೆಹಚ್ಚಬೇಕಾಗಿದೆ.
ಮಕ್ಕಳ ನಾಪತ್ತೆಗೆ ಕೌಟುಂಬಿಕ ಒತ್ತಡವೇ ಕಾರಣ ಎಂದು ಚೈಲ್ಡ್ ರೈಟ್ ಸಂಸ್ಥೆ ತಿಳಿಸಿದೆ. ಫ್ಯಾಮಿಲಿ, ಅಕಾಡೆಮಿಕ್ ಪ್ರೆಶರ್ ತಾಳಲಾರದೇ ಮನೆ ಬಿಟ್ಟು ಹೋಗಲು ಮಕ್ಕಳು ನಿರ್ಧರಿಸುತ್ತಿದ್ದಾರೆ.

ಕೋವಿಡ್ ನಂತರ ಅಕಾಡೆಮಿಕ್ ಪ್ರೆಶರ್ ನಿಂದ ಹೆದರಿ ಹೋಗಿರುವ ಮಕ್ಕಳು, ಮನೆಯಲ್ಲೂ ಅತ್ಯುತ್ತಮ ಮಾಕ್ರ್ಸ್ ಪಡೆಯುವಂತೆ ಒತ್ತಡ ಕೇಳಿ ಬರ್ತಿದೆ. ಮನೆಯಲ್ಲಿ ಮಕ್ಕಳ ಜೊತೆ ಸಮಯ ಕಳೆಯುವುದನ್ನು ಪೋಷಕರು ಕಡಿಮೆ ಮಾಡಿದ್ದಾರೆ. ಮನಸ್ಸಿನ ದುಗುಡ ಹೇಳಿಕೊಳ್ಳಲಾರದೆ ಮಕ್ಕಳಿಗೆ ಒತ್ತಡ ಹೆಚ್ಚಳವಾಗಿದೆ.

ಇದರಿಂದ ತಪ್ಪಿಸಿಕೊಳ್ಳಲು ಮಕ್ಕಳು ಮನೆ ಬಿಟ್ಟು ಹೋಗುತ್ತಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಮಕ್ಕಳ ಮಿಸ್ಸಿಂಗ್ ಕೇಸ್ ದ್ವಿಗುಣವಾಗಿದೆ. ಮಿಸ್ಸಿಂಗ್ ಮಾತ್ರವಲ್ಲ ಮಕ್ಕಳ ಟ್ರೇಸಿಂಗ್ ಕೂಡ ಕಷ್ಟವಾಗಿದೆ. 100% ಟ್ರೇಸಿಂಗ್ ಪೈಕಿ ಕೇವಲ 85% ಮಕ್ಕಳು ಮಾತ್ರ ಪತ್ತೆಯಾಗಿದ್ದು ಇನ್ನುಳಿದ ಮಕ್ಕಳು ನಾಪತ್ತೆ. ಕಳೆದ ವರ್ಷ ಇದರ ಸಂಖ್ಯೆ ಕೂಡ ಶೇಕಾಡ 58% ಏರಿಕೆಯಾಗಿದೆ.

ಒಟ್ಟಿನಲ್ಲಿ ಮಕ್ಕಳು ಕಾಣೆಯಾಗುವ ಪ್ರಕರಣ ಏರಿಕೆಯಾಗುತ್ತಿದ್ದು, ಒಂದು ಸಲ ಮನೆ ಬಿಟ್ಟು ಹೋಗುವ ಮಕ್ಕಳಿಗೆ ಅಭ್ಯಾಸವಾದ್ರೆ ಇದನ್ನ ಪದೇ ಪದೇ ಮಾಡ್ತಾನೇ ಇರ್ತಾರೆ. ಇದರಿಂದ ಅಪಾಯದ ಅರಿವು ಎದುರಾಗುವ ವರೆಗೂ ಈ ಪ್ರಯತ್ನ ಮಕ್ಕಳು ಮಾಡ್ತಾನೇ ಇದ್ದು ಈ ಅಭ್ಯಾಸ ತಪ್ಪಿಸುವ ಕಡೆ ಪೋಷಕರು ಗಮನ ಹರಿಸಬೇಕಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು