LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಹೆಚ್ಚಿನ ಲಾಭಾಂಶ ಆಸೆ: ವಂಚಕರ ಸೆರೆ

ಬೆಂಗಳೂರು: ಹೆಚ್ಚಿನ ಲಾಭಾಂಶ ಆಸೆ ಹುಟ್ಟಿಸಿ ನಂಬಿಕೆ ಗಳಿಸಿ ಸಾರ್ವಜನಿಕರಿಂದ ಲಕ್ಷಾಂತರ ಹಣ ಹೂಡಿಕೆ ಮಾಡಿಸಿಕೊಂಡು ವಂಚಿಸಿದ ಗ್ಯಾಂಗ್ ಅನ್ನು ಕಾಟನ್ ಪೇಟೆ ಪೊಲೀಸರು ಬಂಧಿಸಿದ್ದಾರೆ.

ಪ್ರತಾಪ್ ರೆಡ್ಡಿ, ಒಬಳೇಶ್, ಮಣಿ ಮತ್ತು ಗೋಪಿ ಎಂಬುವರೇ ಬಂಧಿತ ಆರೋಪಿಗಳಾಗಿದ್ದಾರೆ. ಆರೋಪಿಗಳು ಕೆ.ಆರ್.ಪುರದಲ್ಲಿ ಎಸ್‍ಫೈಎಸ್ ಎಂಬ ಕಂಪನಿಯನ್ನು ಶುರುಮಾಡಿದ್ದರು. ನಮ್ಮ ಕಂಪನಿಯಲ್ಲಿ ಹೂಡಿಕೆ ಮಾಡಿದರೇ ಹೆಚ್ಚಿನ ಲಾಭ ದೊರೆಯುತ್ತದೆ ಎಂದು ನಂಬಿಸಿ ಆಂಧ್ರ ಪ್ರದೇಶಮತ್ತು ಕರ್ನಾಟಕದ ಹಲವರನ್ನು ವಂಚಿಸಿದ್ದರು.

ಒಂದು ಲಕ್ಷ ಹೂಡಿಕೆ ಮಾಡಿದರೇ ತಿಂಗಳಿಗೆ 19 ಪರ್ಸೆಂಟ್ ಲಾಭ ಕೊಡುವುದಾಗಿ ನಂಬಿಸಿದ್ದರು. ಅದರಂತೆ ಪ್ರಾರಂಭದಲ್ಲಿ ಹಣ ವಾಪಸ್ಸು ಕೊಟ್ಟಿದ್ದಾರೆ. ನಂತರ ಹಣವನ್ನು ಕೊಡದೆ, ನಿಮ್ಮ ಹಣವನ್ನು ಹರಿಯಾಣದಲ್ಲಿ ಹೂಡಿಕೆ ಮಾಡಿದ್ದೇವೆ, ಅಲ್ಲಿ ಲಾಭ ಬಂದಮೇಲೆ ಕೊಡುವುದಾಗಿ ಹೂಡಿಕೆದಾರರಿಗೆ ಹೇಳಿದ್ದರು. ಆದರೆ ಸುಮಾರು ದಿನಗಳು ಕಾಯ್ದರು ಹಣ ನೀಡಲಿಲ್ಲ.

ಇದರಿಂದ ರೋಸಿಹೋದ ಆಂಧ್ರ ಪ್ರದೇಶ ಮೂಲದ ಹೂಡಿಕೆದಾರ ಸಂದಡಿ ನರಸಿಮ್ಮ ರೆಡ್ಡಿ ಎಂಬುವವರು ಕಾಟನ್ ಪೇಟೆಗೆ ಪೆÇಲೀಸ್ ಠಾಣೆಗೆ ದೂರು ನೀಡಿದರು. ದೂರು ದಾಖಲಿಸಿಕೊಂಡು ಪೊಲೀಸರು ಪ್ರಕರಣದ ತನಿಖೆ ಆರಂಭಿಸಿದಾಗ ನಾಲ್ಕು ಸಾವಿರಕ್ಕೂ ಹೆಚ್ಚು ಜನರು ಹೂಡಿಕೆ ಮಾಡಿರುವುದು ಬೆಳಕಿಗೆ ಬಂದಿದೆ. ಒಟ್ಟು ನಾಲ್ಕು ಬ್ಯಾಂಕ್ ಅಕೌಂಟ್‍ಗಳ ಮೂಲಕ 30 ಕೋಟಿ ರೂ. ವ್ಯವಹಾರವಾಗಿರುವುದು ಪತ್ತೆಯಾಗಿದೆ. ಸದ್ಯ ಯಾವ ಯಾವ ಅಕೌಂಟ್‍ಗೆ ಹಣ ಹೋಗಿದೆ ಎಂದು ಪೊಲೀಸರು ಪರಿಶೀಲನೆ ಮಾಡುತ್ತಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು