LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ʼಹಲವರ ವಿರೋಧದ ನಡುವೆಯೇ ಜಾತಿಗಣತಿ ಆರಂಭʼ

ಬೆAಗಳೂರು: ಹಲವು ಸಮುದಾಯಗಳ ವಿರೋಧ, ಅಸಮಾಧಾನ, ಆಕ್ಷೇಪ, ಆತಂಕ, ಗೊಂದಲದ ನಡುವೆಯೇ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಇಂದಿನಿAದ ಪ್ರಾರಂಭವಾಗಲಿದೆ.

ರಾಜ್ಯದ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನಾಡಿನ ೭ ಕೋಟಿ ಜನರ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆಗೆ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದೆ. ಇಂದಿನಿAದ ಅಕ್ಟೋಬರ್ ೭ರವರೆಗೆ ಗಣತಿದಾರರು ಮನೆ ಮನೆಗೆ ಭೇಟಿ ನೀಡಿ ೭ ಕೋಟಿ ಕನ್ನಡಿಗರಿಂದ ಎಲ್ಲಾ ಮಾಹಿತಿಗಳನ್ನು ಸಂಗ್ರಹಿಸಲಿದ್ದಾರೆ. ಇಂದಿನಿAದ ಆರಂಭವಾಗಲಿರುವ ಜಾತಿ ಗಣತಿಗೆ ಹಿಂದುಳಿದ ವರ್ಗಗಳ ಆಯೋಗ ೧.೭೫ ಲಕ್ಷ ಶಿಕ್ಷಕರನ್ನು ಬಳಸಿಕೊಳ್ಳಲಿದ್ದು, ಗಣತಿಗೆ ನಿಯೋಜಿತರಾಗಿರುವ ಶಿಕ್ಷಕರಿಗೆ ಗಣತಿ ಕಾರ್ಯವನ್ನು ಯಾವ ರೀತಿ ನಡೆಸಬೇಕು, ಯಾವೆಲ್ಲಾ ಮಾಹಿತಿಗಳನ್ನು ಸಂಗ್ರಹಿಸಬೇಕು ಎಂಬ ಬಗ್ಗೆ ಈಗಾಗಲೇ ತರಬೇತಿಯನ್ನು ನೀಡಿದೆ.

ಇಂದಿನಿAದ ಮನೆ ಮನೆಗೆ ತೆರಳುವ ಗಣತಿದಾರರು ಹಿಂದುಳಿದ ವರ್ಗ ಈಗಾಗಲೇ ಸಿದ್ಧಪಡಿಸಿರುವ ೬೦ ಪ್ರಶ್ನೆಗಳನ್ನು ಕೇಳಿ, ಆ ಮಾಹಿತಿಗಳನ್ನು ದಾಖಲು ಮಾಡಿಕೊಳ್ಳಲಾಗುತ್ತದೆ. ಕ್ರಿಶ್ಚಿಯನ್ ಉಪಜಾತಿಗಳ ಹೆಸರನ್ನು ನಮೂದಿಸುವ ಕುರಿತು ಭುಗಿಲೆದ್ದಿದ್ದ ವಿರೋಧ ಹಿನ್ನೆಲೆ ೩೩ ಜಾತಿಗಳನ್ನ ಸರ್ಕಾರದ ಸಲಹೆ ಮೇರೆಗೆ ಆಯೋಗ ಕೈ ಬಿಟ್ಟಿದೆ. ಕ್ರಿಶ್ಚಿಯನ್ ಉಪಜಾತಿಗಳ ವಿಚಾರಕ್ಕೆ ಬಿಜೆಪಿ ತೀವ್ರವಾಗಿ ವಿರೋಧ ವ್ಯಕ್ತಪಡಿಸಿತ್ತು. ಸಚಿವರು ಕೂಡ ಆಕ್ಷೇಪ ವ್ಯಕ್ತಪಡಿಸಿದ್ದರು. ಅಲ್ಲದೆ ರಾಜ್ಯಪಾಲರು ಕೂಡ ಸರ್ಕಾರಕ್ಕೆ ಪತ್ರ ಬರೆದಿದ್ದರು. ಈ ಎಲ್ಲ ಕಾರಣದಿಂದ ಇದೀಗ ಗೊಂದಲಕ್ಕೆ ಕಾರಣವಾದ ಕ್ರಿಶ್ಚಿಯನ್ ಉಪಜಾತಿಗಳನ್ನ ಕೈಬಿಡಲಾಗಿದೆ. ಈ ಮೂಲಕ ಕ್ರಿಶ್ಚಿಯನ್ ಉಪ ಜಾತಿ ನಮೂದಿನ ಕುರಿತಂತೆ ಎದ್ದಿರುವ ವಿವಾದಕ್ಕೆ ಸರ್ಕಾರ ತೆರೆ ಎಳೆಯುವ ಪ್ರಯತ್ನ ಮಾಡಿದೆ.

ಜನರಿಗೆ ಇಚ್ಚೆ ಇದ್ದರೆ ಪಟ್ಟಿಯಿಂದ ಕೈಬಿಟ್ಟಿರೋ ಧರ್ಮ ಮತ್ತು ಜಾತಿ ಹೆಸರು ಬರೆಸಬಹುದು ಎಂದು ಆಯೋಗ ಸ್ಪಷ್ಟಪಡಿಸಿದೆ. ಇನ್ನು ಬೆಂಗಳೂರಿನಲ್ಲಿ ೨-೩ ದಿನ ತಡವಾಗಿ ಸಮೀಕ್ಷೆ ಪ್ರಾರಂಭವಾಗಲಿದೆ. ಜಿಬಿಎ ಆಡಳಿತ ಬಂದ ಹಿನ್ನೆಲೆ ಮತ್ತು ತರಬೇತಿ ತಡವಾಗಿ ಆಗಿರುವುದರಿಂದ ೨-೩ ದಿನ ತಡವಾಗಿ ಬೆಂಗಳೂರಿನಲ್ಲಿ ಸಮೀಕ್ಷೆ ಪ್ರಾರಂಭ ಆಗಲಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು